ರಾಜಧಾನಿ ಬೆಂಗಳೂರು ಹೆಬ್ಬಾಗಿಲಲ್ಲೇ ನಡೀತು ಸಿನಿಮಾ ಶೈಲಿಯ ಕಿಡ್ನಾಪ್, ಎರಡು ದಿನಗಳ ಬಳಿಕ ಯುವಕನ ಮೃತದೇಹ ಪತ್ತೆ

ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ಟೋಬರ್ 5 ರಂದು ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಯುವಕನ್ನು ಸಿನಿಮೀಯ ಶೈಲಿಯಲ್ಲಿ ಕಿಡ್ನಾಪ್ ಮಾಡಲಾಗಿತ್ತು. ಇದಾದ ಎರಡು ದಿನಗಳ ಬಳಿಕ ಇದೇ ಯುವಕನ ಮೃತದೇಹ ನೆಲಮಂಗಲದ ಚಿಕ್ಕಚಿಕ್ಕನಹಳ್ಳಿ ಬಳಿ ಪತ್ತೆಯಾಗಿದೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪೋಷಕರು ಮಿಸ್ಸಿಂಗ್ ದೂರು ಕೊಟ್ಟಾಗಲೇ ಈ ಪ್ರಕರಣ ಬೆಳಕಿಗೆ ಬಂದಿದೆ.

Follow us
| Updated By: Rakesh Nayak Manchi

Updated on: Oct 13, 2023 | 2:08 PM

ನೆಲಮಂಗಲ, ಅ.13: ಕೆಲಸಕ್ಕೆ ಹೋದ ಮಗ ಮನೆಗೆ ಬರುವವರೆಗೆ ಪೋಷಕರಿಗೆ ನೆಮ್ಮದಿಯೇ ಇರಲ್ಲ. ಹಾಗಾಗಿದೆ ಬೆಂಗಳೂರಿನ (Bengaluru) ಪರಿಸ್ಥಿತಿ. ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಿಂದ ಸಿನಿಮೀಯ ಶೈಲಿಯಲ್ಲಿ ಕಿಡ್ನಾಪ್ ಆಗಿದ್ದ ಯುವಕನ ಮೃತದೇಹ ನೆಲಮಂಗಲದ ಚಿಕ್ಕಚಿಕ್ಕನಹಳ್ಳಿ ಬಳಿ ಪತ್ತೆಯಾಗಿದೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪೋಷಕರು ಮಿಸ್ಸಿಂಗ್ ದೂರು ಕೊಟ್ಟಾಗಲೇ ಅಪಹರಣ ಮತ್ತು ಕೊಲೆ ಪ್ರಕರಣ ಬೆಳಕಿಗೆ ಬಂದಿದೆ.

ಡಿಪ್ಲೋಮಾದಲ್ಲಿ ಇಂಜಿನಿಯರಿಂಗ್ ಮಾಡಿದ್ದ ದಾವಣಗೆರೆ ಮೂಲದ ಯುವಕ ಲೋಕೇಶ್ ಎಂಬವರು ಪೀಣ್ಯ ಬಳಿಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಅಕ್ಟೋಬರ್ 5 ರಂದು ಕಚೇರಿ ಕೆಲಸ ಮುಗಿಸಿ ನಾಗಸಂದ್ರ ಬಳಿ ಬರುತ್ತಿದ್ದ ಲೋಕೇಶ್, ಇನ್ನೇನು ಮನೆಗೆ ತಲುಪುವ ವೇಳೆ ಕಿಡ್ನಾಪ್ ಆಗಿದ್ದಾರೆ.

ಇತ್ತ, ಮಗ ಮನೆಗೆ ಬಾರದ್ದನ್ನು ನೋಡಿ ಗಾಬರಿಗೊಂಡ ಪೋಷಕರು, ಬಾಗಲಗುಂಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಾಪತ್ತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ದಾರಿಯಲ್ಲಿದ್ದ ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಿಡ್ನಾಫ್ ಆಗಿರುವುದು ತಿಳಿದು ಬಂದಿದೆ.

ಇದನ್ನೂ ಓದಿ: ಚಿತ್ರದುರ್ಗ: ಪ್ರೀತಿ ತಿರಸ್ಕರಿಸಿದ್ದಕ್ಕೆ ಕಿಡ್ನಾಪ್ ಮಾಡಿ ಅತ್ಯಾಚಾರವೆಸಗಿ ಯುವತಿ ಕೊಂದ ಪಾಗಲ್ ಪ್ರೇಮಿ

ಇಬ್ಬರು ವ್ಯಕ್ತಿಗಳು ಲೋಕೇಶ್ ಅವರನ್ನು ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ಹೆದ್ದಾರಿ ಪಕ್ಕದಲ್ಲಿ ಬಲವಂತವಾಗಿ ಬೈಕ್​ನಲ್ಲಿ ಕೂರಿಸಿ ಕಿಡ್ನಾಪ್ ಮಾಡಿದ್ದಾರೆ. ಅಕ್ಟೋಬರ್ 5 ರಂದು ಕಿಡ್ನಾಪ್ ಮಾಡಲಾಗಿದ್ದು, 8 ರಂದು ನೆಲಮಂಗಲದ ಚಿಕ್ಕಕುಕ್ಕನಹಳ್ಳಿ ಬಳಿ ಮೃತದೇಹ ಪತ್ತೆಯಾಗಿದೆ.

ಸದ್ಯ, ಪ್ರಕರಣ ದಾಖಲಿಸಿಕೊಂಡ ಮಾದನಾಯಕನಹಳ್ಳಿ ಠಾಣಾ ಪೊಲೀಸರು, ತನಿಖೆ ಆರಂಭಿಸಿದ್ದಾರೆ. ಲೋಕೇಶ್​ ಅವನರನ್ನು ಕಿಡ್ನಾಪ್ ಮಾಡಿದ್ದು ಯಾರು? ಕೊಲೆ ಮಾಡಿದ್ದು ಯಾರು? ಕೊಲೆಯಾಗಿದ್ದು ಎಲ್ಲಿ ಎಂಬಿತ್ಯಾದಿ ವಿಚಾರವಾಗಿ ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ