Sign In

By signing in or creating an account, you agree with Associated Broadcasting Company's Terms & Conditions and Privacy Policy.

Clove Health Benefits: ಲವಂಗದ ಆರೋಗ್ಯಕರ ಪ್ರಯೋಜನದ ಬಗ್ಗೆ ನೀವು ತಿಳಿದರೆ ನಿತ್ಯವೂ ಇದನ್ನು ಸೇವಿಸುತ್ತಿರಾ

ಲವಂಗವು ಬ್ಯಾಕ್ಟೀರಿಯಾವನ್ನು ಕೊಲ್ಲುತ್ತದೆ ಮತ್ತು ಯಕೃತ್ತಿನ ಆರೋಗ್ಯವನ್ನು ಸುಧಾರಿಸುತ್ತದೆ. ಅಲ್ಲದೇ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಕೂಡ ಇದು ಸಹಾಯ ಮಾಡುತ್ತದೆ.

Clove Health Benefits: ಲವಂಗದ ಆರೋಗ್ಯಕರ ಪ್ರಯೋಜನದ ಬಗ್ಗೆ ನೀವು ತಿಳಿದರೆ ನಿತ್ಯವೂ ಇದನ್ನು ಸೇವಿಸುತ್ತಿರಾ
ಲವಂಗ
Follow us
TV9 Web
| Updated By: Digi Tech Desk

Updated on:Jun 28, 2021 | 9:48 AM

ಲವಂಗಗಳು ನಿತ್ಯಹರಿದ್ವರ್ಣ ದಾಲ್ಚಿನ್ನಿ ಮರದಲ್ಲಿನ ಹೂವಿನ ಮೊಗ್ಗುಗಳಾಗಿದ್ದು, ಈ ಮೊಗ್ಗುಗಳನ್ನು ಇನ್ನು ಹೂವಾಗುವ ಮೊದಲೇ ತೆಗೆದು ಒಣಗಿಸಲಾಗುತ್ತದೆ. ಇಂಡೋನೇಷ್ಯಾದ ಮಾಲುಕು ದ್ವೀಪಗಳಲ್ಲಿ ಇದನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ ಮತ್ತು ಲವಂಗವನ್ನು ಮಸಾಲೆ ಪದಾರ್ಥವಾಗಿ ಹೆಚ್ಚಾಗಿ ಬಳಸಲಾಗುತ್ತದೆ. ಲವಂಗ ಎಂಬ ಪದ ಲ್ಯಾಟಿನ್ ಪದದಿಂದ ಹುಟ್ಟಿಕೊಂಡಿದ್ದು, ಇದು ಆಕಾರದಲ್ಲಿ ಉಗುರಿನಂತೆ ಕಾಣುತ್ತದೆ. ಲವಂಗವು ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಇದರಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು, ಕ್ಯಾನ್ಸರ್​ನಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಲವಂಗವು ಬ್ಯಾಕ್ಟೀರಿಯಾವನ್ನು ಕೊಲ್ಲುತ್ತದೆ ಮತ್ತು ಯಕೃತ್ತಿನ ಆರೋಗ್ಯವನ್ನು ಸುಧಾರಿಸುತ್ತದೆ. ಅಲ್ಲದೇ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಕೂಡ ಇದು ಸಹಾಯ ಮಾಡುತ್ತದೆ.

ಲವಂಗ ಸೇವನೆಯಿಂದ ಆಗುವ ಐದು ಪ್ರಯೋಜನಗಳು

1) ಹುಣ್ಣುಗಳನ್ನು ಕಡಿಮೆ ಮಾಡುತ್ತದೆ ಲವಂಗವು ಹೊಟ್ಟೆಯಲ್ಲಿನ ಹುಣ್ಣುಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ ಎಂದು ಅಧ್ಯಯನವು ತಿಳಿಸಿದೆ. ಸಾಮಾನ್ಯವಾಗಿ, ಲೋಳೆಯ ಪದರಗಳು ತೆಳುವಾಗುವುದರಿಂದ ಆ ಭಾಗದಲ್ಲಿ ಹೆಚ್ಚಿನ ಹುಣ್ಣುಗಳು ಉಂಟಾಗುತ್ತವೆ. ಲವಂಗವು ಲೋಳೆಯನ್ನು ದಪ್ಪವಾಗಿಸುತ್ತದೆ. ಲವಂಗದಿಂದ ತಯಾರಿಸಿದ ಎಣ್ಣೆ ಹುಣ್ಣುಗಳ ಬೆಳವಣಿಗೆಯ ಅಪಾಯವನ್ನು ಕಡಿಮೆ ಮಾಡುತ್ತದೆ.

2) ಕ್ಯಾನ್ಸರ್ ತಡೆಗಟ್ಟುತ್ತದೆ ಕೆಲವು ಅಧ್ಯಯನಗಳ ಪ್ರಕಾರ, ಕ್ಯಾನ್ಸರ್​ನಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಲವಂಗ ತಿನ್ನುವ ಅಭ್ಯಾಸ ಮಾಡಿಕೊಳ್ಳಬೇಕು. ಲವಂಗವು ಯುಜೆನಾಲ್ ಅನ್ನು ಹೊಂದಿರುತ್ತದೆ. ಇದು ಬಲವಾದ ಆಂಟಿಕಾರ್ಸಿನೋಜೆನಿಕ್ ಗುಣಗಳನ್ನು ಹೊಂದಿರುತ್ತದೆ ಮತ್ತು ಶ್ವಾಸಕೋಶದ ಕ್ಯಾನ್ಸರ್, ಸ್ತನ ಕ್ಯಾನ್ಸರ್ ಮತ್ತು ಅಂಡಾಶಯದ ಕ್ಯಾನ್ಸರ್ ಅನ್ನು ಅದರ ಆರಂಭಿಕ ಹಂತಗಳಲ್ಲಿಯೇ ನಿಗ್ರಹಿಸಲು ಸಹಾಯ ಮಾಡುತ್ತದೆ.

3) ಹಲ್ಲುನೋವು ನಿವಾರಿಸುತ್ತದೆ ಅಮೇರಿಕನ್ ಡೆಂಟಲ್ ಅಸೋಸಿಯೇಷನ್ ​​ನಡೆಸಿದ ಅಧ್ಯಯನದ ಪ್ರಕಾರ, ಲವಂಗ ಎಣ್ಣೆಯನ್ನು ಹಲ್ಲಿನ ಅರಿವಳಿಕೆ ಎಂದು ಅನುಮೋದಿಸಲಾಗಿದೆ. ಹಲ್ಲು ಮತ್ತು ಒಸಡುಗಳನ್ನು ಆರೋಗ್ಯವಾಗಿಡಲು, ಲವಂಗ ಟೂತ್‌ಪೇಸ್ಟ್‌ ಬಳಸುವುದು ಉತ್ತಮ. ಕೆಲವರು ಹಲ್ಲು ನೋವಾದಾಗ ಲವಂಗವನ್ನು ನೋವಾದ ಭಾಗದಲ್ಲಿ ಇಟ್ಟುಕೊಳ್ಳುತ್ತಾರೆ. ಇದು ನೋವಿನಿಂದ ಮುಕ್ತಿ ನೀಡುತ್ತದೆ.

4) ಯಕೃತ್ತಿನ ಕಾರ್ಯವನ್ನು ಸುಧಾರಿಸುತ್ತದೆ ಯಕೃತ್ತಿಗೆ ಅಥವಾ ಪಿತ್ತಜನಕಾಂಗಕ್ಕೆ ಲವಂಗದಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ. ಪಿತ್ತಜನಕಾಂಗದ ಸಿರೋಸಿಸ್ ಮತ್ತು ಪಿತ್ತಜನಕಾಂಗದ ಕಾಯಿಲೆಗಳನ್ನು ಕಡಿಮೆ ಮಾಡಲು ಲವಂಗ ಸಹಾಯ ಮಾಡುತ್ತದೆ. ಪಿತ್ತಜನಕಾಂಗ ನಮ್ಮ ದೇಹದಲ್ಲಿ ಒಂದು ಪ್ರಮುಖ ಅಂಗವಾಗಿದ್ದು, ಇದು ಕೊಬ್ಬುಗಳನ್ನು ಕಡಿಮೆ ಮಾಡುತ್ತದೆ ಮತ್ತು ಪಿತ್ತಜನಕಾಂಗವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ.

5) ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುತ್ತದೆ ಲವಂಗವು ವಿಟಮಿನ್ ಸಿ, ವಿಟಮಿನ್ ಇ, ಯುಜೆನಾಲ್, ಫ್ಲೇವನೈಡ್​ಗಳು ಮತ್ತು ಗ್ಯಾಲಿಕ್ ಆಮ್ಲದಂತಹ ಹೆಚ್ಚು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನು ಹೊಂದಿದೆ. ಲವಂಗವನ್ನು ಪ್ರತಿದಿನ ಸೇವಿಸಿದರೆ, ಅದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ದೇಹದಲ್ಲಿನ ಹಾನಿಕಾರಕ ಅಂಶಗಳನ್ನು ತೆಗೆದುಹಾಕುತ್ತದೆ.

ಲವಂಗವನ್ನು ಅನೇಕ ಆಹಾರ ಪದಾರ್ಥಗಳಲ್ಲಿ ಸೇರಿಸಬಹುದು ಅಥವಾ ಚಹಾದ ಜತೆಗೆ ಕೂಡ ಲವಂಗವನ್ನು ಬಳಸಬಹುದು. ಆ ಮೂಲಕ ದಿನಕ್ಕೆ ಒಮ್ಮೆಯಾದರೂ ಲವಂಗವನ್ನು ತಿನ್ನುವ ಅಭ್ಯಾಸ ಮಾಡಿಕೊಳ್ಳುವುದು ಉತ್ತಮ.

ಇದನ್ನೂ ಓದಿ:

Health Tips: ನುಗ್ಗೆಕಾಯಿ ಮಾತ್ರವಲ್ಲ, ಸೊಪ್ಪಿನಲ್ಲೂ ಸಾಕಷ್ಟು ಔಷಧೀಯ ಗುಣಗಳು ಅಡಗಿವೆ

Silver Anklets: ಅಂದಕ್ಕಷ್ಟೇ ಬೆಳ್ಳಿ ಗೆಜ್ಜೆ ಸೀಮಿತವಾಗಿಲ್ಲ, ಮಹಿಳೆಯರ ಆರೋಗ್ಯ ಕಾಪಾಡುವ ಗುಣಗಳು ಕಾಲ್ಗೆಜ್ಜೆಯಲ್ಲಿ ಅಡಗಿವೆ

Published On - 9:07 am, Mon, 28 June 21

ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ
ಜೀಪ್​ ಅಡ್ಡಗಟ್ಟಿದ ಹುಲಿರಾಯ: ಆತಂಕದಿಂದ ಚಿರಾಡಿದ ಪ್ರವಾಸಿಗರು!
ಜೀಪ್​ ಅಡ್ಡಗಟ್ಟಿದ ಹುಲಿರಾಯ: ಆತಂಕದಿಂದ ಚಿರಾಡಿದ ಪ್ರವಾಸಿಗರು!
ಕಾರಿನ ಮೇಲೆ ಕಾಡಾನೆ ದಾಳಿ ಯತ್ನ, ಎದೆ ಝಲ್​ ಎನ್ನಿಸುವ ವಿಡಿಯೋ ವೈರಲ್
ಕಾರಿನ ಮೇಲೆ ಕಾಡಾನೆ ದಾಳಿ ಯತ್ನ, ಎದೆ ಝಲ್​ ಎನ್ನಿಸುವ ವಿಡಿಯೋ ವೈರಲ್
ಮದುವೆ ಯಾಕಾಗಬೇಕು? ರವಿಚಂದ್ರನ್ ಮಾತಿಗೆ ಚಪ್ಪಾಳೆಯ ಸುರಿಮಳೆ
ಮದುವೆ ಯಾಕಾಗಬೇಕು? ರವಿಚಂದ್ರನ್ ಮಾತಿಗೆ ಚಪ್ಪಾಳೆಯ ಸುರಿಮಳೆ