ಏರಿಕೆಯಾಗುತ್ತಾ ನಂದಿನಿ ಹಾಲಿನ ದರ?

ಬೆಂಗಳೂರು: ರಾಜ್ಯದ ಮಂದಿಗೆ ಕೆಎಂಫ್ ಶಾಕ್ ಕೊಡಲಿದೆ. ನಂದಿನ ಹಾಲಿನ ದರ ಹೆಚ್ಚಳಕ್ಕೆ ಚಿಂತನೆ ಮಾಡಲಾಗುತ್ತಿದ್ದು, ಪ್ರತೀ ಲೀಟರ್​ಗೆ ಎರಡರಿಂದ ಮೂರು ರೂಪಾಯಿ ಹೆಚ್ಚಳ ಮಾಡುವ ಸಾಧ್ಯತೆ ಇದೆ. 14 ಹಾಲು ಒಕ್ಕೂಟಗಳ ವತಿಯಿಂದ ಹಾಲಿನ ದರ ಹೆಚ್ಚಳಕ್ಕಾಗಿ ಕೆಎಂಎಫ್​ಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಪ್ರತೀ ಲೀಟರ್​ಗೆ ಎರಡರಿಂದ ಮೂರು ರೂಪಾಯಿ ಹೆಚ್ಚಳ ಮಾಡುವಂತೆ ಬೇಡಿಕೆ ಇಡಲಾಗಿದೆ. ಹೀಗಾಗಿ ನಾಳೆ ಹಾಲಿನ ದರ ಹೆಚ್ಚಿಸುವ ಕುರಿತು ಆಡಳಿತ ಮಂಡಳಿಯ ಸಭೆ ನಡೆಸಲಿದ್ದು, ಸಭೆಯಲ್ಲಿ ದರ ಹೆಚ್ಚಳದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಸಭೆಯಲ್ಲಿ ಸಾದಕ ಬಾಧಕಗಳ ಚರ್ಚೆ ಬಳಿಕ ದರ ಪ್ರಕಟ ಮಾಡುತ್ತೇವೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

ನಗರದ ಖಾಸಗಿ ಹೋಟೆಲ್​ನಲ್ಲಿ ನಡೆದ ಕೆಎಂಎಫ್ ಕಾರ್ಯಕ್ರಮದಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ಖಾಸಗಿ ಅವರ ಹಾಲಿನಿ ದರಕ್ಕೂ ನಂದಿನ ಹಾಲಿನ ದರಕ್ಕೂ ಭಾರಿ ವ್ಯತ್ಯಾಸವಿದೆ. ಇದರಿಂದ ಕಳೆದ ಮೂರು ವರ್ಷಗಳಿಂದ ಹಾಲಿನ ದರದಲ್ಲಿ ಹೆಚ್ಚಳ ಮಾಡಿಲ್ಲ ಹಾಗಾಗಿ ಈ ಬಾರಿ ಹೆಚ್ಚಳ ಮಾಡುವುದು ಬಹುತೇಕ ಖಚಿತ ಎಂದು ದರ ಹೆಚ್ಚಿಸುವ ಕುರಿತು ಸ್ಪಷ್ಟನೆ ನೀಡಿದ್ದಾರೆ.

Related Posts :

Leave a Reply

Your email address will not be published. Required fields are marked *

ತಾಜಾ ಸುದ್ದಿ

error: Content is protected !!