AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವ ನಿಧಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ: ಸಚಿವ ಶರಣ ಪ್ರಕಾಶ್ ಪಾಟೀಲ್

ರಾಜ್ಯ ಕಾಂಗ್ರೆಸ್​ ಸರ್ಕಾರದ ಮಹತ್ವದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ "ಯುವ ನಿಧಿ" ಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ನೋಂದಣಿಯಾದ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3,000 ರೂಪಾಯಿ, ನಿರುದ್ಯೋಗಿ ಡಿಪ್ಲೋಮಾದವರಿಗೆ ಮಾಸಿಕ 1,500 ರೂಪಾಯಿಗಳನ್ನು ಸರ್ಕಾರ ನೀಡಲಿದೆ. ಈ ಯುವ ನಿಧಿ ಯೋಜನೆಗೆ ನೋಂದಾಯಿಸಿಕೊಂಡವರಿಗೆ ಕೌಶಲ್ಯ ತರಬೇತಿ ನೀಡಲು ಸರ್ಕಾರ ಚಿಂತಿಸಿದೆ.

ಯುವ ನಿಧಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ: ಸಚಿವ ಶರಣ ಪ್ರಕಾಶ್ ಪಾಟೀಲ್
ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jan 10, 2024 | 7:35 AM

Share

ಬೆಂಗಳೂರು, ಜನವರಿ 10: ರಾಜ್ಯ ಕಾಂಗ್ರೆಸ್​ ಸರ್ಕಾರದ (Congress Government) ಮಹತ್ವದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ “ಯುವ ನಿಧಿ” (Yuva Nidhi) ಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ನೋಂದಣಿಯಾದ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3,000 ರೂಪಾಯಿ, ನಿರುದ್ಯೋಗಿ ಡಿಪ್ಲೋಮಾದವರಿಗೆ ಮಾಸಿಕ 1,500 ರೂಪಾಯಿಗಳನ್ನು ಸರ್ಕಾರ ನೀಡಲಿದೆ.

ಇನ್ನು ಈ ಯುವ ನಿಧಿ ಯೋಜನೆಗೆ ನೋಂದಾಯಿಸಿಕೊಂಡವರಿಗೆ ಕೌಶಲ್ಯ ತರಬೇತಿ ನೀಡಲು ಸರ್ಕಾರ ಚಿಂತಿಸಿದೆ. ಕೌಶಲ್ಯವಂತರಾಗಿ ಅವರು ಉದ್ಯೋಗದಲ್ಲಿ ತೊಡಗಿಸಿಕೊಂಡರೇ, ಅವರಿಗೆ ನಾವು ಮಾಸಿಕ ಹಣ ನೀಡಬೇಕಾಗುವುದಿಲ್ಲ. ಈ ಯುವಕರಿಗೆ ಉದ್ಯೋಗ ತರಬೇತಿ ನೀಡಲು ಮುಂದೆ ಬರುವ ಕಂಪನಿಗಳತ್ತ ನಾವು ಗಮನ ಹರಿಸಿದ್ದೇವೆ. ಈ ಸಂಬಂಧ ಹೊಸ ಯೋಜನೆಯನ್ನು ಅಭಿವೃದ್ಧಿಪಡಿಸುತ್ತಿದ್ದೇವೆ. ತರಬೇತಿ ವೆಚ್ಚವನ್ನು ಸರಕಾರ ಭರಿಸಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದರು.

ದಿ ನ್ಯೂ ಇಂಡಿಯನ್​ ಎಕ್ಸಪ್ರೆಸ್​ ಖಾಸಗಿ ಸುದ್ದಿ ಸಂಸ್ಥೆ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಯುವ ನಿಧಿ ಯೋಜನೆಯ ಫಲಾನುಭವಿಗಳು ಸರ್ಕಾರದ ಸ್ಕಿಲ್ ಕನೆಕ್ಟ್ ಪೋರ್ಟಲ್​ನಲ್ಲಿ ನೋಂದಣಿಯಾಗಿರುತ್ತಾರೆ. ನಂತರ ಅವರನ್ನು ಕೌಶಲ್ಯವಂತರನ್ನಾಗಿಸಿ, ಉದ್ಯೋಗ ಕೊಡಿಸಲಾಗುತ್ತದೆ. ಜೊತೆಗೆ ಸ್ಕಿಲ್​ ಕೌನ್ಸಿಲ್​ ರಚಿಸಲಾಗಿದ್ದು, ಕೈಗಾರಿಕೆ ಹಾಗೂ ಶಿಕ್ಷಣ ಕ್ಷೇತ್ರದವರು ಅದರಲ್ಲಿ ಇದ್ದಾರೆ. ಬೇರೆ ಯಾವೆಲ್ಲ ಕ್ಷೇತ್ರದಲ್ಲಿ ಕೌಶಲ್ಯ ನೀಡಬುದಹು ಎಂಬ ಬಗ್ಗೆ ಅವರು ಸಲಹೆ ನೀಡುತ್ತಾರೆ ಎಂದರು.

ಇದನ್ನೂ ಓದಿ: ಯುವ ನಿಧಿ ಗ್ಯಾರಂಟಿ ಜಾರಿಗೆ ದಿನಗಣನೆ: ಯಾರೆಲ್ಲ ಅರ್ಹರು, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ

ಯೋಜನೆಗೆ ಈಗಾಗಲೇ 50 ಸಾವಿರಕ್ಕೂ ಹೆಚ್ಚು ಪದವೀಧರರು ನೋಂದಣಿಯಾಗಿದ್ದಾರೆ. ಒಂದು ಸಕಾರಾತ್ಮಕ ವಿಷಯವೆಂದರೆ ರಾಷ್ಟ್ರೀಯ ಶೈಕ್ಷಣಿಕ ಠೇವಣಿ (NAD) 2022-23 ಪದವೀಧರರ ಸುಮಾರು 4.12 ಲಕ್ಷ ಪ್ರಮಾಣಪತ್ರಗಳನ್ನು ಠೇವಣಿ ಮಾಡಿದೆ. ಇದು ನೋಂದಣಿ ಪ್ರಕ್ರಿಯೆಗೆ ಸಹಾಯಕವಾಗಿದೆ. ಯುವನಿಧಿಗೆ ಒಟ್ಟು 5.29 ಲಕ್ಷ ಫಲಾನುಭವಿಗಳು ನಾವು ನಿರೀಕ್ಷಿಸುತ್ತಿದ್ದೇವೆ ಎಂದರು.

ಈ ಯೋಜನೆಯು ವಿದ್ಯಾರ್ಥಿಯ ಫಲಿತಾಂಶದ ದಿನಾಂಕದಿಂದ ಆರು ತಿಂಗಳವರೆಗೆ ಅನ್ವಯಿಸುತ್ತದೆ. ಉದಾಹರಣೆಗೆ: BSc ಫಲಿತಾಂಶ ಇಂದು ಪ್ರಕಟವಾಗಿದೆ. ಫಲಿತಾಂಶ ಪ್ರಕಟವಾದ ಆರು ತಿಂಗಳ ನಂತರ ಆ ವಿದ್ಯಾರ್ಥಿ ಯೋಜನೆಗೆ ಅರ್ಹನಾಗುತ್ತೇನೆ. ಆದ್ದರಿಂದ, ಅವರು ಕಾಲಾವಧಿಯಲ್ಲಿ ಅರ್ಹರಾಗುತ್ತಾರೆ ಮತ್ತು ಅವರು ಅರ್ಹತೆ ಪಡೆದಾಗ ಯೋಜನೆಯ ಪ್ರಯೋಜನೆ ಪಡೆಯುತ್ತಾರೆ ಎಂದು ಹೇಳಿದರು.

ಸದ್ಯ 50,000 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ದಿನಕಳೆದಂತೆ ಈ ಸಂಖ್ಯೆ ಹೆಚ್ಚುತ್ತದೆ. ನಾವು ಪ್ರತಿದಿನ 4,000-5,000 ದಾಖಲಾತಿಯನ್ನು ನಿರೀಕ್ಷಿಸುತ್ತೇವೆ. ಯೋಜಿತ ಸಂಖ್ಯೆಯ ಫಲಾನುಭವಿಗಳನ್ನು ತಲುಪಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. 2022-23ರಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಯುವ ನಿಧಿಗೆ ಅರ್ಹರು ಎಂಬುದು ಕ್ಯಾಬಿನೆಟ್​ನಲ್ಲಿ ನಿರ್ಧರಿಸಲಾಗಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:33 am, Wed, 10 January 24

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!