ಮರಳು ಲಾರಿಗೆ ಬಾಲಕಿ ಬಲಿ: ಉದ್ರಿಕ್ತರಿಂದ 25ಕ್ಕೂ ಹೆಚ್ಚು ಲಾರಿಗಳಿಗೆ ಕಲ್ಲು

ದಾವಣಗೆರೆ: ಮರಳು ಲಾರಿ ಡಿಕ್ಕಿಯೊಡೆದು ಶಾಲಾ ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನ್ಯಾಮತಿ ತಾಲೂಕಿನ ಮರಿಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅವಘಡದಲ್ಲಿ 14 ವರ್ಷದ ಬಾಲಕಿ ದಿವ್ಯಾ ಪಾಟೀಲ್ ಸಾವಿಗೀಡಾಗಿದ್ದಾರೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು 25ಕ್ಕೂ ಹೆಚ್ಚು ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಾಲಕಿ ಮೇಲೆ ಹರಿದಿದ್ದ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮರಳು ಸಾಗಣೆ ಲಾರಿಗಳಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿದರು. ಬಾಲಕಿ ಸಾವಿನಿಂದ ಮರಿಗೊಂಡನಹಳ್ಳಿ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಗ್ರಾಮದಲ್ಲಿ ಪರಿಸ್ಥಿತಿ ನಿಯಂತ್ರಿಸಲು […]

ಮರಳು ಲಾರಿಗೆ ಬಾಲಕಿ ಬಲಿ: ಉದ್ರಿಕ್ತರಿಂದ 25ಕ್ಕೂ ಹೆಚ್ಚು ಲಾರಿಗಳಿಗೆ ಕಲ್ಲು

Updated on: Mar 09, 2020 | 5:07 PM

ದಾವಣಗೆರೆ: ಮರಳು ಲಾರಿ ಡಿಕ್ಕಿಯೊಡೆದು ಶಾಲಾ ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನ್ಯಾಮತಿ ತಾಲೂಕಿನ ಮರಿಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅವಘಡದಲ್ಲಿ 14 ವರ್ಷದ ಬಾಲಕಿ ದಿವ್ಯಾ ಪಾಟೀಲ್ ಸಾವಿಗೀಡಾಗಿದ್ದಾರೆ.

ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು 25ಕ್ಕೂ ಹೆಚ್ಚು ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಾಲಕಿ ಮೇಲೆ ಹರಿದಿದ್ದ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮರಳು ಸಾಗಣೆ ಲಾರಿಗಳಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿದರು.

ಬಾಲಕಿ ಸಾವಿನಿಂದ ಮರಿಗೊಂಡನಹಳ್ಳಿ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಗ್ರಾಮದಲ್ಲಿ ಪರಿಸ್ಥಿತಿ ನಿಯಂತ್ರಿಸಲು ನ್ಯಾಮತಿ ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಹೊನ್ನಾಳಿ ಮಾಜಿ ಶಾಸಕ ಡಿ.ಜಿ.ಶಾಂತನಗೌಡ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಭೇಟಿ ನೀಡಿ ಗ್ರಾಮಸ್ಥರ ಮನವೊಲಿಕೆಗೆ ಯತ್ನಿಸಿದ್ದಾರೆ.