ಕಾಂಗ್ರೆಸ್ ಸಿದ್ಧಾಂತ ಏನೆಂದು ಅವರಿಗೆ ಗೊತ್ತಿಲ್ಲ: ಜಮೀರ್ ಅಹಮದ್ ವಿರುದ್ಧ ಕಾಂಗ್ರೆಸ್ ನಾಯಕರ ಆಕ್ರೋಶ
ಜಮೀರ್ ಅಹಮದ್ ಕಾಂಗ್ರೆಸ್ಸಿಗೆ ಇತ್ತೀಚೆಗೆ ಬಂದವರು. ಪಕ್ಷದ ಸಿದ್ಧಾಂತಗಳು ಅವರಿಗೆ ತಿಳಿದಿಲ್ಲ. ಕಾಂಗ್ರೆಸ್ ಪಕ್ಷದ ಹಲವು ನಾಯಕರಿಗೆ ಮುಖ್ಯಮಂತ್ರಿ ಆಗುವ ಅರ್ಹತೆ ಇದೆ. ಮುಖ್ಯಮಂತ್ರಿ ಯಾರಾಗಬೇಕು ಎಂಬ ಗೊಂದಲವನ್ನು ರಾಜ್ಯದ ಕಾರ್ಯಕರ್ತರಲ್ಲಿ ಜಮೀರ್ ಸೃಷ್ಟಿಸುತ್ತಿದ್ದಾರೆ ಎಂದು ವಿಷಾದಿಸಿದರು.
ಬೆಂಗಳೂರು: ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಬಂದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುತ್ತಾರೆ ಎಂಬ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಹೇಳಿಕೆಯ ಬಗ್ಗೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ದೇವನಹಳ್ಳಿಯಲ್ಲಿ ಪ್ರತಿಕ್ರಿಯಿಸಿರುವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಮತ್ತಿತರರು ಜಮೀರ್ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜಮೀರ್ ಅಹಮದ್ ಕಾಂಗ್ರೆಸ್ಸಿಗೆ ಇತ್ತೀಚೆಗೆ ಬಂದವರು. ಪಕ್ಷದ ಸಿದ್ಧಾಂತಗಳು ಅವರಿಗೆ ತಿಳಿದಿಲ್ಲ. ಕಾಂಗ್ರೆಸ್ ಪಕ್ಷದ ಹಲವು ನಾಯಕರಿಗೆ ಮುಖ್ಯಮಂತ್ರಿ ಆಗುವ ಅರ್ಹತೆ ಇದೆ. ಮುಖ್ಯಮಂತ್ರಿ ಯಾರಾಗಬೇಕು ಎಂಬ ಗೊಂದಲವನ್ನು ರಾಜ್ಯದ ಕಾರ್ಯಕರ್ತರಲ್ಲಿ ಜಮೀರ್ ಸೃಷ್ಟಿಸುತ್ತಿದ್ದಾರೆ ಎಂದು ವಿಷಾದಿಸಿದರು.
ಪಕ್ಷದ ಎಲ್ಲ ನಾಯಕರು ಮತ್ತು ಕಾರ್ಯಕರ್ತರು ಒಗ್ಗೂಡಿ ಚುನಾವಣೆ ಎದುರಿಸಬೇಕು. ಯಾರು ಮುಖ್ಯಮಂತ್ರಿ ಆಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸಬೇಕು. ಜಮೀರ್ ಅಹಮದ್ ಅವರು ಆರ್ಎಸ್ಎಸ್ ಅಥವಾ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಜೊತೆಗೆ ಒಳಒಪ್ಪಂದ ಮಾಡಿಕೊಂಡಿರುವ ಅನುಮಾನಗಳಿವೆ. ಚುನಾವಣೆಯನ್ನು ಹೇಗೆ ಎದುರಿಸಬೇಕು ಎನ್ನುವ ಬಗ್ಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲಿ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅಲ್ಲಿ ಯಾವುದೇ ಗೊಂದಲವಿಲ್ಲ. ಜಮೀರ್ ಈ ರೀತಿಯ ಹೇಳಿಕೆಯಿಂದ ಡಿ.ಕೆ.ಶಿವಕುಮಾರ್ ಅಭಿಮಾನಿಗಳು ರೊಚ್ಚಿಗೇಳುತ್ತಾರೆ. ಸಿದ್ದರಾಮಯ್ಯ ಅವರನ್ನ ಮೆಚ್ಚಿಸಲು ಜಮೀರ್ ಇಂಥ ಹೇಳಿಕೆ ನೀಡಿರಬಹುದು ಎಂದು ಅವರು ಶಂಕಿಸಿದರು.
(Zameer Ahmed Dont know the principle of congress alleges leaders)
ಇದನ್ನೂ ಓದಿ: ಮುಂದಿನ ಸಿಎಂ ಸಿದ್ಧರಾಮಯ್ಯ ಎಂದಿದ್ದಕ್ಕೆ ಕಾಂಗ್ರೆಸ್ ಹೈಕಮಾಂಡ್ ನನಗೆ ಯಾವುದೇ ಎಚ್ಚರಿಕೆ ನೀಡಿಲ್ಲ: ಶಾಸಕ ಜಮೀರ್ ಅಹ್ಮದ್
ಇದನ್ನೂ ಓದಿ: TA Sharavana: ಪದೆ ಪದೇ ಕುಮಾರಣ್ಣ ಬಗ್ಗೆ ಕಾಲ್ಕೆರೆದುಕೊಂಡು ಬರ್ತಿದ್ದೀಯಾ, ಹುಷಾರ್! ಜಮೀರ್ಗೆ ಶರವಣ ಖಡಕ್ ವಾರ್ನಿಂಗ್