ದರ್ಶನ್ ಪ್ರಕರಣದಲ್ಲಿ ಸಚಿವ ಜಮೀರ್ ಅಹಮದ್ ನೀಡಿದರು ಸ್ಪಷ್ಟನೆ, ಏನವರ ಅನಿಸಿಕೆ?

ದರ್ಶನ್(Darshan) ಮತ್ತು ಗ್ಯಾಂಗ್​ನಿಂದ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನ ಹತ್ಯೆ ಮಾಡಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. ಈ ವೇಳೆ ದರ್ಶನ್ ರಕ್ಷಣೆಗೆ ಕೆಲ ಕಾಂಗ್ರೆಸ್ ಶಾಸಕರು ಪೊಲೀಸರ ಮೇಲೆ ಒತ್ತಡ ಹಾಕಿದ್ದಾರೆಂಬ ಆರೋಪಕ್ಕೆ ಸಚಿವ ಜಮೀರ್ ಅಹಮದ್ ಖಾನ್ ಪ್ರತಿಕ್ರಿಯಿಸಿದ್ದಾರೆ.

ದರ್ಶನ್ ಪ್ರಕರಣದಲ್ಲಿ ಸಚಿವ ಜಮೀರ್ ಅಹಮದ್ ನೀಡಿದರು ಸ್ಪಷ್ಟನೆ, ಏನವರ ಅನಿಸಿಕೆ?
ದರ್ಶನ್ ಪ್ರಕರಣದಲ್ಲಿ ಸಚಿವ ಜಮೀರ್ ಅಹಮದ್ ಸ್ಪಷ್ಟನೆ
Edited By: ಕಿರಣ್ ಹನುಮಂತ್​ ಮಾದಾರ್

Updated on: Jun 22, 2024 | 7:26 PM

ವಿಜಯಪುರ, ಜೂ.22: ದರ್ಶನ್(Darshan) ಮತ್ತು ಗ್ಯಾಂಗ್​ನಿಂದ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನ ಹತ್ಯೆ ಮಾಡಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. ಈ ವೇಳೆ ದರ್ಶನ್ ರಕ್ಷಣೆಗೆ ಕೆಲ ಕಾಂಗ್ರೆಸ್ ಶಾಸಕರು ಪೊಲೀಸರ ಮೇಲೆ ಒತ್ತಡ ಹಾಕಿದ್ದಾರೆಂಬ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸಚಿವ ಜಮೀರ್ ಅಹಮದ್ ಖಾನ್ (Zameer Ahmed Khan), ‘ ದರ್ಶನ್ ಪ್ರಕರಣದಲ್ಲಿ ಯಾರೂ ಪೊಲೀಸರ ಮೇಲೆ ಒತ್ತಡ ಹಾಕಿಲ್ಲ. ನಾನೇ ಪೊಲೀಸರ ಮೇಲೆ ಒತ್ತಡ ಹಾಕಿದ್ದೇನೆಂದು ಮಾಧ್ಯಮದಲ್ಲಿ ವರದಿಯಾಗಿದೆ. ಆದರೆ, ನಾನು ಒತ್ತಡ ಹಾಕಿಲ್ಲ ಎಂದು ಸ್ಪಷ್ಟನೆ ನೀಡಿದರು.

ಇಂದು(ಜೂ.22) ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ‘ದರ್ಶನ್ ಹಾಗೂ ನಾನು ಒಳ್ಳೆಯ ಸ್ನೇಹಿತರು ಆ ವಿಚಾರದಲ್ಲಿ ಇಲ್ಲ ಎಂದು ಹೇಳಲ್ಲ. ಇಂಥ ಘಟನೆ ಮಾಡಿದಾಗ ಯಾರು ಅವರ ಪರ ನಿಲ್ಲುತ್ತಾರೆ ಎಂದು ಪ್ರಶ್ನೆ ಮಾಡಿದರು. ತಪ್ಪು ತಪ್ಪೇ, ಉಪ್ಪು ತಿಂದವ ನೀರು ಕುಡಿಯಲೇಬೇಕು. ತಪ್ಪು ಯಾರೇ ಮಾಡಲಿ, ದರ್ಶನ್ ಇದ್ದರೂ ಅಷ್ಟೇ, ಇನ್ನೊಬ್ಬರು ಇದ್ದರಷ್ಟೇ ಶಿಕ್ಷೆ ಆಗಲೇಬೇಕು. ‘ನನ್ನ ಹೆಸರನ್ನ ಮಾಧ್ಯಮದಲ್ಲಿ ನೆರವಾಗಿ ಹೇಳಿಲ್ಲ, ಪರೋಕ್ಷವಾಗಿ ಹೇಳಿದ್ದಾರೆ ಎಂದರು.

ಇದನ್ನೂ ಓದಿ:‘ಶ್ವಾನದ ಮೇಲೆ ಆನೆ ದಾಳಿ ಮಾಡಿದಂತೆ’; ದರ್ಶನ್ ಪ್ರಕರಣದಲ್ಲಿ ಅಭಿಪ್ರಾಯ ಹಂಚಿಕೊಂಡ ಖ್ಯಾತ ನಿರ್ದೇಶಕ

ದರ್ಶನ್​ ವಿಚಾರದಲ್ಲಿ ಆತರ ಯಾವುದು ಇಲ್ಲ, ಕಾನೂನಿನ ಚೌಕಟ್ಟಿಯಲ್ಲಿ ತನಿಖೆ ನಡೆಯುತ್ತಿದೆ. ಅವರನ್ನ ಜೈಲಿಗೆ ಕಳಿಸಲಾಗಿದೆ. ಈ ನಿಟ್ಟಿನಲ್ಲಿ ನ್ಯಾಯಾಲಯ ಮುಂದಿನ ತೀರ್ಮಾನ ಮಾಡುತ್ತದೆ. ದರ್ಶನ್ ಪರ ಕೈ ಶಾಸಕ ಗೋವಿಂದಗೌಡ ಮಾತನಾಡಿದ ವಿಚಾರ, ‘ ಅವರವರ ಅಭಿಪ್ರಾಯವದು, ಅವರ ಅಭಿಪ್ರಾಯ ಅವರು ಹೇಳಿದ್ದಾರೆ, ನನ್ನ ಅಭಿಪ್ರಾಯ ನಾನು ಹೇಳಿದ್ದೇನೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:46 pm, Sat, 22 June 24

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us