AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸಮಾವೇಶದಲ್ಲಿ ಅಮಿತ್ ಶಾ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಯುವ ಬಿಜೆಪಿ ನಾಯಕ ತೇಜಸ್ವೀ ಸೂರ್ಯ

ಬಿಜೆಪಿ ಸಮಾವೇಶದಲ್ಲಿ ಅಮಿತ್ ಶಾ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಯುವ ಬಿಜೆಪಿ ನಾಯಕ ತೇಜಸ್ವೀ ಸೂರ್ಯ

ಅರುಣ್​ ಕುಮಾರ್​ ಬೆಳ್ಳಿ
|

Updated on:Apr 02, 2024 | 3:04 PM

Share

ಅಮಿತ್ ಶಾ ದೀಪ ಹೊತ್ತಿಸಿ ಸಮಾವೇಶಕ್ಕೆ ಚಾಲನೆ ನೀಡುವಾಗ ವೇದಿಕೆಯ ಮೇಲೆ ಮಾಜಿ ಸಿಎಂ ಯಡಿಯೂರಪ್ಪ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ ಕೆ ಸುಧಾಕರ್, ಹಿರಿಯ ನಾಯಕ ಡಿವಿ ಸದಾನಂದಗೌಡ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮೊದಲಾದವರಿದ್ದರು.

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ತೇಜಸ್ವೀ ಸೂರ್ಯ (Tejasvi Surya) ನಗರದಲ್ಲಿ ಇಂದು ಅಯೋಜಿಸಲಾಗಿದ್ದ ಐದು ಲೋಕಸಭಾ ಕ್ಷೇತ್ರ ಶಕ್ತಿ ಕೇಂದ್ರಗಳ ಪ್ರಮುಖರ ಸಮಾವೇಶವನ್ನು ಉದ್ಘಾಟಿಸಲು ವೇದಿಕೆಗೆ ಅಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರ ಪಾದ ಮುಟ್ಟಿ ನಮಸ್ಕರಿಸಿ ಆಶೀರ್ವಾದ (sought blessings) ಪಡೆದರು. ಅಮಿತ್ ಶಾ ದೀಪ ಹೊತ್ತಿಸಿ ಸಮಾವೇಶಕ್ಕೆ ಚಾಲನೆ ನೀಡುವಾಗ ವೇದಿಕೆಯ ಮೇಲೆ ಮಾಜಿ ಸಿಎಂ ಯಡಿಯೂರಪ್ಪ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ ಕೆ ಸುಧಾಕರ್, ಹಿರಿಯ ನಾಯಕ ಡಿವಿ ಸದಾನಂದಗೌಡ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ವಿರೋಧ ಪಕ್ಷದ ನಾಯಕ ಆರ್ ಅಶೋಕ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಬೆಂಗಳೂರು ಕೇಂದ್ರ ಲೋಕಸಭಾ ಅಭ್ಯರ್ಥಿ ಪಿ ಸಿ ಮೋಹನ, ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಮತ್ತು ಇನ್ನೂ ಹಲವಾರು ನಾಯಕರು ಇದ್ದರು. ಸಿಟಿ ರವಿ ವೇದಿಕೆಯ ಮುಂಭಾಗಕ್ಕೆ ಬರಲು ಇಚ್ಚಿಸಲಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Amit Shah in Karnataka: ಈಶ್ವರಪ್ಪಗೆ ಅಮಿತ್ ಶಾ ಕರೆ, ದೆಹಲಿಗೆ ಬರುವಂತೆ ಬುಲಾವ್

Published on: Apr 02, 2024 02:34 PM