ದ್ವೇಷ ಇದ್ದದ್ದು ನನ್ನ ಮೇಲೆ, ಬಡವರ ಮೇಲೇಕೆ ಕೋಪ ಎಂದು ಬಿಎಸ್​ವೈ ವಿರುದ್ಧ ಹೆಚ್​ಡಿಕೆ ಟೀಕಾಸ್ತ್ರ

ಬೆಂಗಳೂರು: ನಿಮಗೆ ದ್ವೇಷ ಇದ್ದದ್ದು ನನ್ನ ಮೇಲಲ್ಲವೇ? ಆದರೆ ಬಡವರ ಮೇಲೇಕೆ ನಿಮ್ಮ ಕೋಪ? ‘ಬಡವರ ಬಂಧು’ ಯೋಜನೆಯನ್ನು ನಿರ್ಲಕ್ಷಿಸಿರುವ ಬಗ್ಗೆ ಸಿಎಂ ಬಿಎಸ್​ ಯಡಿಯೂರಪ್ಪರನ್ನು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಸೇಡಿನ ರಾಜಕೀಯ ಮಾಡುವುದಿಲ್ಲ ಎಂದು ಸದನದಲ್ಲಿ ನೀವು ಭಾಷಣ ಮಾಡಿದ್ರಿ, ಆದ್ರೆ ಅಧಿಕಾರ ವಹಿಸಿಕೊಂಡ ನಂತರ ನನ್ನ ಸರ್ಕಾರದ ಕಾರ್ಯಕ್ರಮಗಳ ವಿಷಯದಲ್ಲಿ ಸೇಡಿನ ರಾಜಕೀಯ ಮಾಡಿ ನೀವು ಬಡವರ ವಿರೋಧಿಯಾಗಿದ್ದೀರಿ ಎಂದು ಕುಮಾರಸ್ವಾಮಿ ಟ್ವಿಟ್ಟರ್​ನಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಬಡವರ ಬಂಧು ಕಾರ್ಯಕ್ರಮವನ್ನು ಆರ್ಥಿಕವಾಗಿ ಅಶಕ್ತರಾದವರು, ಸಣ್ಣ ವ್ಯಾಪಾರಿಗಳನ್ನು ಲೇವಾದೇವಿದಾರರ ವಿಷ ವರ್ತುಲದಿಂದ ಪಾರು ಮಾಡುವ ಸದುದ್ದೇಶದಿಂದ ಜಾರಿಗೆ ತರಲಾಗಿತ್ತು. ಅಶಕ್ತರು, ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ನೆರವಾಗುತ್ತಿದ್ದ ಈ ಯೋಜನೆಯನ್ನು ಕೊಲ್ಲುತ್ತಿರುವ ನೀವು ಬಡವರ ಸ್ವಾಭಿಮಾನವನ್ನು ಕೆಣಕಿದ್ದೀರಿ ಎಂದು ಹೆಚ್​ಡಿಕೆ ಕಿಡಿಕಾರಿದ್ದಾರೆ.

‘ಬಡವರ ಬಂಧು’ ಯೋಜನೆಯಲ್ಲಿ ಜಾತಿ, ಧರ್ಮ, ಪಕ್ಷಗಳಿಲ್ಲ. ಆದ್ದರಿಂದ ಈ ಯೋಜನೆ ವಿಫಲವಾಗಬಾರದು. ಈ ಕಾರ್ಯಕ್ರಮಕ್ಕೆ ನೀವು ಚೈತನ್ಯ ತುಂಬಬೇಕು, ಇಲ್ಲವೇ ಹೋರಾಟ ಎದುರಿಸಬೇಕು ಎಂದು ಸಿಎಂ ಬಿಎಸ್​ ಯಡಿಯೂರಪ್ಪ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Related Tags:

Related Posts :

Category: