ಬೆಂಗಳೂರು, ಜನವರಿ 10: ರಾಜ್ಯ ಕಾಂಗ್ರೆಸ್ ಸರ್ಕಾರದ (Congress Government) ಮಹತ್ವದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ “ಯುವ ನಿಧಿ” (Yuva Nidhi) ಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ನೋಂದಣಿಯಾದ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3,000 ರೂಪಾಯಿ, ನಿರುದ್ಯೋಗಿ ಡಿಪ್ಲೋಮಾದವರಿಗೆ ಮಾಸಿಕ 1,500 ರೂಪಾಯಿಗಳನ್ನು ಸರ್ಕಾರ ನೀಡಲಿದೆ.
ಇನ್ನು ಈ ಯುವ ನಿಧಿ ಯೋಜನೆಗೆ ನೋಂದಾಯಿಸಿಕೊಂಡವರಿಗೆ ಕೌಶಲ್ಯ ತರಬೇತಿ ನೀಡಲು ಸರ್ಕಾರ ಚಿಂತಿಸಿದೆ. ಕೌಶಲ್ಯವಂತರಾಗಿ ಅವರು ಉದ್ಯೋಗದಲ್ಲಿ ತೊಡಗಿಸಿಕೊಂಡರೇ, ಅವರಿಗೆ ನಾವು ಮಾಸಿಕ ಹಣ ನೀಡಬೇಕಾಗುವುದಿಲ್ಲ. ಈ ಯುವಕರಿಗೆ ಉದ್ಯೋಗ ತರಬೇತಿ ನೀಡಲು ಮುಂದೆ ಬರುವ ಕಂಪನಿಗಳತ್ತ ನಾವು ಗಮನ ಹರಿಸಿದ್ದೇವೆ. ಈ ಸಂಬಂಧ ಹೊಸ ಯೋಜನೆಯನ್ನು ಅಭಿವೃದ್ಧಿಪಡಿಸುತ್ತಿದ್ದೇವೆ. ತರಬೇತಿ ವೆಚ್ಚವನ್ನು ಸರಕಾರ ಭರಿಸಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದರು.
ದಿ ನ್ಯೂ ಇಂಡಿಯನ್ ಎಕ್ಸಪ್ರೆಸ್ ಖಾಸಗಿ ಸುದ್ದಿ ಸಂಸ್ಥೆ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಯುವ ನಿಧಿ ಯೋಜನೆಯ ಫಲಾನುಭವಿಗಳು ಸರ್ಕಾರದ ಸ್ಕಿಲ್ ಕನೆಕ್ಟ್ ಪೋರ್ಟಲ್ನಲ್ಲಿ ನೋಂದಣಿಯಾಗಿರುತ್ತಾರೆ. ನಂತರ ಅವರನ್ನು ಕೌಶಲ್ಯವಂತರನ್ನಾಗಿಸಿ, ಉದ್ಯೋಗ ಕೊಡಿಸಲಾಗುತ್ತದೆ. ಜೊತೆಗೆ ಸ್ಕಿಲ್ ಕೌನ್ಸಿಲ್ ರಚಿಸಲಾಗಿದ್ದು, ಕೈಗಾರಿಕೆ ಹಾಗೂ ಶಿಕ್ಷಣ ಕ್ಷೇತ್ರದವರು ಅದರಲ್ಲಿ ಇದ್ದಾರೆ. ಬೇರೆ ಯಾವೆಲ್ಲ ಕ್ಷೇತ್ರದಲ್ಲಿ ಕೌಶಲ್ಯ ನೀಡಬುದಹು ಎಂಬ ಬಗ್ಗೆ ಅವರು ಸಲಹೆ ನೀಡುತ್ತಾರೆ ಎಂದರು.
ಇದನ್ನೂ ಓದಿ: ಯುವ ನಿಧಿ ಗ್ಯಾರಂಟಿ ಜಾರಿಗೆ ದಿನಗಣನೆ: ಯಾರೆಲ್ಲ ಅರ್ಹರು, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ
ಯೋಜನೆಗೆ ಈಗಾಗಲೇ 50 ಸಾವಿರಕ್ಕೂ ಹೆಚ್ಚು ಪದವೀಧರರು ನೋಂದಣಿಯಾಗಿದ್ದಾರೆ. ಒಂದು ಸಕಾರಾತ್ಮಕ ವಿಷಯವೆಂದರೆ ರಾಷ್ಟ್ರೀಯ ಶೈಕ್ಷಣಿಕ ಠೇವಣಿ (NAD) 2022-23 ಪದವೀಧರರ ಸುಮಾರು 4.12 ಲಕ್ಷ ಪ್ರಮಾಣಪತ್ರಗಳನ್ನು ಠೇವಣಿ ಮಾಡಿದೆ. ಇದು ನೋಂದಣಿ ಪ್ರಕ್ರಿಯೆಗೆ ಸಹಾಯಕವಾಗಿದೆ. ಯುವನಿಧಿಗೆ ಒಟ್ಟು 5.29 ಲಕ್ಷ ಫಲಾನುಭವಿಗಳು ನಾವು ನಿರೀಕ್ಷಿಸುತ್ತಿದ್ದೇವೆ ಎಂದರು.
ಈ ಯೋಜನೆಯು ವಿದ್ಯಾರ್ಥಿಯ ಫಲಿತಾಂಶದ ದಿನಾಂಕದಿಂದ ಆರು ತಿಂಗಳವರೆಗೆ ಅನ್ವಯಿಸುತ್ತದೆ. ಉದಾಹರಣೆಗೆ: BSc ಫಲಿತಾಂಶ ಇಂದು ಪ್ರಕಟವಾಗಿದೆ. ಫಲಿತಾಂಶ ಪ್ರಕಟವಾದ ಆರು ತಿಂಗಳ ನಂತರ ಆ ವಿದ್ಯಾರ್ಥಿ ಯೋಜನೆಗೆ ಅರ್ಹನಾಗುತ್ತೇನೆ. ಆದ್ದರಿಂದ, ಅವರು ಕಾಲಾವಧಿಯಲ್ಲಿ ಅರ್ಹರಾಗುತ್ತಾರೆ ಮತ್ತು ಅವರು ಅರ್ಹತೆ ಪಡೆದಾಗ ಯೋಜನೆಯ ಪ್ರಯೋಜನೆ ಪಡೆಯುತ್ತಾರೆ ಎಂದು ಹೇಳಿದರು.
ಸದ್ಯ 50,000 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ದಿನಕಳೆದಂತೆ ಈ ಸಂಖ್ಯೆ ಹೆಚ್ಚುತ್ತದೆ. ನಾವು ಪ್ರತಿದಿನ 4,000-5,000 ದಾಖಲಾತಿಯನ್ನು ನಿರೀಕ್ಷಿಸುತ್ತೇವೆ. ಯೋಜಿತ ಸಂಖ್ಯೆಯ ಫಲಾನುಭವಿಗಳನ್ನು ತಲುಪಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. 2022-23ರಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಯುವ ನಿಧಿಗೆ ಅರ್ಹರು ಎಂಬುದು ಕ್ಯಾಬಿನೆಟ್ನಲ್ಲಿ ನಿರ್ಧರಿಸಲಾಗಿದೆ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:33 am, Wed, 10 January 24