Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀರ್ ಅಹಮ್ಮದ್​ಗೆ ನಿಂದನೆ ಆರೋಪ: ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ಐಆರ್

ಸಚಿವ ಜಮೀರ್ ಅಹ್ಮದ್ ಖಾನ್ ಅವರ ವಿವಾದಾತ್ಮಕ ಹೇಳಿಕೆ ವಿರುದ್ಧ ಪ್ರತಿಕ್ರಿಯಿಸಿದ್ದ ಹಿಂದೂಪರ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಜಮೀರ್ ಅವರು ಮಾಡಿದ ಆಕ್ಷೇಪಾರ್ಹ ಹೇಳಿಕೆಗೆ ಪುನೀತ್ ವಿರೋಧ ವ್ಯಕ್ತಪಡಿಸಿದ್ದರು.

ಜಮೀರ್ ಅಹಮ್ಮದ್​ಗೆ ನಿಂದನೆ ಆರೋಪ: ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ಐಆರ್
ಜಮೀರ್ ಅಹಮ್ಮದ್​ಗೆ ನಿಂದನೆ ಆರೋಪ: ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ಐಆರ್
Follow us
Jagadisha B
| Updated By: ಗಂಗಾಧರ​ ಬ. ಸಾಬೋಜಿ

Updated on: Nov 13, 2024 | 10:05 PM

ಬೆಂಗಳೂರು, ನವೆಂಬರ್​ 13: ಧರ್ಮ, ಜಾತಿ ಹೆಸರಿನಲ್ಲಿ ಸಚಿವ ಜಮೀರ್​ ಅಹಮದ್ ಖಾನ್​ಗೆ ನಿಂದನೆ ಆರೋಪ ಹಿನ್ನೆಲೆ ಹಿಂದೂ ಪರ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneeth Kerehalli) ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಈ ಬಗ್ಗೆ ಸಚಿವ ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿ ದೂರು ನೀಡಿದ್ದರು.

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಜಮೀರ್ ಅಹ್ಮದ್ ಖಾನ್ ‘ಕಾಲಿಯಾ’ ಪದ ಬಳಕೆ ಮಾಡಿದ್ದು ರಾಜ್ಯಾದ್ಯಂತ ಕಿಡಿ ಹೊತ್ತಿಸಿದೆ. ಇದೇ ವಿಚಾರವಾಗಿ ಪುನೀತ್ ಕೆರೆಹಳ್ಳಿ ಜಮೀರ್ ಅಹ್ಮದ್ ಖಾನ್​ ವಿರುದ್ಧ ಧರ್ಮ, ಜಾತಿ ಹೆಸರಿನಲ್ಲಿ ನಿಂದನೆ ಆರೋಪ ಮಾಡಲಾಗಿದೆ. ಹೀಗಾಗಿ ಅವರ ವಿರುದ್ಧ ಇದೀಗ ಎಫ್​ಐಆರ್ ದಾಖಲಿಸಲಾಗಿದೆ.

ಧರ್ಮ ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿದ್ದು, ಜೊತೆಗೆ ಪ್ರಾಣ ಬೆದರಿಕೆ ಕೂಡ ಹಾಕಿದ್ದಾರೆ. ಹಾಗಾಗಿ ಕೂಡಲೇ ಎಫ್​ಐಆರ್​ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಎಂದು ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿ ದೂರಿನಲ್ಲಿ ಉಲ್ಲೇಖಿಸಿದ್ದರು.

ಇದನ್ನೂ ಓದಿ: ಚನ್ನಪಟ್ಟಣ ಉಪ ಚುನಾವಣೆ: ಹೆಚ್​ಡಿಕೆಗೆ “ಕರಿಯ ಕುಮಾರಸ್ವಾಮಿ” ಎಂದ ಜಮೀರ್​

ಚನ್ನಪಟ್ಟಣದಲ್ಲಿ ಸಚಿವ ಜಮೀರ್ ಅಹ್ಮದ್ ಅವರ ಬಾಯಿಂದ ಬಂದತಹ ಆ ಮಾತು ಕಾಂಗ್ರೆಸ್ ಅಭ್ಯರ್ಥಿಯನ್ನ ಹೊಗಳುವ ಭರದಲ್ಲಿ ಈ ಆಕ್ಷೇಪಾರ್ಹ ಹೇಳಿಕೆ ಕೊಟ್ಟಿದ್ದರು. ಟೀಕಿಸೋ ಭರದಲ್ಲಿ ವಿವಾದವನ್ನೇ ಸೃಷ್ಟಿಸಿಬಿಟ್ಟಿದ್ದಾರೆ.

ಅಮೆರಿಕದಲ್ಲಿ ಜೈಲಿಗೆ ಹಾಕುತ್ತಿದ್ದರು: ಆರ್.ಅಶೋಕ್

ಜಮೀರ್ ಅಹ್ಮದ್ ಖಾನ್ ಆಕ್ಷೇಪಾರ್ಹ ಹೇಳಿಕೆಯನ್ನು ವಿಪಕ್ಷ ನಾಯಕ ಆರ್.ಅಶೋಕ್ ಖಂಡಿಸಿದ್ದಾರೆ. ಅಮೆರಿಕದಲ್ಲೇನಾದರೂ ಹೀಗೆ ‘ಕರಿಯ’ ಎಂದಿದ್ದರೆ ಬಂಧಿಸಿ ಜೈಲಿಗೆ ಹಾಕುತ್ತಿದ್ದರು. ಆದರೆ ಇಲ್ಲಿ ಕರಿಯಾ ಎಂಬ ಪದ ಹೇಳಿದವನನ್ನು ಸಿದ್ದರಾಮಯ್ಯ ಪಕ್ಕದಲ್ಲೇ ಇಟ್ಟುಕೊಂಡಿದ್ದಾರೆ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ಷಮೆಯಾಚಿಸಿದ ಜಮೀರ್

ಕೇಂದ್ರ ಸಚಿವರ ವಿರುದ್ಧದ ಆಕ್ಷೇಪಾರ್ಹ ಹೇಳಿಕೆಗೆ ವಿರೋಧ ವ್ಯಕ್ತವಾಗ್ತಿದ್ದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಎಚ್ಚೆತ್ತುಕೊಂಡಿದ್ದಾರೆ. ನನ್ನ ಹೇಳಿಕೆಯಿಂದ ಜೆಡಿಎಸ್ ಮುಖಂಡರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ
ಜಾಮ್‌ನಗರದ ಬಳಿ ವಾಯುಪಡೆಯ ಯುದ್ಧ ವಿಮಾನ ಪತನವಾದ ಕ್ಷಣ ಸಿಸಿಟಿವಿಯಲ್ಲಿ ಸೆರೆ
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
‘ದರ್ಶನ್ ಅಪ್ಪಟ ಬಂಗಾರ’: ಡಿ ಬಾಸ್ ವ್ಯಕ್ತಿತ್ವ ವಿವರಿಸಿದ ಗಣೇಶ್ ಕಾಸರಗೋಡು
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಗ್ರಾಮಸ್ಥರ ಪ್ರಶ್ನೆಗಳಿಗೆ ಲಕ್ಷ್ಮಿಹೆಬ್ಬಾಳ್ಕರ್ ಅವರಲ್ಲಿ ಉತ್ತರವಿರಲಿಲ್ಲ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ವಕ್ಫ್ ತಿದ್ದುಪಡಿ ಬಿಲ್ ಬಗ್ಗೆ ನನ್ನ ಪಕ್ಷದ ಹಿರಿಯರು ಮಾತಾಡುತ್ತಾರೆ: ಸಚಿವೆ
ವಕ್ಫ್ ತಿದ್ದುಪಡಿ ಬಿಲ್ ಬಗ್ಗೆ ನನ್ನ ಪಕ್ಷದ ಹಿರಿಯರು ಮಾತಾಡುತ್ತಾರೆ: ಸಚಿವೆ
ಯಡಿಯೂರಪ್ಪ ಜೊತೆ ಬಸ್ಸಲ್ಲಿ ಹೋಗಲು ಬಿಜೆಪಿ ನಾಯಕರಲ್ಲಿ ಪೈಪೋಟಿ
ಯಡಿಯೂರಪ್ಪ ಜೊತೆ ಬಸ್ಸಲ್ಲಿ ಹೋಗಲು ಬಿಜೆಪಿ ನಾಯಕರಲ್ಲಿ ಪೈಪೋಟಿ