
ಹಾಸನ : ರೈಲಿಗೆ ತಲೆ ಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಳೆನರಸೀಪುರ ತಾಲ್ಲೂಕಿನ ಪೆದ್ದನಹಳ್ಳಿ ಬಳಿ ನಡೆದಿದೆ.
ಹೊಳೆನರಸೀಪುರ ತಾಲೂಕಿನ ಇರಿತಳಲು ಗ್ರಾಮದ ಸದಾ (28) ಆತ್ಮಹತ್ಯೆ ಮಾಡಿಕೊಂಡಿದ್ದು, ರೈಲ್ವೆ ಹಳಿ ಬಳಿ ಬೈಕ್ ನಿಲ್ಲಿಸಿ ರೈಲಿಗೆ ತಲೆಕೊಟ್ಟಿದ್ದಾರೆ. ಚಿಕ್ಕಮಗಳೂರಿನ ಖಾಸಗಿ ಫೈನಾನ್ಸ್ನಲ್ಲಿ ಕೆಲಸ ಮಾಡುತ್ತಿದ್ದ ಸದಾ ಮನೆಗೆ ಹೋಗುತ್ತೇನೆಂದು ಚಿಕ್ಕಮಗಳೂರಿನಿಂದ ಬಂದಿದ್ದು, ರೈಲ್ವೆ ಹಳಿ ಮೇಲೆ ದೇಹದಿಂದ ತಲೆ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸದ್ಯ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದುಷ್ಟ ಅಳಿಯನಿಂದಾಗಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ
Published On - 6:04 pm, Thu, 7 January 21