ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ 55 ಸರಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ

|

Updated on: Jul 10, 2023 | 2:23 PM

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವು ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಒಂದನೇ ತರಗತಿಗೆ ಮಕ್ಕಳ ದಾಖಲೆ ಸಂಖ್ಯೆ ಶೂನ್ಯವಾಗಿರುವುದು ಅಚ್ಚರಿ ಮೂಡಿಸಿದೆ.

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ 55 ಸರಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ
ಸಾಂದರ್ಭಿಕ ಚಿತ್ರ
Follow us on

ಉಡುಪಿ/ದಕ್ಷಿಣ ಕನ್ನಡ: 2023-24ನೇ ಸಾಲಿನ ಶೈಕ್ಷಣಿಕ ವರ್ಷ (2023-24 Academic Year) ಆರಂಭವಾಗಿ ಒಂದು ತಿಂಗಳು ಕಳೆಯಿತು. ಶಾಲೆಗಳ (School) ಬಾಗಿಲು ತೆರದಿದ್ದು, ಬೇಸಿಗೆ ರಜೆ ಕಳೆದು ಮಕ್ಕಳು ಶಾಲೆಗಳಿಗೆ ಹೋಗುತ್ತಿದ್ದಾರೆ. ಇನ್ನು ಹೊಸದಾಗಿ ಮಕ್ಕಳು ಶಾಲೆಗಳಿಗೆ ದಾಖಲಾಗುತ್ತಿದ್ದಾರೆ. ಆದರೆ ದಕ್ಷಿಣ ಕನ್ನಡ (Dakshina Kannada) ಮತ್ತು ಉಡುಪಿ (Udupi) ಜಿಲ್ಲೆಗಳ ಹಲವು ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ (Government Primary School) ಒಂದನೇ ತರಗತಿಗೆ ಮಕ್ಕಳ ದಾಖಲೆ ಸಂಖ್ಯೆ ಶೂನ್ಯವಾಗಿರುವುದು ಅಚ್ಚರಿ ಮೂಡಿಸಿದೆ. ಹೌದು ಎರಡು ಜಿಲ್ಲೆಗಳ 55 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿನ ಒಂದನೇ ತರಗತಿಗೆ ಯಾವುದೇ ವಿದ್ಯಾರ್ಥಿ ದಾಖಲಾಗಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಸಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ದಿ ಇಂಡಿಯನ್​ ಎಕ್ಸಪ್ರೆಸ್​ ವರದಿ ಮಾಡಿದೆ.

ದಕ್ಷಿಣ ಕನ್ನಡದ 24 ಶಾಲೆಗಳಲ್ಲಿ ಒಂದನೇ ತರಗತಿಗೆ ಶೂನ್ಯ ದಾಖಲಾತಿ. ಪುತ್ತೂರು ತಾಲೂಕಿನ ಎರಡು, ಬಂಟ್ವಾಳದ ನಾಲ್ಕು, ಬೆಳ್ತಂಗಡಿಯಲ್ಲಿ ಮೂರು, ಮಂಗಳೂರು ಉತ್ತರದಲ್ಲಿ ಎರಡು, ಮಂಗಳೂರು ದಕ್ಷಿಣದಲ್ಲಿ ಎರಡು, ಮೂಡುಬಿದಿರೆಯ ಮೂರು ಮತ್ತು ಸುಳ್ಯ ತಾಲೂಕಿನ ಎಂಟು ಶಾಲೆಗಳಿಗೆ ಮಕ್ಕಳ ದಾಖಲಾತಿ ಸಂಖ್ಯೆ ಶೂನ್ಯವಾಗಿದೆ.

ಈ ಬಗ್ಗೆ ದಕ್ಷಿಣ ಕನ್ನಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ (DDPI) ಆರ್ ದಯಾನಂದ ಮಾತನಾಡಿ, ಪ್ರವೇಶಕ್ಕೆ ಇನ್ನೂ ಸಮಯವಿದ್ದು, ಮಕ್ಕಳು ಶಾಲೆಗಳಿಗೆ ಸೇರುವ ಸಾಧ್ಯತೆಯಿದೆ. ಗ್ರೇಡ್‌ವಾರು ಡೇಟಾ ಕ್ರೋಢೀಕರಣ ಪ್ರಕ್ರಿಯೆಯು ನಡೆಯುತ್ತಿದೆ ಎಂದರು.

ಇದನ್ನೂ ಓದಿ: ದಿನ ಬೆಳಗಾದ್ರೆ ಸಾಕು ಪ್ರೌಢಶಾಲೆಯಲ್ಲಿ ಅಶ್ಲೀಲ ಗೋಡೆ ಬರಹ ನೋಡಿ ವಿದ್ಯಾರ್ಥಿನಿಯರು ಕಣ್ಣೀರುಡುತ್ತಿದ್ದಾರೆ, ಇದಕ್ಕೆಲ್ಲ ಕೊನೆ ಯಾವಾಗ?

ಉಡುಪಿ ಜಿಲ್ಲೆಯಲ್ಲಿ 31 ಶಾಲೆಗಳಲ್ಲಿ ಒಂದನೇ ತರಗತಿಗೆ ಶೂನ್ಯ ದಾಖಲಾತಿ ಇದೆ. ಉಡುಪಿಯಲ್ಲಿ ನಾಲ್ಕು, ಬ್ರಹ್ಮಾವರದಲ್ಲಿ ನಾಲ್ಕು, ಕುಂದಾಪುರದಲ್ಲಿ ಐದು, ಬೈಂದೂರಿನಲ್ಲಿ ಒಂಬತ್ತು, ಕಾರ್ಕಳ ತಾಲೂಕಿನಲ್ಲಿ ಒಂಬತ್ತು ಶಾಲೆಗಳ ಒಂದನೇ ತರಗತಿಗೆ ದಾಖಲಾದ ಮಕ್ಕಳ ಸಂಖ್ಯೆ ಶೂನ್ಯವಾಗಿದೆ.

ಉತ್ತಮ ಮೂಲಸೌಕರ್ಯ ಮತ್ತು ಸಾರಿಗೆ ಸೌಲಭ್ಯ ಹೊಂದಿರುವ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಏರಿಕೆಯಾಗಿರುವುದು ಸರ್ಕಾರಿ ಶಾಲೆಗಳ ಪ್ರವೇಶದ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ ಎಂದು ಉಡುಪಿ ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಡಿಸೆಂಬರ್ 2022 ರಲ್ಲಿ ವಿಧಾನ ಪರಿಷತ್ತಿಗೆ ಸಲ್ಲಿಸಲಾದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ವರದಿಯ ಪ್ರಕಾರ, ‘ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಾ ಅಭಿಯಾನ’ (RMSA) ಕಳೆದ 13 ವರ್ಷಗಳಲ್ಲಿ ಖಾಸಗಿ ಶಾಲೆಗಳ ಪ್ರವೇಶವು ಶೇಕಡಾ 335 ರಷ್ಟು ಹೆಚ್ಚಾಗಿದೆ, ಆದರೆ ಸರ್ಕಾರಿ ಶಾಲೆಗಳಿಗೆ ಪ್ರವೇಶ ಕೇವಲ 30 ರಷ್ಟು ಹೆಚ್ಚಾಗಿದೆ ಎಂದು ತಿಳಿಸಿದೆ.

ಮತ್ತಷ್ಟು ಶೈಕ್ಷಣಿಕ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ