
ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಬ್ಬರು ಬಲಿಯಾಗಿದ್ದಾರೆ. ಕೆ.ಜಿ.ಹಳ್ಳಿ ನಿವಾಸಿ 32 ವರ್ಷದ ವ್ಯಕ್ತಿ ಸಾವಿಗೀಡಾಗಿದ್ದಾರೆ. ರಾಜ್ಯದಲ್ಲಿ ನಿನ್ನೆಯವರೆಗೂ ಒಟ್ಟು 1743 ಮಂದಿಗೆ ಕೊರೊನಾ ಸೋಂಕು ತಗುಲಿದೆ.
ತೀವ್ರ ಜ್ವರದಿಂದ ಬಳಲುತ್ತಿದ್ದ 1270ನೇ ಸೋಂಕಿತನಿಗೆ ಕೊವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊರೊನಾ ಸೋಂಕಿತ ಮೃತಪಟ್ಟಿದ್ದಾನೆ.
Published On - 8:55 am, Sat, 23 May 20