ಹುಬ್ಬಳ್ಳಿ: ಆನ್ಲೈನ್ ಗೇಮ್ ವ್ಯಾಮೋಹಕ್ಕೆ ಸಿಲುಕಿ ಯುವಕ ಆತ್ಮಹತ್ಯೆಗೆ ಶರಣು
ಇತ್ತೀಚಿಗೆ ಆನ್ಲೈನ್ ಗೇಮ್ ವ್ಯಾಮೋಹ ಹೆಚ್ಚಾಗಿದೆ. ಆನ್ಲೈನ್ ಗೇಮ್ ವ್ಯಾಮೋಹಕ್ಕೆ ಸಿಲುಕಿ ಅದೆಷ್ಟೋ ಯುವಕ, ಯುವತಿಯರು ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿ ಆನ್ಲೈನ್ ಗೇಮ್ ವ್ಯಾಮೋಹಕ್ಕೆ ಸಿಲುಕಿ, ಹಣ ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಹುಬ್ಬಳ್ಳಿ, ಜುಲೈ 10: ಆನ್ಲೈನ್ ಗೇಮ್ (Online Game) ವ್ಯಾಮೋಹಕ್ಕೆ ಸಿಲುಕಿ ಯುವಕ ಪ್ರಾಣ ಕಳೆದುಕೊಂಡಿದ್ದಾನೆ. ರಾಕೇಶ್ ಶ್ರೀಶೈಲ್ ಜಂಬಲದಿನ್ನಿ (21) ಮೃತ ದರ್ದೈವಿ. ರಾಕೇಶ್ ಶ್ರೀಶೈಲ್ ಜಂಬಲದಿನ್ನಿ ಬಿವಿಬಿ ಕಾಲೇಜಿನಲ್ಲಿ (BVB College) ಬಿಇ 6ನೇ ಸೆಮಿಸ್ಟರ್ನಲ್ಲಿ ಓದುತ್ತಿದ್ದನು. ಶಿರಡಿ ನಗರದಲ್ಲಿರುವ ವಸತಿ ನಿಲಯದಲ್ಲಿ ನೆಲಸಿದ್ದನು. ರಾಕೇಶ್ ಪ್ರತಿದಿನವೂ ಆನ್ಲೈನ್ ಗೇಮ್ ಆಡುತ್ತಿದ್ದನು. ಆನ್ಲೈನ್ ಗೇಮ್ನಿಂದ ಹಣ ಕಳೆದುಕೊಂಡಿದ್ದ ರಾಕೇಶ್ ಮನನೊಂದು ತಾನು ಇದ್ದ ಕೋಣೆಯ ಫ್ಯಾನ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಸತಿ ನಿಲಯಕ್ಕೆ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಗ್ಗಕ್ಕೆ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ
ತುಮಕೂರು: ವಿದ್ಯುತ್ ಮಗ್ಗಕ್ಕೆ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿಪಟೂರಿನ ಹಳೆಪಾಳ್ಯದಲ್ಲಿ ನಡೆದಿದೆ. ತಿಪಟೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೆರೆಯಲ್ಲಿ ಶವ ಪತ್ತೆ
ಕೋಲಾರ: ನರಸಾಪುರ ಕೆರೆಯಲ್ಲಿ ಶವ ಪತ್ತೆಯಾಗಿದೆ. ಕೃಷ್ಣಾಪುರ ಗ್ರಾಮದ ಅಮರೇಶ್ ಎಂದು ಗುರುತು ಪತ್ತೆ ಹಚ್ಚಲಾಗಿದೆ. ದುಷ್ಕರ್ಮಿಗಳು ಅಮರೇಶ್ ಅವರನ್ನು ಕೊಲೆ ಮಾಡಿ ಕೊಲೆ ಮಾಡಿ ಕೆರೆಯಲ್ಲಿ ಬೀಸಾಡಿರುವ ಶಂಕೆ ವ್ಯಕ್ತವಾಗಿದೆ. ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ: ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಬಾಲಕನ ಮೇಲೆ ಹಲ್ಲೆ
ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರಣ
ಬೆಳಗಾವಿ: ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಖಾನಾಪುರ-ಜಾಂಬೋಟಿ ರಸ್ತೆಯಲ್ಲಿ ನಡೆದಿದೆ. ಶಂಕರ್ ಗೋಮನಾಚೆ (25), ಆಶೀಶ್ ಪಾಟೀಲ್ (26) ಮೃತ ದುರ್ದೈವಿಗಳು. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಖಾನಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಲ್ವರು ಯುವಕರು ಕಾರಿನಲ್ಲಿ ಬೆಳಗಾವಿಯಿಂದ ಗೋವಾಕ್ಕೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ