AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿಗಳೇ, ಆರೋಗ್ಯ ಸಚಿವರೇ ದಯವಿಟ್ಟು ನಮ್ಮ ತಂದೆಯನ್ನು ಉಳಿಸಿ; ಕಣ್ಣೀರಿಡುತ್ತಾ ವಿಡಿಯೋ ಮಾಡಿದ ಯುವಕ

ಹೃದಯಾಘಾತ, ಸ್ಟ್ರೋಕ್ ಸಮಸ್ಯೆಗೆ ಒಳಗಾಗಿರುವ ಪವನ್ ಅವರ ತಂದೆ ಹಾಸನದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಚಿಕಿತ್ಸೆ ವೆಚ್ಚವನ್ನು ಭರಿಸುವುದು ಕಷ್ಟವಾಗಿದ್ದು, ಹೇಗಾದರೂ ಮಾಡಿ ತಂದೆಯನ್ನು ಉಳಿಸಿಕೊಡಿ ಎಂದು ಯುವಕ ಪವನ್ ಕಣ್ಣೀರಿಟ್ಟಿದ್ದಾರೆ.

ಮುಖ್ಯಮಂತ್ರಿಗಳೇ, ಆರೋಗ್ಯ ಸಚಿವರೇ ದಯವಿಟ್ಟು ನಮ್ಮ ತಂದೆಯನ್ನು ಉಳಿಸಿ; ಕಣ್ಣೀರಿಡುತ್ತಾ ವಿಡಿಯೋ ಮಾಡಿದ ಯುವಕ
ವಿಡಿಯೋದಲ್ಲಿ ಕಣ್ಣೀರಿಡುತ್ತಾ ಯಡಿಯೂರಪ್ಪ ಹಾಗೂ ಸುಧಾಕರ್​ಗೆ ಮನವಿ ಸಲ್ಲಿಸಿದ ಯುವಕ
Skanda
|

Updated on: May 22, 2021 | 8:50 AM

Share

ಹಾಸನ: ಕೊರೊನಾ ಆರಂಭವಾದ ನಂತರ ಸಾವು, ನೋವು, ಸಂಕಟದ ಘಟನೆಗಳಿಗೆ ಕೊನೆಯೇ ಇಲ್ಲವೆಂಬಂತಾಗಿದೆ. ಸೋಂಕು ತಗುಲಿದವರು ಹೇಗೆ ಪಡಬಾರದ ಪಾಡು ಅನುಭವಿಸುತ್ತಾರೋ ಅದೇ ರೀತಿ ಕೊರೊನಾ ಅಲ್ಲದೇ ಬೇರೆ ಕಾಯಿಲೆಗೆ ತುತ್ತಾದವರೂ ಕಷ್ಟವನ್ನು ಅನುಭವಿಸುವುದು ತಪ್ಪಿದ್ದಲ್ಲ. ಒಂದೆಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಹೋದರೆ ಎಲ್ಲಿ ಕೊರೊನಾ ತಗುಲುತ್ತದೋ ಎಂಬ ಭಯ, ಇನ್ನೊಂದೆಡೆ ಇದೇ ಕೊರೊನಾ ಉಂಟು ಮಾಡಿರುವ ಆರ್ಥಿಕ ಸಂಕಷ್ಟ ಎಂತಹವರನ್ನೂ ನಲುಗಿಸುತ್ತಿದೆ. ಇದಕ್ಕೆ ಪ್ರತ್ಯಕ್ಷ ಸಾಕ್ಷಿಯೆಂಬಂತೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆ ಯುವಕ ಪವನ್ ಎಂಬುವವರು ತನ್ನ ತಂದೆಯನ್ನು ಉಳಿಸಿಕೊಡುವಂತೆ ಕಣ್ಣೀರಿಡುತ್ತಾ, ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸುವ ವಿಡಿಯೋವೊಂದನ್ನು ಮಾಡಿದ್ದಾರೆ.

ಹೃದಯಾಘಾತ, ಸ್ಟ್ರೋಕ್ ಸಮಸ್ಯೆಗೆ ಒಳಗಾಗಿರುವ ಪವನ್ ಅವರ ತಂದೆ ಹಾಸನದ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಚಿಕಿತ್ಸೆ ವೆಚ್ಚವನ್ನು ಭರಿಸುವುದು ಕಷ್ಟವಾಗಿದ್ದು, ಹೇಗಾದರೂ ಮಾಡಿ ತಂದೆಯನ್ನು ಉಳಿಸಿಕೊಡಿ ಎಂದು ಯುವಕ ಪವನ್ ಕಣ್ಣೀರಿಟ್ಟಿದ್ದಾರೆ. ವಿಡಿಯೋ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ, ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಸೇರಿದಂತೆ ಎಲ್ಲರಲ್ಲೂ ಮನವಿ ಮಾಡಿರುವ ಪವನ್, ಆಸ್ಪತ್ರೆಯ ಬಿಲ್ ಪಾವತಿಸಲು ನಮ್ಮ ಬಳಿ ಹಣವಿಲ್ಲ. ದಯವಿಟ್ಟು ನಮ್ಮ ತಂದೆಗೆ ಚಿಕಿತ್ಸೆ ಕೊಡಿಸಿ ಎಂದು ಕೇಳಿಕೊಂಡಿದ್ದಾರೆ.

ನಮ್ಮ ತಂದೆ ನಮ್ಮನ್ನು ಕಷ್ಟಪಟ್ಟು ಸಾಕಿದ್ದಾರೆ. ಈಗ ಆರೋಗ್ಯ ಸಮಸ್ಯೆಗೆ ಒಳಗಾಗಿ ಆಸ್ಪತ್ರೆಗೆ ಸೇರಿದ್ದಾರೆ. ಅವರನ್ನು ಉಳಿಸಿಕೊಳ್ಳಬೇಕು. ಆದರೆ, ಅದಕ್ಕೆ ಬೇಕಾದ ಚಿಕಿತ್ಸೆಗೆ ನೀಡುವಷ್ಟು ಹಣ ನಮ್ಮ ಬಳಿ ಇಲ್ಲ. ದಯವಿಟ್ಟು ನೀವು ಸಹಾಯ ಮಾಡಿ. ತಂದೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿ. ಆ ಮೂಲಕ ನಮ್ಮ ತಂದೆಯ ಜೀವ ಉಳಿಸಿ ಎಂದು ಪವನ್​ ಪರಿಪರಿಯಾಗಿ ವಿನಂತಿಸಿಕೊಂಡಿದ್ದಾರೆ.

ಇದನ್ನೂ ಓದಿ: ಆಕ್ಸಿಜನ್, ವೆಂಟಿಲೇಟರ್, ಬೆಡ್ ಒದಗಿಸಿ ಬಹಳಷ್ಟು ಜನರ ಜೀವ ಉಳಿಸಿದ್ದಾರೆ ಖ್ಯಾತ ನಟ ಪ್ರಕಾಶ ರೈ!

ಆಸ್ಪತ್ರೆಗಳಲ್ಲಿ ಬೆಡ್ ಸಿಗದಿದ್ದಕ್ಕೆ ಸಿಎಂ ಬಿಎಸ್​ವೈ ಮನೆ ಮುಂದೆ ಧರಣಿ; ಕೊನೆಗೆ ಎಂ.ಎಸ್​.ರಾಮಯ್ಯ ಆಸ್ಪತ್ರೆಯಲ್ಲಿ ಬೆಡ್​ ವ್ಯವಸ್ಥೆ

(Youth records video requesting CM BS Yediyurappa and Health Minister Dr Sudhakar to help him to save his hospitalised father)

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ