ರಾಜ್ಯದ ರೈತರಿಗೆ ಸರ್ಕಾರದಿಂದ ಸಿಹಿ ಸುದ್ದಿ, ಶೂನ್ಯ ಬಡ್ಡಿ ದರದಲ್ಲಿ ಸಾಲ

|

Updated on: May 22, 2020 | 12:50 PM

ಬೆಂಗಳೂರು: ಕೊರೊನಾ ಪೀಡೆಯಿಂದ ನರಳುತ್ತಿರುವ ರಾಜ್ಯದ ರೈತರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. 2019-20ನೇ ಸಾಲಿನಲ್ಲಿ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ ನೀಡಲು ಸೂಚಿಸಲಾಗಿದೆ. ಸಹಕಾರ ಸಂಸ್ಥೆಗಳಿಂದ ₹3 ಲಕ್ಷದವರೆಗೆ ಅಲ್ಪಾವಧಿ ಸಾಲ ನೀಡಲು ಸಿಎಂ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಹೀಗಾಗಿ 3 ಲಕ್ಷದ ವರೆಗೆ ರೈತರಿಗೆ ಬಡ್ಡಿ ರಹಿತ ಸಾಲ ಸಿಗಲಿದೆ. ಅಲ್ಪಾವಧಿ ಕೃಷಿ ಸಾಲ ನೀಡಲು ಸರ್ಕಾರದ ಆದೇಶ ನೀಡಿದೆ. ಕೃಷಿ ಪತ್ತಿನ ಸಹಕಾರಿ ಸಂಘ, ಕೇಂದ್ರ ಸಹಕಾರಿ […]

ರಾಜ್ಯದ ರೈತರಿಗೆ ಸರ್ಕಾರದಿಂದ ಸಿಹಿ ಸುದ್ದಿ, ಶೂನ್ಯ ಬಡ್ಡಿ ದರದಲ್ಲಿ ಸಾಲ
ಸಿಎಂ ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ)
Follow us on

ಬೆಂಗಳೂರು: ಕೊರೊನಾ ಪೀಡೆಯಿಂದ ನರಳುತ್ತಿರುವ ರಾಜ್ಯದ ರೈತರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. 2019-20ನೇ ಸಾಲಿನಲ್ಲಿ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ ನೀಡಲು ಸೂಚಿಸಲಾಗಿದೆ.

ಸಹಕಾರ ಸಂಸ್ಥೆಗಳಿಂದ ₹3 ಲಕ್ಷದವರೆಗೆ ಅಲ್ಪಾವಧಿ ಸಾಲ ನೀಡಲು ಸಿಎಂ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಹೀಗಾಗಿ 3 ಲಕ್ಷದ ವರೆಗೆ ರೈತರಿಗೆ ಬಡ್ಡಿ ರಹಿತ ಸಾಲ ಸಿಗಲಿದೆ. ಅಲ್ಪಾವಧಿ ಕೃಷಿ ಸಾಲ ನೀಡಲು ಸರ್ಕಾರದ ಆದೇಶ ನೀಡಿದೆ. ಕೃಷಿ ಪತ್ತಿನ ಸಹಕಾರಿ ಸಂಘ, ಕೇಂದ್ರ ಸಹಕಾರಿ ಬ್ಯಾಂಕ್, ಪಿಕಾರ್ಡ್​ ಬ್ಯಾಂಕ್​ಗಳ ಮೂಲಕ ಸಾಲ ಸಿಗಲಿದೆ.

Published On - 10:54 am, Fri, 22 May 20