ತುಮಕೂರು: 2 ಕಾರುಗಳ ಮಧ್ಯೆ ಡಿಕ್ಕಿ, 12 ಜನರ ದುರ್ಮರಣ

ತುಮಕೂರು: ಕುಣಿಗಲ್ ತಾಲೂಕಿನ ಬ್ಯಾಲದಕೆರೆ ಬಳಿ ಸರಣಿ ಕಾರು ಅಪಘಾತವಾಗಿ 12ಜನ ಮೃತಪಟ್ಟಿರುವ ಘಟನೆ ನಡೆದಿದೆ. ಧರ್ಮಸ್ಥಳದಿಂದ ವಾಪಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. 4ಜನ ಇದ್ದ ಕಾರು ಡಿವೈಡರ್​ಗೆ ಡಿಕ್ಕಿಯಾಗಿದೆ ಇದೇ ವೇಳೆ ಮತ್ತೊಂದು ಟವೇರಾ ಕಾರು ಹಿಂದಿನಿಂದ ವೇಗವಾಗಿ ಬಂದು ಡಿಕ್ಕಿಯಾಗಿದೆ. ಈ ಪರಿಣಾಮ 12 ಜನರ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದವರು ಬೆಂಗಳೂರಿನ ನಿವಾಸಿಗಳಾಗಿದ್ದು, ಲಕ್ಷ್ಮೀಕಾಂತ್(24) ಸಂದೀಪ್(36), ಮಧು(28) ಮೃತಪಟ್ಟಿದ್ದಾರೆ. ಮತ್ತೊಬ್ಬನಿಗೆ ಗಾಯಗಳಾಗಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಧರ್ಮಸ್ಥಳದಿಂದ ವಾಪಸಾಗುತ್ತಿದ್ದ ಟವೇರಾ ಕಾರಿನಲ್ಲಿದ್ದ […]

ತುಮಕೂರು: 2 ಕಾರುಗಳ ಮಧ್ಯೆ ಡಿಕ್ಕಿ, 12 ಜನರ ದುರ್ಮರಣ
ಸಾಧು ಶ್ರೀನಾಥ್​

Updated on: Mar 06, 2020 | 7:45 AM

ತುಮಕೂರು: ಕುಣಿಗಲ್ ತಾಲೂಕಿನ ಬ್ಯಾಲದಕೆರೆ ಬಳಿ ಸರಣಿ ಕಾರು ಅಪಘಾತವಾಗಿ 12ಜನ ಮೃತಪಟ್ಟಿರುವ ಘಟನೆ ನಡೆದಿದೆ. ಧರ್ಮಸ್ಥಳದಿಂದ ವಾಪಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. 4ಜನ ಇದ್ದ ಕಾರು ಡಿವೈಡರ್​ಗೆ ಡಿಕ್ಕಿಯಾಗಿದೆ ಇದೇ ವೇಳೆ ಮತ್ತೊಂದು ಟವೇರಾ ಕಾರು ಹಿಂದಿನಿಂದ ವೇಗವಾಗಿ ಬಂದು ಡಿಕ್ಕಿಯಾಗಿದೆ. ಈ ಪರಿಣಾಮ 12 ಜನರ ಮೃತಪಟ್ಟಿದ್ದಾರೆ.

ಕಾರಿನಲ್ಲಿದ್ದವರು ಬೆಂಗಳೂರಿನ ನಿವಾಸಿಗಳಾಗಿದ್ದು, ಲಕ್ಷ್ಮೀಕಾಂತ್(24) ಸಂದೀಪ್(36), ಮಧು(28) ಮೃತಪಟ್ಟಿದ್ದಾರೆ. ಮತ್ತೊಬ್ಬನಿಗೆ ಗಾಯಗಳಾಗಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಧರ್ಮಸ್ಥಳದಿಂದ ವಾಪಸಾಗುತ್ತಿದ್ದ ಟವೇರಾ ಕಾರಿನಲ್ಲಿದ್ದ ತಮಿಳುನಾಡು ಮೂಲದವರಾದ ಮಂಜುನಾಥ್(35)ಗೌರಮ್ಮ(60), ರತ್ನಮ್ಮ(52), ಸೌಂದರರಾಜ್(48) ಸರಳಾ(32), ರಾಜೇಂದ್ರ(27) ತನುಜಾ(25), ಪ್ರಶನ್ಯಾ(14) ಒಂದು ವರ್ಷದ ಹೆಣ್ಣು ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಶ್ವೇತಾ(32), ಹರ್ಪಿತಾ(12) ಗಂಗೋತ್ರಿ(14), ಮಾಲಾಶ್ರೀ(4)ಗೆ ಗಂಭೀರ ಗಾಯಗಳಾಗಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ನಾಲ್ವರು ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಮೃತೂರು ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us