ಡಿ.ಕೆ. ಬ್ರದರ್ಸ್ಗೆ ಅರಬ್ ಶೈಲಿಯಲ್ಲಿ ಆಮಂತ್ರಣ ಪತ್ರಿಕೆ ನೀಡಿ ಆತ್ಮೀಯ ಆಹ್ವಾನ ಕೋರಿದ ಜಮೀರ್ ಅಹಮದ್
ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ಗೆ ಡ್ರೈ ಫ್ರೂಟ್ಸ್ ಮತ್ತು ಚಾಕಲೇಟ್ ತುಂಬಿದ ಕಿಟ್ ನೀಡಿ ಉಡುಗೊರೆಯ ಜೊತೆ ಆಮಂತ್ರಣ ಪತ್ರಿಕೆ ಕೊಟ್ಟು ಶಾಸಕ ಜಮೀರ್ ಅಹಮದ್ ಖಾನ್ ತನ್ನ ಪುತ್ರಿಯ ಮದುವೆಗೆ ಆಹ್ವಾನಿಸಿದ್ದಾರೆ.
ಬೆಂಗಳೂರು: ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ತಮ್ಮ ಪುತ್ರಿಯ ಮದುವೆ ಸಂಭ್ರಮದಲ್ಲಿದ್ದಾರೆ. ಕಾಂಗ್ರೆಸ್ನ ಗಣ್ಯಾತಿಗಣ್ಯರಿಗೆ ಆಮಂತ್ರಣ ನೀಡಿ ಮದುವೆಗೆ ಬರುವಂತೆ ಆಹ್ವಾನಿಸುತ್ತಿದ್ದಾರೆ. ಇಂದು ಡಿಕೆ ಸಹೋದರರ ನಿವಾಸಕ್ಕೆ ತೆರಳಿ ಆಮಂತ್ರಣ ನೀಡಿದ್ದಾರೆ.
ಶಾಸಕ ಜಮೀರ್ ಅಹಮದ್ ಖಾನ್ ಪುತ್ರಿಯ ಮದುವೆ ನಿಶ್ಚಯವಾಗಿದ್ದು, ಜಮೀರ್ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟಿದೆ. ಆಮಂತ್ರಣ ಹಂಚುವ ಕಾರ್ಯದಲ್ಲಿ ಶಾಸಕ ಬಿಜಿಯಾಗಿದ್ದಾರೆ.
ವಸತಿ ಸಚಿವ ವಿ. ಸೋಮಣ್ಣ, ಸಚಿವ ಕೆ. ಗೋಪಾಲಯ್ಯ, ರಾಜ್ಯ ಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಚಿವ ಎನ್. ಚಲುವರಾಯ ಸ್ವಾಮಿ, ಮುಸ್ಲಿಂ ಮುಖಂಡರು ಸೇರಿದಂತೆ ಗಣ್ಯರಿಗೆ ಅರಬ್ ಶೈಲಿಯಲ್ಲಿ ವಿನ್ಯಾಸ ಮಾಡಿರುವ ಆಮಂತ್ರಣ ಪತ್ರಿಕೆ ನೀಡಿ ಹುಡುಗಿಯ ಅಪ್ಪ ಜಮೀರ್ ಆತ್ಮೀಯವಾಗಿ ಆಹ್ವಾನಿಸಿದ್ದಾರೆ.
ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ಗೆ ಡ್ರೈ ಫ್ರೂಟ್ಸ್ ಮತ್ತು ಚಾಕಲೇಟ್ ತುಂಬಿದ ಕಿಟ್ ನೀಡಿ ಉಡುಗೊರೆಯ ಜೊತೆ ಆಮಂತ್ರಣ ಪತ್ರಿಕೆ ಕೊಟ್ಟು ಆಹ್ವಾನಿಸಿದ್ದಾರೆ.