ಬೆಳ್ಳಂಬೆಳಗ್ಗೆ 2 ಕಂಟೈನರ್​ ಮುಖಾಮುಖಿ: ಸ್ಥಳದಲ್ಲೇ ಇಬ್ಬರ ದಾರುಣ ಸಾವು

ಹಾಸನ: ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಎರಡು ಕಂಟೈನರ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಆಲೂರು ತಾಲೂಕಿನ ಸಿಂಗಾಪುರ ಬಳಿ ಸಂಭವಿಸಿದೆ. ಸಕಲೇಶಪುರ ತಾಲೂಕಿನ ಜಾತಹಳ್ಳಿಯ ದಿಲೀಪ್(25) ಹಾಗೂ ಅಂಚೆಹಳ್ಳಿ ಗ್ರಾಮದ ಚಂದ್ರು(26) ಮೃತ ದುರ್ದೈವಿಗಳು. ಮುಂಜಾನೆ 5 ಗಂಟೆ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 75ರ ಸಿಂಗಾಪುರದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒಂದು ಕಂಟೈನರ್​ನಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಮತ್ತೊಂದು ಕಂಟೈನರ್​ನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ […]

ಬೆಳ್ಳಂಬೆಳಗ್ಗೆ 2 ಕಂಟೈನರ್​ ಮುಖಾಮುಖಿ: ಸ್ಥಳದಲ್ಲೇ ಇಬ್ಬರ ದಾರುಣ ಸಾವು
ಸಾಧು ಶ್ರೀನಾಥ್​

Updated on: Feb 25, 2020 | 10:24 AM

ಹಾಸನ: ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ಎರಡು ಕಂಟೈನರ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಆಲೂರು ತಾಲೂಕಿನ ಸಿಂಗಾಪುರ ಬಳಿ ಸಂಭವಿಸಿದೆ. ಸಕಲೇಶಪುರ ತಾಲೂಕಿನ ಜಾತಹಳ್ಳಿಯ ದಿಲೀಪ್(25) ಹಾಗೂ ಅಂಚೆಹಳ್ಳಿ ಗ್ರಾಮದ ಚಂದ್ರು(26) ಮೃತ ದುರ್ದೈವಿಗಳು.

ಮುಂಜಾನೆ 5 ಗಂಟೆ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 75ರ ಸಿಂಗಾಪುರದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒಂದು ಕಂಟೈನರ್​ನಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಮತ್ತೊಂದು ಕಂಟೈನರ್​ನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಕಂಟೈನರ್ ಒಳಗೆ ಸಿಲುಕಿಕೊಂಡಿರುವ ಮೃತದೇಹಗಳನ್ನ ಹೊರತೆಗೆಯಲು ಹರಸಾಹಸ ಪಡುತ್ತಿದ್ದಾರೆ.


Published On - 8:03 am, Tue, 25 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us