AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಸ್ಥಾನ ಕಳೆದುಕೊಂಡ ವಿನಯ್ ಕುಲಕರ್ಣಿ: ಧಾರವಾಡ ಕ್ಷೇತ್ರ ಖಾಲಿ, ಮುಂದಿರುವ ಆಯ್ಕೆಗಳೇನು?

ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ್ದ ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ 10 ವರ್ಷಗಳ ಬಳಿಕ ತೀರ್ಪು ನೀಡಿದ್ದು, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಇದೀಗ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಇದರೊಂದಿಗೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಕಳೆದುಕೊಂಡಿದ್ದು, ಧಾರವಾಡ ವಿಧಾನಸಭೆ ಕ್ಷೇತ್ರ ಖಾಲಿಯಾದಂತಾಗಿದೆ. ಹಾಗಾದ್ರೆ, ವಿನಯ್ ಕುಲಕರ್ಣಿ ಕಾನೂನು ಆಯ್ಕೆಗಳೇನು ಎನ್ನುವ ಡಿಟೇಲ್ಸ್ ಇಲ್ಲಿದೆ.

ಶಾಸಕ ಸ್ಥಾನ ಕಳೆದುಕೊಂಡ ವಿನಯ್ ಕುಲಕರ್ಣಿ: ಧಾರವಾಡ ಕ್ಷೇತ್ರ ಖಾಲಿ, ಮುಂದಿರುವ ಆಯ್ಕೆಗಳೇನು?
Vinay Kulkarni
Ramesha M
| Edited By: |

Updated on: Apr 17, 2026 | 5:28 PM

Share

ಬೆಂಗಳೂರು, (ಏಪ್ರಿಲ್ 17): 2016ರಲ್ಲಿ ನಡೆದಿದ್ದ ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ (Yogesh Gowda murder case) ಅಪರಾಧಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ (vinay kulkarni)  ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಇಂದು (ಏಪ್ರಿಲ್ 17) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದರು. ಕಾನೂನು ಪ್ರಕಾರ, ಯಾವುದೇ ಶಾಸಕನ ವಿರುದ್ಧ 2 ವರ್ಷಕ್ಕಿಂತ ಹೆಚ್ಚಿನ ವರ್ಷ ಜೈಲು ಶಿಕ್ಷೆ ಪ್ರಕಟವಾದರೆ ತಕ್ಷಣವೇ ಶಾಸಕ ಸ್ಥಾನ ರದ್ದಾಗುತ್ತದೆ. ಅದರಂತೆ ಇದೀಗ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

ಶಾಸಕ ಸ್ಥಾನ ಕಳೆದುಕೊಂಡ ವಿನಯ್ ಕುಲಕರ್ಣಿ

ಯಾವುದೇ ಜನಪ್ರತಿನಿಧಿಗಳ ವಿರುದ್ಧ 2 ವರ್ಷಕ್ಕಿಂತ ಹೆಚ್ಚಿನ ವರ್ಷ ಜೈಲು ಶಿಕ್ಷೆ ಪ್ರಕಟವಾದರೆ ತಕ್ಷಣ ಅವರ ಶಾಸಕ ಸ್ಥಾನ ರದ್ದಾಗುತ್ತದೆ. ಸದ್ಯ ಯೋಗೇಶ್​ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಈ ಹಿನ್ನೆಲೆ ವಿನಯ್​ ಕುಲಕರ್ಣಿ ಅವರ ಶಾಸಕ ಸ್ಥಾನದಿಂದ ಅನರ್ಹಗೊಳ್ಳುವುದು ಖಚಿತವಾಗಿದೆ.   ಕೋರ್ಟ್ ತನ್ನ ತೀರ್ಪಿನ ಪ್ರತಿಯನ್ನು ಸ್ಪೀಕರ್ ಗೆ ಕಳುಹಿಸಲಿದ್ದು, ಆ ಬಳಿಕ ಸ್ಫೀಕರ್ ಅಧಿಕೃತವಾಗಿ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಿದ್ದಾರೆ.

ಇದನ್ನೂ ಓದಿ: ಯೋಗೇಶ್ ಗೌಡ ಕೊಲೆ ಕೇಸ್: ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ

ಕಾನೂನು ಏನು ಹೇಳುತ್ತೆ?

ಕಾನೂನು ಪ್ರಕಾರ ಶಿಕ್ಷೆ ಪ್ರಕಟವಾದ ದಿನದಿಂದಲೇ ಶಾಸಕ ಸ್ಥಾನದಿಂದ ತಕ್ಷಣವೇ ಅನರ್ಹವಾಗುತ್ತೆ. ‘ಜನಪ್ರತಿನಿಧಿ ಕಾಯ್ದೆ 1951’ರ ಸೆಕ್ಷನ್ 8(3) ರ ಪ್ರಕಾರ, ಯಾವುದೇ ಶಾಸಕರು 2 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಶಿಕ್ಷೆಗೆ ಗುರಿಯಾದರೆ ಅವರು ತಕ್ಷಣವೇ ತಮ್ಮ ಸ್ಥಾನವನ್ನು ಕಳೆದುಕೊಳ್ಳುತ್ತಾರೆ. 2013ರ ‘ಲಿಲಿ ಥಾಮಸ್ ವರ್ಸಸ್ ಯೂನಿಯನ್ ಆಫ್ ಇಂಡಿಯಾ’ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಈ ತೀರ್ಪಿನ ಪ್ರಕಾರ ಮೇಲ್ಮನವಿ ಸಲ್ಲಿಸಲು ನೀಡಲಾಗುತ್ತಿದ್ದ 3 ತಿಂಗಳ ಕಾಲಾವಕಾಶವನ್ನು ರದ್ದುಪಡಿಸಲಾಗಿದೆ. ಹಾಗಾಗಿ, ಶಿಕ್ಷೆಯಾದ ತಕ್ಷಣ ಅನರ್ಹತೆ ಅನ್ವಯವಾಗುತ್ತದೆ.

ಚುನಾವಣೆಗೆ ಸ್ಪರ್ಧಿಸಲು ನಿಷೇಧ

ಇನ್ನು ಜೈಲು ಶಿಕ್ಷೆಯ ಅವಧಿಯನ್ನು ಪೂರೈಸಿದ ನಂತರವೂ ಮುಂದಿನ 6 ವರ್ಷಗಳ ಕಾಲ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲು ಅವರಿಗೆ ಅವಕಾಶವಿರುವುದಿಲ್ಲ. ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆಯಾದ ಕಾರಣ, ಉನ್ನತ ನ್ಯಾಯಾಲಯವು ಶಿಕ್ಷೆಯನ್ನು ರದ್ದುಗೊಳಿಸದ ಹೊರತು ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುವುದು ಅಸಾಧ್ಯ. ಇನ್ನು ಶಾಸಕತ್ವ ಅಧಿಕೃತವಾಗಿ ಅನರ್ಹಗೊಂಡ ತಕ್ಷಣ ಕ್ಷೇತ್ರ ಖಾಲಿಯಾಗಲಿದೆ. ವಿಧಾನಸಭಾ ಸಚಿವಾಲಯದಿಂದ ಕ್ಷೇತ್ರ ‘ಖಾಲಿ’ ಇದೆ ಎಂದು ಘೋಷಣೆಯಾಗಲಿದ್ದು, ಬಳಿಕ ಚುನಾವಣಾ ಆಯೋಗ 6 ತಿಂಗಳ ಒಳಗೆ ಉಪಚುನಾವಣೆಯನ್ನು ನಡೆಸುವ ಸಾಧ್ಯತೆ ಇದೆ.

ಶಿಕ್ಷೆಗೆ ತಡೆ ನೀಡಿದರೆ ಮಾತ್ರ ವಿನಾಯಿತಿ

ಇನ್ನು ಶಿಕ್ಷೆಗೆ ತಡೆ ನೀಡಿದರೆ ಮಾತ್ರ ಇದೆಲ್ಲದರಿಂದ ವಿನಾಯಿತಿ ಸಿಗಲಿದೆ. ಕೇವಲ ಜೈಲು ಶಿಕ್ಷೆಗೆ ತಡೆ ನೀಡಿದರೆ (Stay on sentence) ಸಾಲದು, ಬದಲಿಗೆ ಉನ್ನತ ನ್ಯಾಯಾಲಯವು ಅವರ ಮೇಲಿನ ಅಪರಾಧ ನಿರ್ಣಯಕ್ಕೆ ತಡೆ (Stay on conviction) ನೀಡಿದರೆ ಮಾತ್ರ ಶಾಸಕ ಸ್ಥಾನ ಮತ್ತು ಚುನಾವಣೆಗೆ ಸ್ಪರ್ಧಿಸುವ ಹಕ್ಕು ಪುನಃ ದೊರೆಯುತ್ತದೆ.  ಇನ್ನು ಜೀವಾವಧಿ ಅಂದರೆ 14 ವರ್ಷ ಸೆರೆವಾಸದ ಬಳಿಕ ಸರ್ಕಾರ ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಬಹುದು.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ
ಜಮಖಂಡಿ ಕಾರಾಗೃಹಕ್ಕೆ ಎಡಿಜಿಪಿ ಭೇಟಿ: ಏನೇನೆಲ್ಲ ಪರಿಶೀಲಿಸಿದ್ರು ನೋಡಿ
ಗಾಜಿಯಾಬಾದ್‌ನಲ್ಲಿ ಗುಡಿಸಲುಗಳು ಬೆಂಕಿಗಾಹುತಿ; ಪೆಟಾದಿಂದ ಪ್ರಾಣಿಗಳ ರಕ್ಷಣೆ
ಗಾಜಿಯಾಬಾದ್‌ನಲ್ಲಿ ಗುಡಿಸಲುಗಳು ಬೆಂಕಿಗಾಹುತಿ; ಪೆಟಾದಿಂದ ಪ್ರಾಣಿಗಳ ರಕ್ಷಣೆ
ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್
ಮೈಮೇಲೆ ಸೊಳ್ಳೆ ಪರದೆ ಹಾಕಿಕೊಂಡು ನೈಟ್ ಡ್ಯೂಟಿ ಮಾಡಿದ ಸೆಕ್ಯೂರಿಟಿ ಗಾರ್ಡ್
ಪ್ರಧಾನಿ ಮೋದಿ ಮತ್ತು ನನಗೆ ಇಬ್ರಿಗೂ ‘ಹೆಂಡತಿ’ ಕಾಟ ಇಲ್ಲ : ರಾಹುಲ್ ಗಾಂಧಿ
ಪ್ರಧಾನಿ ಮೋದಿ ಮತ್ತು ನನಗೆ ಇಬ್ರಿಗೂ ‘ಹೆಂಡತಿ’ ಕಾಟ ಇಲ್ಲ : ರಾಹುಲ್ ಗಾಂಧಿ
ಮನೆಗೆ ನುಗ್ಗಿ ಮಂಚದ ಕೆಳಗೆ ಅವಿತು ಕುಳಿತ ಚಿರತೆ; ಹೌಹಾರಿದ ಕುಟುಂಬಸ್ಥರು!
ಮನೆಗೆ ನುಗ್ಗಿ ಮಂಚದ ಕೆಳಗೆ ಅವಿತು ಕುಳಿತ ಚಿರತೆ; ಹೌಹಾರಿದ ಕುಟುಂಬಸ್ಥರು!
ಒಂದೇ ಕುಟುಂಬ 6 ಜನ ಸಜೀವದಹನ; ಶಾಕಿಂಗ್​ ಮಾಹಿತಿ ಬಿಚ್ಚಿಟ್ಟ ಎಸ್​​ಪಿ
ಒಂದೇ ಕುಟುಂಬ 6 ಜನ ಸಜೀವದಹನ; ಶಾಕಿಂಗ್​ ಮಾಹಿತಿ ಬಿಚ್ಚಿಟ್ಟ ಎಸ್​​ಪಿ
ಬೆಂಗಳೂರಿನಲ್ಲಿ ನಿಲ್ಲದ ಡ್ರ್ಯಾಗ್ ರೇಸ್ ಹಾಗೂ ಸ್ಟಂಟ್‌ಗಳ ಹುಚ್ಚಾಟ!
ಬೆಂಗಳೂರಿನಲ್ಲಿ ನಿಲ್ಲದ ಡ್ರ್ಯಾಗ್ ರೇಸ್ ಹಾಗೂ ಸ್ಟಂಟ್‌ಗಳ ಹುಚ್ಚಾಟ!
ದೇವರು ಕೈಗಳನ್ನು ಕೊಟ್ಟಿಲ್ಲ ಎಂಬ ವಿಷಾದವಿಲ್ಲ
ದೇವರು ಕೈಗಳನ್ನು ಕೊಟ್ಟಿಲ್ಲ ಎಂಬ ವಿಷಾದವಿಲ್ಲ
ಸಿದ್ದರಾಮಯ್ಯ ಗಟ್ಟಿಯಾಗಿ ನಿಲ್ಲಬೇಕು, ಆದರೆ ಅವರು ನಿಲ್ಲುತ್ತಿಲ್ಲ
ಸಿದ್ದರಾಮಯ್ಯ ಗಟ್ಟಿಯಾಗಿ ನಿಲ್ಲಬೇಕು, ಆದರೆ ಅವರು ನಿಲ್ಲುತ್ತಿಲ್ಲ
ಮನೆಯೊಳಗೆ ಅವಿತಿತ್ತು 16 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ! ವಿಡಿಯೋ ಇಲ್ಲಿದೆ
ಮನೆಯೊಳಗೆ ಅವಿತಿತ್ತು 16 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ! ವಿಡಿಯೋ ಇಲ್ಲಿದೆ