ಮೊಹಮದ್ ನಲಪಾಡ್ ಅಂಡ್​ ಗ್ಯಾಂಗ್ ನನಗೆ ಹಿಂಸಿಸುತ್ತಿದ್ದಾರೆ- ಹೈಗ್ರೌಂಡ್ಸ್​ ಠಾಣೆಯಲ್ಲಿ 3 ಪುಟಗಳ ದೂರು ದಾಖಲು

ಬುಧವಾರ ಕೋವಿಡ್ ವಾರ್ ರೂಮ್ ವಿಚಾರವಾಗಿ ನಲಪಾಡ್ ಹಾಗೂ ರಕ್ಷಾ ರಾಮಯ್ಯ ಹಾಗೂ ಬೆಂಬಲಿಗರ ನಡುವೆ ವಾಗ್ವಾದವಾಗಿತ್ತು. ಗಲಾಟೆ ಬಳಿಕ ರಕ್ಷಾ ರಾಮಯ್ಯ ಬೆಂಬಲಿಗರಾದ ಭವ್ಯ ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಮೊಹಮದ್ ನಲಪಾಡ್ ಅಂಡ್​ ಗ್ಯಾಂಗ್ ನನಗೆ ಹಿಂಸಿಸುತ್ತಿದ್ದಾರೆ- ಹೈಗ್ರೌಂಡ್ಸ್​ ಠಾಣೆಯಲ್ಲಿ 3 ಪುಟಗಳ ದೂರು ದಾಖಲು
ಮೊಹಮದ್ ನಲಪಾಡ್​ ವಿರುದ್ದ ಹೈಗ್ರೌಂಡ್ಸ್​ ಪೊಲೀಸ್​ ಠಾಣೆಯಲ್ಲಿ ದೂರು
Follow us
ಸಾಧು ಶ್ರೀನಾಥ್​
|

Updated on:Apr 22, 2021 | 4:33 PM

ಬೆಂಗಳೂರು: ಕಾಂಗ್ರೆಸ್​ ಯುವ ನಾಯಕ ಮೊಹಮದ್ ನಲಪಾಡ್ ಹ್ಯಾರಿಸ್ ಮತ್ತೆ ವಿವಾದದಲ್ಲಿ ಸಿಲುಕಿಕೊಂಡಿದ್ದಾರೆ. ​ ಮೊಹಮದ್ ನಲಪಾಡ್ ವಿರುದ್ದ ಹೈಗ್ರೌಂಡ್ಸ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಭವ್ಯ ಅವರಿಂದ ದೂರು ನೀಡಲಾಗಿದೆ. ನಿನ್ನೆ ಬುಧವಾರ ನಲಪಾಡ್ ಮತ್ತು ಅವರ ಬೆಂಬಲಿಗರು ಕಚೇರಿಗೆ ಆಗಮಿಸಿ ಕರ್ತವ್ಯಕ್ಕೆ ಅಡ್ಡಿಪಡ್ಡಿಸಿ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಾಗಿ ಭವ್ಯ ದೂರು ನೀಡಿದ್ದಾರೆ. ನಲಪಾಡ್ ಹಾಗೂ ಇತರರು ಬೆದರಿಕೆ ಹಾಕಿದ್ದಾಗಿ ದೂರು ನೀಡಿರುವ ಭವ್ಯ ಅವರು ತಮಗೆ ಭದ್ರತೆ ನೀಡುವಂತೆ ಕೋರಿದ್ದಾರೆ.

ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರೋ ಕಾಂಗ್ರೆಸ್ ಭವನದಲ್ಲಿ ಕೋವಿಡ್ ವಾರ್ ರೂಂ ಸ್ಥಾಪನೆ ವಿಚಾರವಾಗಿ ನಲಪಾಡ್ ಹಾಗೂ ರಕ್ಷಾ ರಾಮಯ್ಯ ಹಾಗೂ ಬೆಂಬಲಿಗರ ನಡುವೆ ಬುಧವಾರ  ವಾಗ್ವಾದವಾಗಿತ್ತು. ಗಲಾಟೆ ಬಳಿಕ ರಕ್ಷಾ ರಾಮಯ್ಯ ಬೆಂಬಲಿಗರಾದ ಭವ್ಯ ಅವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ನಲಪಾಡ್ ಗುಂಪು ತಮ್ಮ ಕಾರ್ಯಕರ್ತರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಬಳಿಕ ಮತ್ತೆ ಐದು ಜನರು ಬಂದು ‘ನಮ್ಮ ಬಾಸ್ ನಲಪಾಡ್ ವಿಷಯಕ್ಕೆ ಬಂದರೆ ಸುಮ್ಮನಿರಲ್ಲ’ ಎಂದು ಬೆದರಿಕೆ ಹಾಕಿದ್ದಾರೆ ಎಂದೂ ಹೇಳಿದ್ದಾರೆ.

ಭವ್ಯ ಅವರು ರಕ್ಷಾ ರಾಮಯ್ಯ ಬೆಂಬಲಿಗರು. ಭವ್ಯ, ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಯುವ ಕಾಂಗ್ರೆಸ್ ಉಪಾಧ್ಯಕ್ಷೆ. ಮೊಹಮದ್ ನಲಪಾಡ್ ಅವರು ಶಾಂತಿನಗರ ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಅವರ ಪುತ್ರ.

ಉಪಚುನಾವಣೆ ಸಂದರ್ಭದಲ್ಲೂ ನಳಪಾಡ್ ಕಿರಿಕಿರಿ ಉಂಟು ಮಾಡಿದ್ದ ಎಂದು ಭವ್ಯ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ನಲಪಾಡ್‌ಗೆ ಚುನಾವಣೆಯಲ್ಲಿ‌ಹೆಚ್ಚಿನ ಮತ ಬಂದಿತ್ತು. ಆದರೆ ಅವರ ಹಿನ್ನೆಲೆಯನ್ನು ಗಮನಿಸಿ ಪಕ್ಷ ಸ್ಪರ್ಧೆಯಿಂದ ಅನರ್ಹಗೊಳಿಸಿತ್ತು. ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಇತರರಿಗೆ ವಿವಿಧ ಜವಾಬ್ದಾರಿ ನೀಡಲಾಗಿತ್ತು.

ಭವ್ಯ ನೀಡಿರುವ ದೂರಿನ ವೃತ್ತಾಂತ ಹೀಗಿದೆ: ದೂರಿನಲ್ಲಿ ನಲಪಾಡ್ ಬೆದರಿಕೆ ಬಗ್ಗೆ ಸಂಪೂರ್ಣ ವಿವರ ಹಾಗೂ ಇತಿಹಾಸ ಉಲ್ಲೇಖಿಸಿರುವ ಭವ್ಯ ಶಾಸಕರಾದ ಹ್ಯಾರಿಸ್ ರವರ ಮಗ ಮೊಹಮ್ಮದ್ ನಲಪಾಡ್, ಭಾಸ್ಕರ್, ಗೋವರ್ಧನ್, ಆಗಸ್ಟಿನ್ ಹಾಗೂ ಇತರೆ 15 ಕ್ಕೂ ಹೆಚ್ಚು ಜನರ ವಿರುದ್ಧ ಕಂಪ್ಲೆಂಟ್ ನೀಡಿದ್ದಾರೆ.

ಯುವ ಕಾಂಗ್ರೆಸ್ ಕಚೇರಿಗೆ ಏಕಾಏಕಿಯಾಗಿ ಬಂದು ನನ್ನನ್ನು ಗುರಿಯಾಗಿಸಿಕೊಂಡು ಬೈಯ್ದು ಹೊಡೆಯುವ ಹಾಗೆ ಕೈ ತೋರಿಸಿದ್ದಾರೆ ಎಂದು‌ ಕಂಪ್ಲೆಂಟ್​ನಲ್ಲಿ ಉಲ್ಲೇಖ. ನನಗೆ ಹಾಗೂ ನನ್ನ ಸಹೋದ್ಯೋಗಿಗಳಿಗೆ ಏಕವಚನದಲ್ಲಿ ನಿಂದಿಸಿದ್ದಾರೆ ಎಂದು ದೂರು.

ಬಸವ ಕಲ್ಯಾಣ ಕ್ಷೇತ್ರದ ಉಪಚುನಾವಣೆ ವೇಳೆ ತಮ್ಮ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ ಮಾಡಿರುವ ಬಗ್ಗೆಯೂ ಭವ್ಯ ದೂರು.  ಬಸವ ಕಲ್ಯಾಣದಲ್ಲಿ ನಡೆದ ಚುನಾವಣೆ ಪ್ರಚಾರಕ್ಕೆ ಹೋದಾಗ ಸಹ ತೊಂದರೆಯನ್ನು ಕೊಟ್ಟಿದ್ದಾರೆ. ನಲಪಾಡ್ ಹಾಗೂ ಬೆಂಬಲಿಗರು ನನ್ನ ಮೇಲೆ ಗೂಂಡಾಗಿರಿ ನಡೆಸಿದ್ದಾರೆ. ದೆಹಲಿಯಲ್ಲೂ‌ ಕೂಡ ನಲಪಾಡ್ ನನ್ನ ಮೇಲೆ ಕೂಗಾಡಿ, ಕೆಲ ಶಾಸಕರು ಹಾಗೂ ಕೆಪಿಸಿಸಿ ಕಾರ್ಯದರ್ಶಿಗಳಿಗೇ ಹೊಡೆಯುತ್ತೇನೆ ಎಂದು ಬೆದರಿಕೆ ಹಾಕಿದ್ದ ಬಗ್ಗೆ ದೂರಿನಲ್ಲಿ ಭವ್ಯ ಆರೋಪ ಮಾಡಿದ್ದಾರೆ.

ನಲಪಾಡ್ ಹಾಗೂ ಬೆದರಿಕೆ ಹಾಕಿದ ಅವರ ಬೆಂಬಲಿಗರೆಲ್ಲರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿ, ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಭವ್ಯ ಮನವಿ ಮಾಡಿಕೊಂಡಿದ್ದಾರೆ. ನಲಪಾಡ್ ಹಾಗೂ ಬೆಂಬಲಿಗರು ನನಗೆ ಏನು‌ ಮಾಡ್ತಾರೋ ಎಂಬ ಭಯವಿದೆ, ನನಗೆ ರಕ್ಷಣೆ ಕೊಡಿ ಎಂದು ಯುವ ಕಾಂಗ್ರೆಸ್ ಉಪಾಧ್ಯಕ್ಷೆ ಭವ್ಯ ಪೊಲೀಸರ ಮೊರೆ ಹೋಗಿದ್ದಾರೆ. ನಲಪಾಡ್ ಹಾಗೂ ಬೆಂಬಲಿಗರು ನನಗೆ ಹಿಂಸಿಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿರುವ ಭವ್ಯ, ಪೊಲೀಸರಿಗೆ ಮೂರು ಪುಟಗಳ ಸುದೀರ್ಘ ದೂರು ನೀಡಿದ್ದಾರೆ.

Also Read: ಅಧ್ಯಕ್ಷ ಪಟ್ಟ ಬಿಟ್ಟು ಯಾವುದೇ ಹುದ್ದೆ ಸ್ವೀಕರಿಸುವುದಿಲ್ಲ.. ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟಕ್ಕೆ ಪಟ್ಟು ಹಿಡಿದ ನಲಪಾಡ್

(youth congress vice president bhavya lodges complaint against mohammed nalapad in high grounds police station)

Published On - 11:09 am, Thu, 22 April 21

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ