ಯತ್ನಾಳ್​​ರಿಗೆ ಸಚಿವ ಸ್ಥಾನ ಸಿಕ್ಕಿದ್ರೆ ಹೀಗೆ ಮಾತಾಡ್ತಿರಲಿಲ್ಲ: ಕೆ.ಎಸ್.ಈಶ್ವರಪ್ಪ

ಸಿಡಿನೂ ಇಲ್ಲ, ಪಾಡಿನೂ ಇಲ್ಲ, ಸುಮ್ನೆ ಹೇಳ್ತಾರೆ ಅಷ್ಟೇ. ಯತ್ನಾಳ್ ಅವರಿಗೆ ಸಚಿವ ಸ್ಥಾನ ಸಿಕ್ಕಿದ್ರೆ ಈ ರೀತಿ ಮಾತನಾಡುತ್ತಿರಲಿಲ್ಲ. ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ, ನೋವಿನಿಂದ ಈ ರೀತಿ ಮಾತನಾಡುತ್ತಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

  • TV9 Web Team
  • Published On - 19:35 PM, 13 Jan 2021
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ

ಚಿಕ್ಕಮಗಳೂರು: ಸಿಡಿನೂ ಇಲ್ಲ, ಪಾಡಿನೂ ಇಲ್ಲ, ಸುಮ್ನೆ ಹೇಳ್ತಾರೆ ಅಷ್ಟೇ. ಯತ್ನಾಳ್ ಅವರಿಗೆ ಸಚಿವ ಸ್ಥಾನ ಸಿಕ್ಕಿದ್ರೆ ಈ ರೀತಿ ಮಾತನಾಡುತ್ತಿರಲಿಲ್ಲ. ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ, ನೋವಿನಿಂದ ಈ ರೀತಿ ಮಾತನಾಡುತ್ತಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರ.

ಕೆಲವರು ಸಿಡಿ ಇಟ್ಟುಕೊಂಡು ಬೆದರಿಕೆಯೊಡ್ಡಿ ರಾಜ್ಯ ಸರ್ಕಾರದಲ್ಲಿ ಮಂತ್ರಿಗಿರಿ ಪಡೆದುಕೊಂಡಿದ್ದಾರೆ ಎಂಬ ಬಸನಗೌಡ ಪಾಟೀಲ್​​ ಯತ್ನಾಳ್​ ಅವರ ಹೇಳಿಕೆಗೆ ಚಿಕ್ಕಮಗಳೂರು ನಗರದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಮೇಲಿನಂತೆ ಪ್ರತಿಕ್ರಿಯಿಸಿದರು.

ಕಾಂಗ್ರೆಸ್, ಜೆಡಿಎಸ್​ನಿಂದ ಬಂದ ಅರ್ಹತೆ ಇದ್ದವರಿಗೆ ಮಂತ್ರಿ ಸ್ಥಾನ ಸಿಕ್ಕಿದೆ. ಮುನಿರತ್ನ, ಹೆಚ್.ವಿಶ್ವನಾಥ್ ಅವರನ್ನು ಹೊರತುಪಡಿಸಿ ಎಲ್ಲರಿಗೂ ಸಚಿವ ಸ್ಥಾನ ಸಿಕ್ಕಿದೆ. ಸಚಿವ ಸ್ಥಾನ ಸಿಗಲಿಲ್ಲ ಎಂದು ಏನೋ ಪದವನ್ನ ಬಳಸಬಹುದು. ಆದರೆ ಇದು ನಿಮ್ಮ ಭವಿಷ್ಯಕ್ಕೆ ಒಳ್ಳೆಯದಲ್ಲ. ಎಲ್ಲಾ ಶಾಸಕರು ಕಲ್ಲುಬಂಡೆಯಂತೆ ಪಕ್ಷದಲ್ಲಿ ಇದ್ದಾರೆ. ಸರ್ಕಾರ ಬಿಲ್​ಕುಲ್ ಪತನವಾಗಲ್ಲ ಎಂದು ಬಸನಗೌಡ ಪಾಟೀಲ್​​ ಯತ್ನಾಳ್ ಅವರಿಗೆ ಪರೋಕ್ಷವಾಗಿ ಈಶ್ವರಪ್ಪ ಪರೋಕ್ಷವಾಗಿ ಟಾಂಗ್​ ನೀಡಿದ್ದಾರೆ.

3 ಸಚಿವ ಸ್ಥಾನ ಬ್ಲ್ಯಾಕ್‌ಮೇಲ್ ಮಾಡಿ ಪಡೆದುಕೊಂಡಿದ್ದಾರೆ, CD ತೋರಿಸಿ BSYರನ್ನ ಹೆದರಿಸಿದ್ದಾರೆ: ಯತ್ನಾಳ್