ವೈದ್ಯರ ಕೊರತೆ ಎದುರಿಸುತ್ತಿರೋ ಸರ್ಕಾರಕ್ಕೆ ಮತ್ತೊಂದು ಬಿಗ್ ಶಾಕ್!

ಬೆಂಗಳೂರು: ವೈದ್ಯರ ಕೊರತೆ ಎದುರಿಸುತ್ತಿರೋ ಸರ್ಕಾರಕ್ಕೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಯಾವುದೇ ಭದ್ರತಾ ಸೌಲಭ್ಯಗಳನ್ನ ನೀಡದ ಹಿನ್ನೆಲೆಯಲ್ಲಿ ಇಂದು ಸಾಮೂಹಿಕ ರಾಜೀನಾಮೆಗೆ ವೈದ್ಯರು ನಿರ್ಧರಿಸಿದ್ದಾರೆ. ಸುಮಾರು 2 ಸಾವಿರಕ್ಕೂ ಹೆಚ್ಚು ಗುತ್ತಿಗೆ ಆಯುಷ್ ವೈದ್ಯರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ವೈದ್ಯರ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಹಾಗೂ ಅನಿರ್ದಿಷ್ಟಾವಧಿ ಮುಷ್ಕರಕ್ಕೂ ಮುಂದಾಗಿದ್ದಾರೆ. ಕೊರೊನಾ ವಾರಿಯರ್ಸ್​ ಆಗಿ ಪ್ರಾಥಮಿಕ, ತಾಲೂಕು, ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಆಯುಷ್ ವೈದ್ಯರು ಕೆಲಸ ಮಾಡ್ತಿದ್ದಾರೆ. ಆದ್ರೆ ಸರ್ಕಾರದಿಂದ […]

ವೈದ್ಯರ ಕೊರತೆ ಎದುರಿಸುತ್ತಿರೋ ಸರ್ಕಾರಕ್ಕೆ ಮತ್ತೊಂದು ಬಿಗ್ ಶಾಕ್!
Ayesha Banu

|

Jul 16, 2020 | 9:05 AM

ಬೆಂಗಳೂರು: ವೈದ್ಯರ ಕೊರತೆ ಎದುರಿಸುತ್ತಿರೋ ಸರ್ಕಾರಕ್ಕೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಯಾವುದೇ ಭದ್ರತಾ ಸೌಲಭ್ಯಗಳನ್ನ ನೀಡದ ಹಿನ್ನೆಲೆಯಲ್ಲಿ ಇಂದು ಸಾಮೂಹಿಕ ರಾಜೀನಾಮೆಗೆ ವೈದ್ಯರು ನಿರ್ಧರಿಸಿದ್ದಾರೆ.

ಸುಮಾರು 2 ಸಾವಿರಕ್ಕೂ ಹೆಚ್ಚು ಗುತ್ತಿಗೆ ಆಯುಷ್ ವೈದ್ಯರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ವೈದ್ಯರ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಹಾಗೂ ಅನಿರ್ದಿಷ್ಟಾವಧಿ ಮುಷ್ಕರಕ್ಕೂ ಮುಂದಾಗಿದ್ದಾರೆ.

ಕೊರೊನಾ ವಾರಿಯರ್ಸ್​ ಆಗಿ ಪ್ರಾಥಮಿಕ, ತಾಲೂಕು, ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಆಯುಷ್ ವೈದ್ಯರು ಕೆಲಸ ಮಾಡ್ತಿದ್ದಾರೆ. ಆದ್ರೆ ಸರ್ಕಾರದಿಂದ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಇವರಿಗೆ ಕಡಿಮೆ ವೇತನ ನೀಡಲಾಗುತ್ತಿದೆ. ಹಾಗೂ ಯಾವುದೇ ಭದ್ರತಾ ಸೌಲಭ್ಯಗಳನ್ನೂ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ಕ್ರಮಕ್ಕೆ ಗುತ್ತಿಗೆ ಆಯುಷ್ ವೈದ್ಯರು ತೀವ್ರ ಕಿಡಿಕಾಡಿದ್ದಾರೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada