AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ತಿಂಗಳಲ್ಲಿ ಜಿಪಂ, ತಾಪಂ ಚುನಾವಣೆ ಸಾಧ್ಯತೆ: ಸಚಿವ ಕೆಎಸ್ ಈಶ್ವರಪ್ಪ

ಕ್ಷೇತ್ರಗಳ ಪುನರ್​ವಿಂಗಡನೆ ಪ್ರಕ್ರಿಯೆಯಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ. ಗಡಿ ಮಾತ್ರ ಬದಲಾವಣೆ ಆಗುತ್ತದೆ ಎಂದು ಸ್ಪಷ್ಟಪಡಿಸಿದರು.

ಮೂರು ತಿಂಗಳಲ್ಲಿ ಜಿಪಂ, ತಾಪಂ ಚುನಾವಣೆ ಸಾಧ್ಯತೆ: ಸಚಿವ ಕೆಎಸ್ ಈಶ್ವರಪ್ಪ
ಸಚಿವ ಕೆ.ಎಸ್.ಈಶ್ವರಪ್ಪ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 30, 2021 | 9:17 PM

ಬೆಂಗಳೂರು: ಇನ್ನು ಮೂರು ತಿಂಗಳಲ್ಲಿ ಅಂದರೆ, 2022ರ ಮಾರ್ಚ್​ ತಿಂಗಳ ಒಳಗೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಕ್ಷೇತ್ರಗಳ ಪುನರ್​ವಿಂಗಡನೆ ಪ್ರಕ್ರಿಯೆಯಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ. ಗಡಿ ಮಾತ್ರ ಬದಲಾವಣೆ ಆಗುತ್ತದೆ ಎಂದು ಸ್ಪಷ್ಟಪಡಿಸಿದರು.

ನರೇಗಾ ಯೋಜನೆಯಡಿ 2021-22ನೇ ಸಾಲಿನಲ್ಲಿ ನೀಡಿದ್ದ 13 ಕೋಟಿ ಮಾನವ ದಿನದ ಗುರಿಯನ್ನು ಮೀರಿ ಕರ್ನಾಟಕದಲ್ಲಿ ಉದ್ಯೋಗ ಸೃಜನೆಯಾಗಿದೆ. ಈವರೆಗೆ ₹ 13.14 ಕೋಟಿ ಮಾನವ ದಿನಗಳ ಉದ್ಯೋಗ ಸೃಜನೆಯಾಗಿದೆ. ಸರ್ಕಾರದ ಬೇಡಿಕೆ ಪರಿಗಣಿಸಿ ಉದ್ಯೋಗ ಸೃಜನೆಗೆ ಅವಕಾಶ ನೀಡಲಾಗಿದೆ. ಈ ಸಾಲಿನಲ್ಲಿ ₹ 1.40 ಕೋಟಿ ಉದ್ಯೋಗ ಸೃಜನೆಗೆ ಕೇಂದ್ರವು ಒಪ್ಪಿಗೆ ನೀಡಿದೆ. ಇದರಿಂದ ರಾಜ್ಯಕ್ಕೆ ಹೆಚ್ಚುವರಿ ₹ 715 ಕೋಟಿ ಅನುದಾನ ಲಭ್ಯವಾಗಿದೆ. ಈ ವರ್ಷ ₹ 10.68 ಲಕ್ಷ ಜನರು ಯೋಜನೆಗೆ ಸೇರ್ಪಡೆಯಾಗಿದ್ದಾರೆ ಎಂದು ನುಡಿದರು.

ಜಲಶಕ್ತಿ ಅಭಿಯಾನದಲ್ಲಿ $ 4.87 ಲಕ್ಷ ಮೊತ್ತದ ಕಾಮಗಾರಿ ಪೂರ್ಣಗೊಂಡಿದೆ. ಕಾಮಗಾರಿ ಮುಗಿಸುವ ವೇಗದಲ್ಲಿ ಕರ್ನಾಟಕವು ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ರಾಮನಗರ, ತುಮಕೂರು, ಬೆಳಗಾವಿ, ಚಿತ್ರದುರ್ಗ, ಕೊಪ್ಪಳ, ಕಲಬುರಗಿಯಲ್ಲಿ ಜಲಶಕ್ತಿ ಅಭಿಯಾನದಲ್ಲಿ ಹೆಚ್ಚು ಕಾಮಗಾರಿ ನಡೆದಿದೆ.

ದೇಗುಲಗಳನ್ನು ಕಟ್ಟುಪಾಡುಗಳಿಂದ ಮುಕ್ತಗೊಳಿಸುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ದೇಗುಲದಲ್ಲಿ ಹಣ ಇದ್ದರೂ ದೇಗುಲಕ್ಕೆ ಬಳಸಲು ಅವಕಾಶವಿಲ್ಲ. ಸರ್ಕಾರ ಆ ಹಣಕ್ಕೆ ಕೈಹಾಕದೆ ಭಕ್ತರು ಆಯ್ಕೆ ಮಾಡುವ ಸಮಿತಿಗೆ ಹಣ ಬಳಕೆಯ ವಿವೇಚನೆ ಸಿಗುವಂತೆ ಆಗಬೇಕು. ಸಮಿತಿಗಳಿಗೆ ಹೆಚ್ಚು ಅಧಿಕಾರ ಕೊಡುವ ವ್ಯವಸ್ಥೆಯನ್ನು ನಾವು ರೂಪಿಸುತ್ತೇವೆ. ದೇವಾಲಯದ ಹಣವನ್ನು ಬೇರೆ ಕೆಲಸಗಳಿಗೆ ಬಳಸಲು ಸಾಧ್ಯವಾಗದಂಥ ನೀತಿಯನ್ನು ಇನ್ನಷ್ಟೇ ನಿರೂಪಿಸಬೇಕಿದೆ ಎಂದರು. ಸರ್ಕಾರದ ಉಸ್ತುವಾರಿ ಇದ್ದೇ ಇರುತ್ತದೆ ಎಂದು ಸ್ಪಷ್ಟಪಡಿಸಿದರು.ಇದನ್ನೂ ಓದಿ: ಪಕ್ಷದ ವರಿಷ್ಠರು ಸೂಚಿಸಿದರೆ ಸಚಿವ ಸ್ಥಾನ ತ್ಯಜಿಸಲು ಸಿದ್ಧ ಎಂದರು ಹಿರಿಯ ಸಚಿವ ಈಶ್ವರಪ್ಪ ಇದನ್ನೂ ಓದಿ: ಪಕ್ಷದ ವರಿಷ್ಠರು ಸೂಚಿಸಿದರೆ ಸಚಿವ ಸ್ಥಾನ ತ್ಯಜಿಸಲು ಸಿದ್ಧ ಎಂದರು ಹಿರಿಯ ಸಚಿವ ಈಶ್ವರಪ್ಪ

Published On - 9:17 pm, Thu, 30 December 21

ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ