AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಲ್ಪರಿಗೆ ಐಶ್ವರ್ಯ ಬಂದರೆ ಮಧ್ಯರಾತ್ರಿಲಿ ಕೊಡೆ ಹಿಡಿದರು’: ಪ್ರಿಯಾಂಕ್ ಖರ್ಗೆಗೆ ಝೀರೋ ಟ್ರಾಫಿಕ್​ಗೆ ಬಿಸಿ ಪಾಟೀಲ್ ಆಕ್ರೋಶ

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಏರ್‌ಪೋರ್ಟ್‌ಗೆ ತೆರಳುವ ವೇಳೆ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು ಎಂದು ಮಾಜಿ ಸಚಿವ ಬಿಸಿ ಪಾಟೀಲ್ ಆರೋಪಿಸಿದ್ದಾರೆ. ಇದರಿಂದ ಸಾಮಾನ್ಯ ಪ್ರಯಾಣಿಕರಿಗೆ ತೊಂದರೆಯಾಗಿದೆ. ಗೃಹ ಸಚಿವರಿಗೆ ಝೀರೋ ಟ್ರಾಫಿಕ್ ನೀಡುವ ಪದ್ಧತಿ ಇಲ್ಲ. ಇಂಥವುಗಳ ವಿರುದ್ಧ ಮುಖ್ಯಮಂತ್ರಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬಿಸಿ ಪಾಟೀಲ್ ಆಗ್ರಹಿಸಿದ್ದಾರೆ.

‘ಅಲ್ಪರಿಗೆ ಐಶ್ವರ್ಯ ಬಂದರೆ ಮಧ್ಯರಾತ್ರಿಲಿ ಕೊಡೆ ಹಿಡಿದರು’: ಪ್ರಿಯಾಂಕ್ ಖರ್ಗೆಗೆ ಝೀರೋ ಟ್ರಾಫಿಕ್​ಗೆ ಬಿಸಿ ಪಾಟೀಲ್ ಆಕ್ರೋಶ
ಪ್ರಿಯಾಂಕ್ ಖರ್ಗೆಗೆ ಝೀರೋ ಟ್ರಾಫಿಕ್​ಗೆ ಬಿಸಿ ಪಾಟೀಲ್ ಆಕ್ರೋಶImage Credit source: tv9
ಗಣಪತಿ ಶರ್ಮಾ
|

Updated on: Sep 01, 2026 | 11:08 AM

Share

ಬೆಂಗಳೂರು, ಸೆಪ್ಟೆಂಬರ್ 1: ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ವಿಮಾನ ನಿಲ್ದಾಣಕ್ಕೆ ತೆರಳುವ ವೇಳೆ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು ಎಂದು ಮಾಜಿ ಸಚಿವ ಬಿಸಿ ಪಾಟೀಲ್ (BC Patil) ಆರೋಪಿಸಿದ್ದಾರೆ. ಈ ಬಗ್ಗೆ ಎಕ್ಸ್‌ (X)ನಲ್ಲಿ ಪೋಸ್ಟ್ ಮಾಡಿರುವ ಅವರು, ಝೀರೋ ಟ್ರಾಫಿಕ್‌ನಿಂದಾಗಿ ಏರ್‌ಪೋರ್ಟ್‌ಗೆ ತೆರಳುತ್ತಿದ್ದ ಪ್ರಯಾಣಿಕರು ಪರದಾಡುವಂತಾಯಿತು ಎಂದು ಹೇಳಿದ್ದಾರೆ. ‘ಇಂದು ಬೆಳಗ್ಗೆ 5.30ರ ಸುಮಾರಿಗೆ ಬೆಂಗಳೂರಿನಿಂದ ಏರ್‌ಪೋರ್ಟ್‌ಗೆ ತೆರಳುತ್ತಿದ್ದ ವೇಳೆ ಟ್ರಾಫಿಕ್ ಪೊಲೀಸರು ರಸ್ತೆ ಸಂಚಾರವನ್ನು ತಡೆದು ‘ಝೀರೋ ಟ್ರಾಫಿಕ್’ ಇದೆ ಎಂದು ತಿಳಿಸಿದರು’ ಎಂದು ಬಿ.ಸಿ. ಪಾಟೀಲ್ ಹೇಳಿದ್ದಾರೆ. ಯಾರು ತೆರಳುತ್ತಿದ್ದಾರೆ ಎಂದು ವಿಚಾರಿಸಿದಾಗ ಕರ್ನಾಟಕದ ಗೃಹ ಸಚಿವರು ಏರ್‌ಪೋರ್ಟ್‌ಗೆ ಹೋಗುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾಗಿ ಅವರು ಎಕ್ಸ್​ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

‘ಅಲ್ಪರಿಗೆ ಐಶ್ವರ್ಯ ಬಂದರೆ ಮಧ್ಯರಾತ್ರಿಲಿ ಕೊಡೆ ಹಿಡಿದಿದ್ದರು’ ಎಂದ ಹಾಗಾಯ್ತು ಈ ಕರ್ನಾಟಕ ರಾಜ್ಯದ ಗೃಹಮಂತ್ರಿ ಕತೆ ಎಂದು ವ್ಯಂಗ್ಯವಾಡಿರುವ ಬಿಸಿ ಪಾಟೀಲ್, ಸಾಕಷ್ಟು ಪ್ರಯಾಣಿಕರು ಫ್ಲೈಟ್ ತಪ್ಪಿ ಹೋಗುತ್ತೆ ಅಂತ ಪರದಾಡ್ತಾ ಇದ್ದರು ಎಂದು ಉಲ್ಲೇಖಿಸಿದ್ದಾರೆ.

ಬಿಸಿ ಪಾಟೀಲ್ ಎಕ್ಸ್ ಸಂದೇಶ

ಗೃಹ ಸಚಿವರಿಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡುವ ಅಗತ್ಯವಿಲ್ಲ ಎಂಬುದು ತಮ್ಮ ಅಭಿಪ್ರಾಯ ಎಂದು ಬಿ.ಸಿ. ಪಾಟೀಲ್ ಹೇಳಿದ್ದಾರೆ. ಝೀರೋ ಟ್ರಾಫಿಕ್‌ನಿಂದ ಸಂಪೂರ್ಣ ಟ್ರಾಫಿಕ್ ಜಾಮ್ ಉಂಟಾಗಿ, ಏರ್‌ಪೋರ್ಟ್‌ಗೆ ತೆರಳುತ್ತಿದ್ದ ಪ್ರಯಾಣಿಕರು ತೊಂದರೆ ಅನುಭವಿಸಿದರು. ಕೆಲವರು ವಿಮಾನ ತಪ್ಪುವ ಆತಂಕದಲ್ಲಿದ್ದರು ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ 911 ಅಕ್ರಮ ನುಸುಳುಕೋರರ ಪತ್ತೆ: ಪರಿಷತ್‌ನಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

ಪ್ರಿಯಾಂಕ್ ಖರ್ಗೆ ಅವರು ಎಐಸಿಸಿ ಅಧ್ಯಕ್ಷರ ಪುತ್ರ ಎಂಬ ಕಾರಣಕ್ಕೆ ವಿಶೇಷ ಸೌಲಭ್ಯ ನೀಡಲಾಗುತ್ತಿದೆಯೇ ಎಂದು ಪ್ರಶ್ನಿಸಿರುವ ಬಿ.ಸಿ. ಪಾಟೀಲ್, ಇಂತಹ ಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳು ಗೃಹ ಸಚಿವರಿಗೆ ಸೂಕ್ತ ತಿಳುವಳಿಕೆ ನೀಡಿ, ಕಾನೂನುಬದ್ಧವಾಗಿ ನಡೆದುಕೊಳ್ಳುವಂತೆ ಗಮನಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹಾರ್ಮುಜ್​ನಲ್ಲಿ ಶಾಂತಿ, ಉಕ್ರೇನ್ ಯುದ್ಧ ಅಂತ್ಯಕ್ಕೆ ಕರೆ
ಹಾರ್ಮುಜ್​ನಲ್ಲಿ ಶಾಂತಿ, ಉಕ್ರೇನ್ ಯುದ್ಧ ಅಂತ್ಯಕ್ಕೆ ಕರೆ
ಸಿಕ್ಸ್​ ಪ್ಯಾಕ್​, ಟ್ಯಾಟು, ಶೋಕಿ ಜೀವನ: ಈತ ಯಾರೋ ಸೆಲೆಬ್ರಿಟಿ ಅಲ್ಲ, PDO
ಸಿಕ್ಸ್​ ಪ್ಯಾಕ್​, ಟ್ಯಾಟು, ಶೋಕಿ ಜೀವನ: ಈತ ಯಾರೋ ಸೆಲೆಬ್ರಿಟಿ ಅಲ್ಲ, PDO
‘ಟಾಕ್ಸಿಕ್’ನಿಂದ ಅರ್ಧಕ್ಕೆ ಹೊರಬಂದೆ’; ಬಿಗ್ ಬಾಸ್ ಮಾಜಿ ಸ್ಪರ್ಧಿಯ ಹೇಳಿಕೆ
‘ಟಾಕ್ಸಿಕ್’ನಿಂದ ಅರ್ಧಕ್ಕೆ ಹೊರಬಂದೆ’; ಬಿಗ್ ಬಾಸ್ ಮಾಜಿ ಸ್ಪರ್ಧಿಯ ಹೇಳಿಕೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ