ಕೊರೊನಾಗೆ ಸೆಡ್ಡು ಹೊಡೆದ 110 ವರ್ಷದ ಅಜ್ಜಿ, ಎಲ್ಲಿ?

ಚಿತ್ರದುರ್ಗ‌: ಕೊರೊನಾ ಮಹಾಮಾರಿಗೆ ಹೆಚ್ಚಾಗಿ ವಯಸ್ಕರು ಹಾಗೂ ವೃದ್ಧರು ಬಲಿಯಾಗುತ್ತಿದ್ದು, ಅಚ್ಚರಿಯೆಂಬಂತೆ 110 ವರ್ಷದ ವೃದ್ಧೆಯೊಬ್ಬರು ಕೊರೊನಾ ಸೋಂಕನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಜುಲೈ 28ರಂದು ಕೊರೊನಾ ಸೋಂಕಿತ 110 ವರ್ಷದ ವೃದ್ಧೆಯೊಬ್ಬರು ಚಿಕಿತ್ಸೆಗೆಂದು ಚಿತ್ರದುರ್ಗ ಜಿಲ್ಲಾ ಕೊವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ವೃದ್ಧೆ ಕೇವಲ ನಾಲ್ಕೇ ನಾಲ್ಕು ದಿನದಲ್ಲಿ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆಂದು ಚಿತ್ರದುರ್ಗ ಜಿಲ್ಲಾಸ್ಪತ್ರೆಯ […]

ಕೊರೊನಾಗೆ ಸೆಡ್ಡು ಹೊಡೆದ 110 ವರ್ಷದ ಅಜ್ಜಿ, ಎಲ್ಲಿ?
ಸಾಧು ಶ್ರೀನಾಥ್​

Updated on: Aug 01, 2020 | 5:54 PM

ಚಿತ್ರದುರ್ಗ‌: ಕೊರೊನಾ ಮಹಾಮಾರಿಗೆ ಹೆಚ್ಚಾಗಿ ವಯಸ್ಕರು ಹಾಗೂ ವೃದ್ಧರು ಬಲಿಯಾಗುತ್ತಿದ್ದು, ಅಚ್ಚರಿಯೆಂಬಂತೆ 110 ವರ್ಷದ ವೃದ್ಧೆಯೊಬ್ಬರು ಕೊರೊನಾ ಸೋಂಕನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ ಜುಲೈ 28ರಂದು ಕೊರೊನಾ ಸೋಂಕಿತ 110 ವರ್ಷದ ವೃದ್ಧೆಯೊಬ್ಬರು ಚಿಕಿತ್ಸೆಗೆಂದು ಚಿತ್ರದುರ್ಗ ಜಿಲ್ಲಾ ಕೊವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ವೃದ್ಧೆ ಕೇವಲ ನಾಲ್ಕೇ ನಾಲ್ಕು ದಿನದಲ್ಲಿ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆಂದು ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಸರ್ಜನ್ ಡಾಕ್ಟರ್ ಬಸವರಾಜ್ ತಿಳಿಸಿದ್ದಾರೆ.

ಚಿತ್ರದುರ್ಗ‌ ನಗರದಲ್ಲಿ ಪೊಲೀಸ್ ಕೆಲಸದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊಮ್ಮಗನ ಜೊತೆ ವೃದ್ಧೆ ವಾಸವಿದ್ದಾರೆ ಎನ್ನಲಾಗಿದೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us