ಶಿರಾ ಉಪ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಅಂತಿಮಗೊಳಿಸಿದ KPCC ಸಭೆ

ಬೆಂಗಳೂರು: ತುಮಕೂರು ಜಿಲ್ಲೆ ಶಿರಾ ಕ್ಷೇತ್ರದ ಉಪಚುನಾವಣೆ ವಿಚಾರ ಸಂಬಂಧಿಸಿ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ ಮುಕ್ತಾಯಗೊಂಡಿದೆ. ತುಮಕೂರು ಜಿಲ್ಲೆಯ ನಾಯಕರ ಜೊತೆ ಸಭೆ ನಡೆಸಿದ ನಂತರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಶಿರಾ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯನ್ನು ಅಂತಿಮಗೊಳಿಸಿದ್ದಾರೆ.

 ‘ಕೈ’ ಅಭ್ಯರ್ಥಿಯಾಗಿ ಟಿ.ಬಿ. ಜಯಚಂದ್ರ
ಶಿರಾ ಉಪಚುನಾವಣೆಯನ್ನು ಪರಮೇಶ್ವರ್ ನೇತೃತ್ವದಲ್ಲಿ ನಡೆಸ್ತೇವೆ. ರಾಜಣ್ಣ ಕೋ ಚೇರ್ಮನ್ ಆಗಿ ಸಾಥ್ ಕೊಡ್ತಾರೆ. ಒಟ್ಟಿಗೆ ಎಲ್ಲರೂ ಸೇರಿಯೇ ಚುನಾವಣೆ ಎದುರಿಸುತ್ತೇವೆ ಎಂದು ಡಿಕೆಶಿ ಹೇಳಿದ್ದಾರೆ. ಇನ್ನು ‘ಕೈ’ ಪಕ್ಷದ ಅಭ್ಯರ್ಥಿಯಾಗಿ ಟಿ.ಬಿ.ಜಯಚಂದ್ರ ಇರುತ್ತಾರೆ.

ಈ ಬಗ್ಗೆ ಮಾಜಿ ಶಾಸಕ ಕೆ.ಎನ್. ರಾಜಣ್ಣ ಅಭಿಪ್ರಾಯ ಪಡೆದಿದ್ದೇವೆ.  ಅವರು ಕೂಡ ಟಿ.ಬಿ.ಜಯಚಂದ್ರ ಹೆಸರನ್ನು ಸೂಚಿಸಿದ್ದಾರೆ. ನಮ್ಮ ಅಭಿಪ್ರಾಯವನ್ನು ಹೈಕಮಾಂಡ್‌ಗೆ ಕಳಿಸುತ್ತೇವೆ. ಇಂದಿನಿಂದಲೇ ಉಪ ಚುನಾವಣೆ ಕೆಲಸ ಆರಂಭಿಸುತ್ತೇವೆ ಎಂದು ಬೆಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ರು.

Related Tags:

Related Posts :

Category: