ಬೆಂಗಳೂರು, ನವೆಂಬರ್ 13: ಧರ್ಮ, ಜಾತಿ ಹೆಸರಿನಲ್ಲಿ ಸಚಿವ ಜಮೀರ್ ಅಹಮದ್ ಖಾನ್ಗೆ ನಿಂದನೆ ಆರೋಪ ಹಿನ್ನೆಲೆ ಹಿಂದೂ ಪರ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneeth Kerehalli) ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಈ ಬಗ್ಗೆ ಸಚಿವ ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿ ದೂರು ನೀಡಿದ್ದರು.
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಜಮೀರ್ ಅಹ್ಮದ್ ಖಾನ್ ‘ಕಾಲಿಯಾ’ ಪದ ಬಳಕೆ ಮಾಡಿದ್ದು ರಾಜ್ಯಾದ್ಯಂತ ಕಿಡಿ ಹೊತ್ತಿಸಿದೆ. ಇದೇ ವಿಚಾರವಾಗಿ ಪುನೀತ್ ಕೆರೆಹಳ್ಳಿ ಜಮೀರ್ ಅಹ್ಮದ್ ಖಾನ್ ವಿರುದ್ಧ ಧರ್ಮ, ಜಾತಿ ಹೆಸರಿನಲ್ಲಿ ನಿಂದನೆ ಆರೋಪ ಮಾಡಲಾಗಿದೆ. ಹೀಗಾಗಿ ಅವರ ವಿರುದ್ಧ ಇದೀಗ ಎಫ್ಐಆರ್ ದಾಖಲಿಸಲಾಗಿದೆ.
ಧರ್ಮ ಧರ್ಮಗಳ ನಡುವೆ ಸಂಘರ್ಷ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿದ್ದು, ಜೊತೆಗೆ ಪ್ರಾಣ ಬೆದರಿಕೆ ಕೂಡ ಹಾಕಿದ್ದಾರೆ. ಹಾಗಾಗಿ ಕೂಡಲೇ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಎಂದು ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿ ದೂರಿನಲ್ಲಿ ಉಲ್ಲೇಖಿಸಿದ್ದರು.
ಇದನ್ನೂ ಓದಿ: ಚನ್ನಪಟ್ಟಣ ಉಪ ಚುನಾವಣೆ: ಹೆಚ್ಡಿಕೆಗೆ “ಕರಿಯ ಕುಮಾರಸ್ವಾಮಿ” ಎಂದ ಜಮೀರ್
ಚನ್ನಪಟ್ಟಣದಲ್ಲಿ ಸಚಿವ ಜಮೀರ್ ಅಹ್ಮದ್ ಅವರ ಬಾಯಿಂದ ಬಂದತಹ ಆ ಮಾತು ಕಾಂಗ್ರೆಸ್ ಅಭ್ಯರ್ಥಿಯನ್ನ ಹೊಗಳುವ ಭರದಲ್ಲಿ ಈ ಆಕ್ಷೇಪಾರ್ಹ ಹೇಳಿಕೆ ಕೊಟ್ಟಿದ್ದರು. ಟೀಕಿಸೋ ಭರದಲ್ಲಿ ವಿವಾದವನ್ನೇ ಸೃಷ್ಟಿಸಿಬಿಟ್ಟಿದ್ದಾರೆ.
ಜಮೀರ್ ಅಹ್ಮದ್ ಖಾನ್ ಆಕ್ಷೇಪಾರ್ಹ ಹೇಳಿಕೆಯನ್ನು ವಿಪಕ್ಷ ನಾಯಕ ಆರ್.ಅಶೋಕ್ ಖಂಡಿಸಿದ್ದಾರೆ. ಅಮೆರಿಕದಲ್ಲೇನಾದರೂ ಹೀಗೆ ‘ಕರಿಯ’ ಎಂದಿದ್ದರೆ ಬಂಧಿಸಿ ಜೈಲಿಗೆ ಹಾಕುತ್ತಿದ್ದರು. ಆದರೆ ಇಲ್ಲಿ ಕರಿಯಾ ಎಂಬ ಪದ ಹೇಳಿದವನನ್ನು ಸಿದ್ದರಾಮಯ್ಯ ಪಕ್ಕದಲ್ಲೇ ಇಟ್ಟುಕೊಂಡಿದ್ದಾರೆ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸಚಿವರ ವಿರುದ್ಧದ ಆಕ್ಷೇಪಾರ್ಹ ಹೇಳಿಕೆಗೆ ವಿರೋಧ ವ್ಯಕ್ತವಾಗ್ತಿದ್ದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಎಚ್ಚೆತ್ತುಕೊಂಡಿದ್ದಾರೆ. ನನ್ನ ಹೇಳಿಕೆಯಿಂದ ಜೆಡಿಎಸ್ ಮುಖಂಡರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.