ಕೇರಳದಲ್ಲೂ ಸಿಎಂ ಯಡಿಯೂರಪ್ಪಗೆ ತಟ್ಟಿದ ಪ್ರತಿಭಟನೆ ಬಿಸಿ

ಕೇರಳ: ಸಿಎಂ ಬಿ.ಎಸ್.ಯಡಿಯೂರಪ್ಪಗೆ ಕೇರಳದಲ್ಲಿ ಪ್ರತಿಭಟನೆಯ ಬಿಸಿ ತಟ್ಟಿದೆ. ತಿರುವನಂತಪುರದ ತಂಪಾನೂರಿನಲ್ಲಿರುವ ಅನಂತ ಪದ್ಮನಾಭ ಸ್ವಾಮಿ ದೇವರ ದರ್ಶನಕ್ಕಾಗಿ ತೆರಳಿದ್ದ ವೇಳೆ ಸಿಎಂ ಯಡಿಯೂರಪ್ಪಗೆ ಕೇರಳ ಯುವ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಾವುಟ ತೋರಿಸಿ ಪ್ರತಿಭಟನೆ ನಡೆಸಿದ್ದಾರೆ.

ಸಿಎಎ ಮತ್ತು ಮಂಗಳೂರಿನಲ್ಲಿ ನಡೆದ ಫೈರಿಂಗ್ ವಿರೋಧಿಸಿ ಸಿಎಂ ವಿರುದ್ಧ ಧರಣಿಗೆ ಇಳಿದಿದ್ದಾರೆ. ಪ್ರತಿಭಟನಾನಿರತ 8 ಕೇರಳ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ. ನಿನ್ನೆ ರಾತ್ರಿ ಎಂಟು ಗಂಟೆ ವೇಳೆಗೆ ಈ ಘಟನೆ ನಡೆದಿದೆ.

Related Posts :

Category:

error: Content is protected !!