AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಝಿಕಾ ವೈರಸ್ ಪತ್ತೆ: ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟದಲ್ಲಿ ಅಪಾಯಕಾರಿ ಝಿಕಾ ವೈರಸ್ ಪತ್ತೆಯಾಗಿದೆ. ಇದರಿಂದ ತಲಕಾಯಲಬೆಟ್ಟ, ದಿಬ್ಬೂರಹಳ್ಳಿ, ಶಿಡ್ಲಘಟ್ಟ ಜನರಲ್ಲಿ ಆತಂಕ ಹೆಚ್ಚಾಗಿದೆ. ಸದ್ಯ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮವಾಗಿ ಝಿಕಾ ವೈರಸ್ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ ಝಿಕಾ ವೈರಸ್ ಪತ್ತೆ: ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ
ಪ್ರಾತಿನಿಧಿಕ ಚಿತ್ರ
Vinay Kashappanavar
| Updated By: ಗಂಗಾಧರ​ ಬ. ಸಾಬೋಜಿ|

Updated on:Nov 02, 2023 | 6:55 PM

Share

ಬೆಂಗಳೂರು, ನವೆಂಬರ್​​​​ 02: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟದಲ್ಲಿ ಅಪಾಯಕಾರಿ ಝಿಕಾ ವೈರಸ್  (Zika Virus)  ಪತ್ತೆಯಾಗಿದೆ. ಇದರಿಂದ ತಲಕಾಯಲಬೆಟ್ಟ, ದಿಬ್ಬೂರಹಳ್ಳಿ, ಶಿಡ್ಲಘಟ್ಟ ಜನರಲ್ಲಿ ಆತಂಕ ಹೆಚ್ಚಾಗಿದೆ. ಸದ್ಯ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮವಾಗಿ ಝಿಕಾ ವೈರಸ್ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆ ಮೂಲಕ ಸ್ಥಳೀಯ ಆರೋಗ್ಯ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಆಯಾ ಜಿಲ್ಲಾಡಳಿತ ಮಟ್ಟದಲ್ಲಿ ಕ್ರಮಗಳನ್ನು ಕೈಗೊಳ್ಳವಂತೆ ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ.

ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳು

  • ಕಣ್ಣು ಕೆಂಪಾಗುವುದು, ತಲೆನೋವು, ಮೈಕೈ ನೋವು, ಜ್ವರ ಇಂತಹ ಲಕ್ಷಣಗಳು ಕಂಡುಬಂದರೆ ವೈದ್ಯರನ್ನ ಸಂಪರ್ಕಿಸಿ.
  • ಗರ್ಭಿಣಿ ಮಹಿಳೆಯರು ಎಚ್ಚರಿಕೆಯಿಂದ ಇರಬೇಕು. ಕೂಡಲೇ ಕ್ಲಿನಿಕ್​ನಲ್ಲಿ ತಪಾಸಣೆ ಮಾಡಿಸಿಕೊಳ್ಳಿ.
  • ಝಿಕಾ ವೈರಸ್ ಪತ್ತೆಯಾದ 5 ಕಿಮೀಟರ್ ವ್ಯಾಪ್ತಿಯಲ್ಲಿ ಕಂಟೈನ್ಮೆಂಟ್ ಝೋನ್ ಘೋಷಣೆ ಮಾಡಲಾಗುವುದು.
  • ಮನೆ ಮನೆಗೆ ತೆರಳಿ ಆಶಾ ಕಾರ್ಯಕರ್ತೆಯರು ಜ್ವರ ತಪಾಸಣೆ ನಡೆಸಲಿದ್ದಾರೆ.

ರೋಗದ ಲಕ್ಷಣಗಳು

  • ಕಣ್ಣು ಕೆಂಪಾಗುವಿಕೆ
  • ತಲೆ ನೋವು
  • ಜ್ವರ
  • ಕೀಲುಗಳಲ್ಲಿ ನೋವು
  • ಗಂಧೆಗಳು
  • ಸ್ನಾಯುಗಳಲ್ಲಿ ನೋವು

ಝಿಕಾ ವೈರಸ್ ತಡೆಗಟ್ಟಲು ಜನಸಾಮಾನ್ಯರ ಜವಾಬ್ದಾರಿ

  • ನೀರು ಶೇಖರಣಾ ಪರಿಕರಗಳನ್ನು ಮುಚ್ಚಳದಿಂದ ಮುಚ್ಚಿಡಿ ಮತ್ತು ವಾರಕ್ಕೊಮ್ಮೆ ಸ್ವಚ್ಛಗೊಳಿಸಿ.
  • ಮನೆಯ ಸುತ್ತ-ಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಿ ಹಾಗೂ ಘನತ್ಯಾಜ್ಯ ವಸ್ತುಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಿ.
  • ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಿ, ಮಕ್ಕಳು, ವಯೋವೃದ್ದರು ವಿಶ್ರಾಂತಿ ಪಡೆಯುವಾಗ ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಬಳಸಿ.
  • ಸೊಳ್ಳೆಗಳು ಸಾಮಾನ್ಯವಾಗಿ ಸಂತಾನೋತ್ಪತ್ತಿ ಮಾಡುವುದು ನಿಂತ ನೀರಲ್ಲಿ ಹೀಗಾಗಿ ಮನೆಯ ಸುತ್ತಲೂ ನೀರು ನಿಲ್ಲದಂತೆ ಮುಂಜಾಗ್ರತೆ ವಹಿಸಬೇಕು.
  • ಪ್ರತಿಯೊಬ್ಬ ವ್ಯಕ್ತಿಯೂ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ, ವೈರಸ್ ಹರಡುವ ಸಾಧ್ಯತೆ ಕಡಿಮೆಯಾಗುತ್ತೆ.
  • ರೋಗ ಲಕ್ಷಣಗಳು ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, 2 ರಿಂದ 7 ದಿನಗಳವರೆಗೆ ಇರುತ್ತದೆ.
  • ಗರ್ಭಿಣಿಯರು ವಿಶೇಷವಾಗಿ ಎಚ್ಚರಿಕೆ ವಹಿಸಬೇಕು.
  • ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ.
  • ಯಾವುದೇ ರೋಗ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆ ಅಥವಾ ವೈದ್ಯರನ್ನು ಸಂಪರ್ಕ ಮಾಡಿ.

ಇದನ್ನೂ ಓದಿ: ಝಿಕಾ ವೈರಸ್​​ ಪಾಸಿಟಿವ್ ಬಂದರು ಆತಂಕ ಬೇಡ: ಆರೋಗ್ಯ ಇಲಾಖೆ ಆಯುಕ್ತ ರಂದೀಪ್

ಆರೋಗ್ಯ ಇಲಾಖೆಯ ಆಯುಕ್ತ ರಂದೀಪ್​ ಪ್ರತಿಕ್ರಿಯೆ ನೀಡಿದ್ದು, ಡೆಂಘೀ ರೀತಿಯಲ್ಲಿ ತುಂಬಾ ಗಂಭೀರ ಸ್ವರೂಪವಿಲ್ಲ. ಮರಣದ ಪ್ರಮಾಣದ ಕಡಿಮೆ ಇರುತ್ತದೆ‌. ಆದರೆ ಗರ್ಭಿಣಿಯರು ಎಚ್ಚರಿಕೆ ವಹಿಸಬೇಕು. ಮಗುವಿ‌ನ ಬ್ರೈನ್ ಬೆಳವಣಿಗೆಗೆ ತೊಂದರೆಯಾಗಲಿದೆ. ಝೀಕಾ ಪಾಸಿಟಿವ್ ಬಂದರು ತೀರಾ ಆತಂಕ ಬೇಡ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:52 pm, Thu, 2 November 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!