AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಂತಾಮಣಿ: ತಾತನಿಂದ ಮೊಮ್ಮಗನಿಗೂ ವಕ್ಕರಿಸಿತು ಮಹಾಮಾರಿ ಕೊರೊನಾ!

ಚಿಕ್ಕಬಳ್ಳಾಪುರ: ಚಿಂತಾಮಣಿ ನಗರದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ತಾತನಿಂದ ಮೊಮ್ಮಗನಿಗೆ ಮಹಾಮಾರಿ ಕೊರೊನಾ ವಕ್ಕರಿಸಿದೆ. 790ನೇ ಸೋಂಕಿತ ವೃದ್ಧನಿಂದ 804ನೇ ಸೋಂಕಿತ ಮೊಮ್ಮಗನಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಮೇ 5ರಂದು ವೃದ್ಧನ ಪತ್ನಿ ಮೃತಪಟ್ಟಿದ್ದರು: ಚಿಂತಾಮಣಿಯ ವೃದ್ಧನ ಪತ್ನಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಬೆಂಗಳೂರಿನ ಮಗಳ ಮನೆಯಲ್ಲಿ ವಿಶ್ರಾಂತಿ ಪಡೆದಿದ್ದರು. ಬಳಿಕ ಏ.26ರಂದು ಚಿಂತಾಮಣಿ ನಗರಕ್ಕೆ ವಾಪಸಾಗಿದ್ದರು. ನಂತರ ಮೇ 5ರಂದು ವೃದ್ಧನ ಪತ್ನಿ ಮೃತಪಟ್ಟಿದ್ದರು. […]

ಚಿಂತಾಮಣಿ: ತಾತನಿಂದ ಮೊಮ್ಮಗನಿಗೂ ವಕ್ಕರಿಸಿತು ಮಹಾಮಾರಿ ಕೊರೊನಾ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 10, 2020 | 1:11 PM

Share

ಚಿಕ್ಕಬಳ್ಳಾಪುರ: ಚಿಂತಾಮಣಿ ನಗರದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ತಾತನಿಂದ ಮೊಮ್ಮಗನಿಗೆ ಮಹಾಮಾರಿ ಕೊರೊನಾ ವಕ್ಕರಿಸಿದೆ. 790ನೇ ಸೋಂಕಿತ ವೃದ್ಧನಿಂದ 804ನೇ ಸೋಂಕಿತ ಮೊಮ್ಮಗನಿಗೂ ಕೊರೊನಾ ಸೋಂಕು ದೃಢಪಟ್ಟಿದೆ.

ಮೇ 5ರಂದು ವೃದ್ಧನ ಪತ್ನಿ ಮೃತಪಟ್ಟಿದ್ದರು: ಚಿಂತಾಮಣಿಯ ವೃದ್ಧನ ಪತ್ನಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಬೆಂಗಳೂರಿನ ಮಗಳ ಮನೆಯಲ್ಲಿ ವಿಶ್ರಾಂತಿ ಪಡೆದಿದ್ದರು. ಬಳಿಕ ಏ.26ರಂದು ಚಿಂತಾಮಣಿ ನಗರಕ್ಕೆ ವಾಪಸಾಗಿದ್ದರು. ನಂತರ ಮೇ 5ರಂದು ವೃದ್ಧನ ಪತ್ನಿ ಮೃತಪಟ್ಟಿದ್ದರು. ಅಂತ್ಯಸಂಸ್ಕಾರದ ವೇಳೆ ಸಂಬಂಧಿಕರು ಭಾಗಿಯಾಗಿದ್ದರು.

ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದವರಿಗೆ ಆತಂಕ: ಮೇ 5ರಂದು ವೃದ್ಧನ ಮನೆಗೆ ತಾಲೂಕು ಅಧಿಕಾರಿ ಭೇಟಿ ನೀಡಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದವರಿಗೆ ಸೂಚಿಸಿದ್ದರು. ಕೊರೊನಾ ಸೋಂಕಿತ ವೃದ್ಧ ಹಲವೆಡೆ ಓಡಾಡಿದ್ದ ಹಿನ್ನೆಲೆಯಲ್ಲಿ ಯಾವ ಮೂಲದಿಂದ ವೃದ್ಧನಿಗೆ ಸೋಂಕು ಹರಡಿತು ಎಂದು ವೃದ್ಧನ ಸೋಂಕಿನ ಮೂಲದ ಬಗ್ಗೆ ಅಧಿಕಾರಿಗಳಿಂದ ತನಿಖೆ ನಡೆಸುತ್ತಿದ್ದಾರೆ.

ಲಂಡನ್​ನಿಂದ 2 ತಿಂಗಳ ಹಿಂದೆ ಬಂದಿದ್ದ ಮೊಮ್ಮಗ: ಇದೀಗ ವೃದ್ಧನ ಮೊಮ್ಮಗ 22 ವರ್ಷದ ಯುವಕನಿಗೂ ಕೊರೊನಾ ಪಾಸಿಟಿವ್ ಬಂದಿದೆ. ಈತ ಲಂಡನ್​ನಿಂದ ಎರಡು ತಿಂಗಳ ಹಿಂದೆ ಬೆಂಗಳೂರಿಗೆ ಆಗಮಿಸಿದ್ದ. ಮೂಲತಃ ಬೆಂಗಳೂರಿನ ವಿಜಯನಗರ ನಿವಾಸಿಯಾಗಿದ್ದು, ಚಿಂತಾಮಣಿಯ ತಾತನ ಮನೆಗೆ ಇತ್ತೀಚೆಗೆ ಆಗಮಿಸಿದ್ದ. ಮೇ 5ರಂದು ಮೃತಪಟ್ಟಿದ್ದ ಅಜ್ಜಿಯ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದ. ಯುವಕನ ಜೊತೆ 60ಕ್ಕೂ ಹೆಚ್ಚು ಜನ ಭಾಗಿಯಾಗಿದ್ರು.

ಚಿಂತಾಮಣಿಯ ತಾತ-ಮೊಮ್ಮೊಗನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಈಗಾಗಲೇ ಪ್ರಾಥಮಿಕ ಸಂಪರ್ಕದಲ್ಲಿದ್ದ 73 ಮಂದಿಯನ್ನು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಕ್ವಾರಂಟೈನ್ ಮಾಡಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!