ಕೋಲಾರ: ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಯೂಟ್ಯೂಬ್ ಚಾನೆಲ್ ವರದಿಗಾರ

| Updated By: guruganesh bhat

Updated on: Jun 20, 2021 | 7:06 PM

ತಮ್ಮ ಡೆತ್​ ನೋಟ್​ನಲ್ಲಿ ಶ್ರೀಧರ್​ ತಾನು ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲವೆಂದು ಬರೆದುಕೊಂಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ರಾಬರ್ಟ್​ಸನ್​ ಪೇಟೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕೋಲಾರ: ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಯೂಟ್ಯೂಬ್ ಚಾನೆಲ್ ವರದಿಗಾರ
ಆತ್ಮಹತ್ಯೆ ಪತ್ರ ಮತ್ತು ಮೃತ ವರದಿಗಾರ
Follow us on

ಕೋಲಾರ: ಯೂಟ್ಯೂಬ್​ ಚಾನಲ್​ ಒಂದರ ವರದಿಗಾರನೊಬ್ಬ ಡೆತ್​ ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್​ ನಗರದಲ್ಲಿ ನಡೆದಿದೆ. ವಿ.ಟಿವಿ ಹೆಸರಿನ ಯೂಟ್ಯೂಬ್​ ಚಾನಲ್​ನ ವರದಿಗಾರ ಶ್ರೀಧರ್​(45) ಆತ್ಮಹತ್ಯೆಗೆ ಶರಣಾದ ವರದಿಗಾರ. ಕಳೆದ ಹಲವು ವರ್ಷಗಳಿಂದ ಕೆಜಿಎಫ್​ ನಗರದಲ್ಲಿ ಕೆಲವು ಸ್ಥಳೀಯ ಪತ್ರಿಕೆಗಳು ಹಾಗೂ ಯೂಟ್ಯೂಬ್​ ಚಾನಲ್​ ನಲ್ಲಿ ಕೆಲಸ ಮಾಡುತ್ತಿದ್ದ ಶ್ರೀಧರ್​ ಸಕ್ರಿಯ ಪತ್ರಕರ್ತರಾಗಿ ಗುರುತಿಸಿಕೊಂಡಿದ್ದರು. ಈ ನಡುವೆ ಕೆಜಿಎಫ್​ನ ಬೆಮೆಲ್​ ನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮಹಿಳೆಯೊಬ್ಬಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಪೊಲೀಸರು ಕರೆದು ವಿಚಾರಣೆ ನಡೆಸಿದ್ದರು ಎನ್ನಲಾಗಿದ್ದು ಇದರಿಂದ ಮನನೊಂದು ಆತ್ಮಹತ್ಯೆ ನಿರ್ಧಾರ ಮಾಡಿರಬಹುದು ಎನ್ನಲಾಗಿದೆ.

ಬೆಮೆಲ್​ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮಹಿಳೆಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಧರ್​ ಅವರನ್ನು ನಿನ್ನೆ ವಿಚಾರಣೆ ನಡೆಸಿದ್ದರು, ಜೊತೆಗೆ ಕರೆದಾಗ ವಿಚಾರಣೆ ಬರುವಂತೆ ಹೇಳಿ ಕಳಿಸಿದ್ದರು. ನಿನ್ನೆ ರಾತ್ರಿ ವಿಚಾರಣೆ ಮುಗಿಸಿಕೊಂಡು ಬಂದಿದ್ದ ಶ್ರೀಧರ್​ ಇಂದು ಬೆಳಗ್ಗೆ ಮನೆಯಿಂದ ಬಂದವರೇ ಕೆಜಿಎಫ್​ ರಾಬರ್ಟ್​ಸನ್​ ಪೇಟೆ ಬಸ್​ ನಿಲ್ದಾಣದ ಬಳಿ ಇರುವ ತಮ್ಮ ವಿಟಿವಿ ಯೂಟ್ಯೂಬ್​ ಚಾನಲ್​ನ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನು ತಮ್ಮ ಡೆತ್​ ನೋಟ್​ನಲ್ಲಿ ಶ್ರೀಧರ್​ ತಾನು ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲವೆಂದು ಬರೆದುಕೊಂಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ರಾಬರ್ಟ್​ಸನ್​ ಪೇಟೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ‘ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಸಾಕ್ಷಿಗಳು ಬೇಕಿದ್ದ ಹಿನ್ನೆಲೆ ಕರೆದು ವಿಚಾರಣೆೆಗೆಂದು ಕರೆದಿದ್ದೆವು. ಅವರಿಗೆ ಯಾವುದೇ ಒತ್ತಡ ಹಾಕಿರಲಿಲ್ಲ. ಅವರಿಂದ ಇನ್ನೂ ಸಾಕಷ್ಟು ಮಾಹಿತಿ ಪಡೆಯಬೇಕಿತ್ತು. ಅಷ್ಟರಲ್ಲೇ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ತನಿಖೆ ಮುಂದುವರೆಸುತ್ತೇವೆ‘ ಎಂದು ಡಿವೈಎಸ್ಪಿ ಉಮೇಶ್​ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸುದ್ದಿ ವಿಶ್ಲೇಷಣೆ: ಶಾಸಕ ರಮೇಶ್ ಜಾರಕಿಹೊಳಿ ಈಗ ಎಲ್ಲಿದ್ದಾರೆ? ಏನು ಮಾಡುತ್ತಿದ್ದಾರೆ? ಇಲ್ಲಿದೆ ಕುತೂಹಲಕರ ವಿವರ

ಸುದ್ದಿ ವಿಶ್ಲೇಷಣೆ: ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲ, ಕಾಂಗ್ರೆಸ್​ನಲ್ಲಿ ಈಗಲೇ ಹಲವಾರು ಮುಖ್ಯಮಂತ್ರಿಗಳು!

(YouTube channel reporter from Kolar who wrote a suicide note and committed suicide)

Published On - 6:57 pm, Sun, 20 June 21