ಬೆಂಗಳೂರು: ಮಹದಾಯಿ ಅಧಿಸೂಚನೆ ಬಂದ ನಂತರ ಉತ್ತಕ ಕರ್ನಾಟಕ ಭಾಗದಲ್ಲಿ ಸಂತಸ ಮುಗಿಲು ಮುಟ್ಟಿದೆ. ಈ ಮಧ್ಯೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಬೆಂಗಳೂರಿನಲ್ಲಿ ಮಾತನಾಡಿ ಕೇಂದ್ರ ಸರ್ಕಾರದ ಸ್ಪಂದನೆಗೆ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿಲ್ಲಿದ್ದಾರೆ. ಆದ್ರೆ, ಇನ್ನೂ ಹದಿನೈದು ದಿನಗಳ ಕಾಲ ಕೆಲವೊಂದು ವಿಷಯಗಳನ್ನು ಬಹಿರಂಗಪಡಿಸಲಿ ಸಾಧ್ಯವಿಲ್ಲ ಎಂದಿದ್ದಾರೆ.
ಇದೇ ವೇಳೆ ಸುಪ್ರೀಂಕೋರ್ಟ್ ಅಧಿಸೂಚನೆ ಆದೇಶಕ್ಕೂ ಮೊದಲೇ ಮಹದಾಯಿ ಯೋಜನೆಗಾಗಿ 200 ಕೋಟಿ ರೂಪಾಯಿ ಮೀಸಲಿಡಲು ಸಿಎಂ ಯಡಿಯೂರಪ್ಪಗೆ ಮನವಿ ಮಾಡುವುದಾಗಿ ತಿಳಿಸಿದ ಜಲಸಂಪನ್ಮೂಲ ಸಚಿವ ರಮೇಶ್ ಶೀಘ್ರವಾಗಿ ಕಾಮಗಾರಿ ಮುಂದುವರಿಸುತ್ತೇವೆ ಎಂದು ತಿಳಿಸಿದರು.
ವಿಜಯೋತ್ಸವ ಬೇಡ, ಹೋರಾಟಗಾರರ ಮೇಲಿನ ಕೇಸ್ ಬಗ್ಗೆ ಚರ್ಚೆ:
ಕುಡಿಯುವ ನೀರಿಗೆ ಕೇಂದ್ರ ಪರಿಸರ ಇಲಾಖೆಯ ಅನುಮತಿ ಬೇಕಾಗಿಲ್ಲ. ಈ ಸಂದರ್ಭದಲ್ಲಿ ವಿಜಯೋತ್ಸವ ಬೇಡ ಎಂದರು. ಎಲ್ಲಾ ವಿಚಾರಗಳನ್ನು ಅಧ್ಯಯನ ಮಾಡಿ ನಂತರ ಮಾತನಾಡುತ್ತೇನೆ. ಮಹದಾಯಿ ಹೋರಾಟಗಾರರ ಮೇಲಿನ ಕೇಸ್ ಶೀಘ್ರ ವಾಪಸ್ ಪಡೆಯುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೊತೆ ಚರ್ಚಿಸುತ್ತೇನೆ. ಅಲ್ಲದೆ, ಜಲಸಂಪನ್ಮೂಲ ಇಲಾಖೆಗೆ ಸಿಎಂ ಹೆಚ್ಚಿನ ಅನುದಾನ ನೀಡುವ ವಿಶ್ವಾಸವಿದೆ ಎಂದು ಸಂತಸ ವ್ಯಕ್ತಪಡಿಸಿದರು.
Published On - 11:48 am, Fri, 28 February 20