AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tragedy: ಬೆಂಗಳೂರಿನಲ್ಲಿ ಮನೆ ಮೇಲೆ ರಾಷ್ಟ್ರಧ್ವಜ ಕಟ್ಟಲು ಹೋಗಿ ಪ್ರಾಣ ಕಳೆದುಕೊಂಡ ಸುಳ್ಯದ ಯುವ ಟೆಕ್ಕಿ

ವೃತ್ತಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ವಿಶುಕುಮಾರ್ ನಿನ್ನೆ ಮಧ್ಯಾಹ್ನ 1.45 ರಲ್ಲಿ ಮನೆಯ ಮೇಲೆ ರಾಷ್ಟ್ರಧ್ವಜ ಕಟ್ಟಲು ಹೋಗಿದ್ದಾಗ ಎರಡನೇ ಮಹಡಿಯಿಂದ ಬಿದ್ದಿದ್ದರು. ಈ ವೇಳೆ ಆಯತಪ್ಪಿ 30 ಅಡಿ ಮೇಲಿಂದ ಕೆಳಗೆ ಬಿದ್ದಿದ್ದ ವಿಶುಕುಮಾರ್ ತಲೆಗೆ ಗಂಭೀರ ಗಾಯಗಳಾಗಿದ್ದವು.

Tragedy: ಬೆಂಗಳೂರಿನಲ್ಲಿ ಮನೆ ಮೇಲೆ ರಾಷ್ಟ್ರಧ್ವಜ ಕಟ್ಟಲು ಹೋಗಿ ಪ್ರಾಣ ಕಳೆದುಕೊಂಡ ಸುಳ್ಯದ ಯುವ ಟೆಕ್ಕಿ
HBR​​ ಲೇಔಟ್​​ನಲ್ಲಿ ಧ್ವಜ ಕಟ್ಟುವಾಗ ಬಿದ್ದು ಗಾಯಗೊಂಡಿದ್ದ ಯುವ ಟೆಕ್ಕಿ ಸಾವು
TV9 Web
| Edited By: ಸಾಧು ಶ್ರೀನಾಥ್​|

Updated on:Aug 15, 2022 | 2:47 PM

Share

ಬೆಂಗಳೂರು: ಬೆಂಗಳೂರಿನ HBR​​ ಲೇಔಟ್​​ನಲ್ಲಿ (HBR Layout Bangalore) ನಿನ್ನೆ ಧ್ವಜ ಕಟ್ಟುವಾಗ ಬಿದ್ದು ಗಾಯಗೊಂಡಿದ್ದ ವ್ಯಕ್ತಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಸುಳ್ಯ ಮೂಲದ ವಿಶುಕುಮಾರ್ (33) ಮೃತ ದುರ್ದೈವಿ. ವಿಶುಕುಮಾರ್ (sullia vishu kumar) ನಿನ್ನೆ ಟೆರಸ್ ಮೇಲೆ ಧ್ವಜ ಕಟ್ಟುತ್ತಿದ್ದಾಗ ಬಿದ್ದಿದ್ದ. ಆತನನ್ನು ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ (Azadi Ka Amrit Mahotsav).

ವೃತ್ತಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ವಿಶುಕುಮಾರ್ ನಿನ್ನೆ ಭಾನುವಾರ ಮಧ್ಯಾಹ್ನ 1.45 ರಲ್ಲಿ ಮನೆಯ ಮೇಲೆ ರಾಷ್ಟ್ರಧ್ವಜ ಕಟ್ಟಲು ಹೋಗಿದ್ದಾಗ ಎರಡನೇ ಮಹಡಿಯಿಂದ ಬಿದ್ದಿದ್ದರು. ಈ ವೇಳೆ ಆಯತಪ್ಪಿ 30 ಅಡಿ ಮೇಲಿಂದ ಕೆಳಗೆ ಬಿದ್ದಿದ್ದ ವಿಶುಕುಮಾರ್ ತಲೆಗೆ ಗಂಭೀರ ಗಾಯಗಳಾಗಿದ್ದವು. ತಕ್ಷಣ ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ವಿಶುಕುಮಾರ್ ಕೊನೆಯುಸಿರೆಳೆದ್ದಾರೆ. ಘಟನೆ ಸಂಬಂಧ ವಿಶುಕುಮಾರ್ ತಂದೆ ನಾರಾಯಣ ಭಟ್ ಅವರು ದೂರು ನೀಡಿದ್ದು, ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

Tragedy: ಸ್ವಾತಂತ್ರೋತ್ಸವದಲ್ಲಿ ಭಾಗಿಯಾಗಿ ವಾಪಸ್ ಮನೆಗೆ ಬರುವಾಗ ಅಪಘಾತ: ಕಾಲೇಜು ವಿದ್ಯಾರ್ಥಿ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ವಿಜಯಪುರ: 75ನೇ ವರ್ಷದ ಸ್ವಾತಂತ್ರೋತ್ಸವ (Independence 75) ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ ಮನೆಗೆ ಸ್ಕೂಟಿಯಲ್ಲಿ ಬರುತ್ತಿದ್ದ ವಿದ್ಯಾರ್ಥಿಗಳಿಗೆ ಅಪಘಾತವಾಗಿದೆ. ವಿಜಯಪುರ ನಗರದ ಹೊರ ಭಾಗದ ರಿಂಗ್ ರೋಡ್ ನಲ್ಲಿ ವಿದ್ಯಾರ್ಥಿಗಳ ಸ್ಕೂಟಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ(Accident) ಓರ್ವ ವಿದ್ಯಾರ್ಥಿ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಮತ್ತೋರ್ವನಿಗೆ ಗಂಭೀರ‌ ಗಾಯಗಳಾಗಿವೆ.

ಸ್ವರೂಪ‌ ನಾಗೇಶ ಸಾರವಾಡ (19) ಮೃತ ವಿದ್ಯಾರ್ಥಿ. ಪ್ಯಾರಾ ಮೆಡಿಕಲ್ ವಿದ್ಯಾರ್ಥಿಯಾಗಿದ್ದ ಸ್ವರೂಪ, ಕಾಲೇಜಿನಲ್ಲಿ ಸ್ವಾತಂತ್ರೋತ್ಸವ ಕಾರ್ಯಕ್ರಮ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಅವಘಡ ನಡೆದಿದೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಕೂಟಿಗೆ ಡಿಕ್ಕಿ ಹೊಡೆದ ಅಪರಿಚಿತ ವಾಹನ ಪತ್ತೆಗಾಗಿ ಪೊಲೀಸರು ತಲಾಷ್ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಮೃತನ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Published On - 2:07 pm, Mon, 15 August 22

Follow Us
TV9 Web
TV9 Web

TV9 Kannada

Read More
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ