ಯಶವಂತಪುರ – ಕಾರವಾರ ನಡುವೆ ವಿಶೇಷ ಎಕ್ಸ್​ಪ್ರೆಸ್ ರೈಲು: ಇಲ್ಲಿದೆ ವೇಳಾಪಟ್ಟಿ, ನಿಲುಗಡೆ ಇತ್ಯಾದಿ ವಿವರ

Yeshwantpur Karwar Special Express train: ನೈಋತ್ಯ ರೈಲ್ವೇಯು ಕ್ರಿಸ್ಮಸ್ ಮತ್ತು ಹೊಸ ವರ್ಷ ಪ್ರಯುಕ್ತ ಬೆಂಗಳೂರಿನ ಯಶವಂತಪುರ ಮತ್ತು ಕಾರವಾರ ಮಧ್ಯೆ ವಿಶೇಷ ಎಕ್ಸ್​ಪ್ರೆಸ್ ರೈಲು ಘೋಷಣೆ ಮಾಡಿದೆ. ಇದರಿಂದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಬೆಂಗಳೂರು ನಡುವಣ ಸಂಚಾರ ಸುಗಮವಾಗಲಿದೆ. ರೈಲು ವೇಳಾಪಟ್ಟಿ, ನಿಲುಗಡೆ ವಿವರ ಇಲ್ಲಿದೆ.

ಯಶವಂತಪುರ – ಕಾರವಾರ ನಡುವೆ ವಿಶೇಷ ಎಕ್ಸ್​ಪ್ರೆಸ್ ರೈಲು: ಇಲ್ಲಿದೆ ವೇಳಾಪಟ್ಟಿ, ನಿಲುಗಡೆ ಇತ್ಯಾದಿ ವಿವರ
ಯಶವಂತಪುರ – ಕಾರವಾರ ನಡುವೆ ವಿಶೇಷ ಎಕ್ಸ್​ಪ್ರೆಸ್ ರೈಲು (ಸಾಂದರ್ಭಿಕ ಚಿತ್ರ)

Updated on: Dec 06, 2025 | 9:48 AM

ಬೆಂಗಳೂರು, ಡಿಸೆಂಬರ್ 6: ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ರಜೆ ಸೀಸನ್ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ನೈಋತ್ಯ ರೈಲ್ವೆ (South Western Railway) ಯಶವಂತಪುರ – ಕಾರವಾರ – ಯಶವಂತಪುರ ಮಾರ್ಗದಲ್ಲಿ ವಿಶೇಷ ರೈಲು ಸಂಚಾರ ಘೋಷಿಸಿದೆ. ಡಿಸೆಂಬರ್ 24 ರಿಂದ 28 ರವರೆಗೆ ನಾಲ್ಕು ದಿನಗಳಲ್ಲಿ ಎರಡೂ ಕಡೆಗೆ ರೈಲುಗಳು ಸಂಚರಿಸಲಿವೆ.

ಯಶವಂತಪುರ – ಕಾರವಾರ ವಿಶೇಷ ಎಕ್ಸ್​​ಪ್ರೆಸ್ ರೈಲು ವೇಳಾಪಟ್ಟಿ

ರೈಲು ಸಂಖ್ಯೆ 06267 ಯಶವಂತಪುರದಿಂದ ಕಾರವಾರಕ್ಕೆ 24.12.2025 ಮತ್ತು 27.12.2025 ರಂದು ಸಂಚರಿಸಲಿದೆ. ಯಶವಂತಪುರದಿಂದ ಮಧ್ಯಾಹ್ನ 12 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 6.10ಕ್ಕೆ ತಲುಪಲಿದೆ.

ರೈಲು ಸಂಖ್ಯೆ 06268 ಕಾರವಾರದಿಂದ ಯಶವಂತಪುರಕ್ಕೆ 25.12.2025 ಮತ್ತು 28.12.2025 ರಂದು ಸಂಚಾರ ಮಾಡಲಿದೆ. ಕಾರವಾರದಿಂದ ಮಧ್ಯಾಹ್ನ 12 ಗಂಟೆಗೆ ಹೊರಟು ಯಶವಂತಪುರಕ್ಕೆ ಮರುದಿನ ಬೆಳಗ್ಗೆ 4.3ಕ್ಕೆ ತಲುಪಲಿದೆ.

ನೈಋತ್ಯ ರೈಲ್ವೆ ಎಕ್ಸ್ ಸಂದೇಶ

ಯಶವಂತಪುರ – ಕಾರವಾರ ವಿಶೇಷ ಎಕ್ಸ್​​ಪ್ರೆಸ್ ರೈಲಿಗೆ ನಿಲುಗಡೆ ಎಲ್ಲೆಲ್ಲಿ?

ಯಶವಂತಪುರ – ಕಾರವಾರ ವಿಶೇಷ ಎಕ್ಸ್​​ಪ್ರೆಸ್ ರೈಲಿಗೆ ಚಿಕ್ಕಬಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಮಣ್ಯ ರೋಡ್, ಕಬಕಪುತ್ತೂರು, ಬಂಟವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ ಮತ್ತು ಅಂಕೋಲ ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ.

ಇದನ್ನೂ ಓದಿ: ಹೊಸ ವರ್ಷಕ್ಕೆ ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ

ಪ್ರಯಾಣಿಕರು ತಮ್ಮ ಟಿಕೆಟ್‌ಗಳನ್ನು IRCTC ವೆಬ್‌ಸೈಟ್, ರೈಲು ನಿಲ್ದಾಣ ಕೌಂಟರ್‌ಗಳು ಅಥವಾ NTES ಆಪ್ ಮೂಲಕ ಪರಿಶೀಲಿಸಿ ಬುಕ್ ಮಾಡಬಹುದು. ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ವೇಳೆ ಸುಗಮ ಪ್ರಯಾಣಕ್ಕಾಗಿ ಈ ವಿಶೇಷ ರೈಲುಗಳು ನೆರವಾಗಲಿವೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ