ಕಾರು ಅಡ್ಡಾದಿಡ್ಡಿ ಚಲಾಯಿಸಿದ ಬಿಜೆಪಿ ನಾಯಕ, 2 ಮಹಿಳೆಯರ ಸಾವು
ಬೆಳಗಾವಿ: ತಾಲೂಕಿನ ಮುತಗಾ ಗ್ರಾಮದ ಬಳಿ ಬಿಜೆಪಿ ಯುವ ಮುಖಂಡನ ನಿರ್ಲಕ್ಷ್ಯತನಕ್ಕೆ ಇಬ್ಬರು ಮಹಿಳೆಯರು ಬಲಿಯಾಗಿದ್ದಾರೆ. ರಾತ್ರಿ ಊಟ ಮುಗಿಸಿ ವಾಕಿಂಗ್ ಹೋಗುತ್ತಿದ್ದ ಮಹಿಳೆಯರ ಮೇಲೆ ಬಿಜೆಪಿ ನಾಯಕ ಯುವರಾಜ್ ಜಾಧವ್ ಕಾರು ಹರಿಸಿದ್ದಾನೆ. ಘಟನೆಯಲ್ಲಿ ಸವಿತಾ ಪಾಟೀಲ್(44) ಮತ್ತು ವಿದ್ಯಾ ಪಾಟೀಲ್(52) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯುವರಾಜ್ ಜಾಧವ್ ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದೇ ಅವಘಡಕ್ಕೆ ಕಾರಣವಾಗಿದೆ. ಘಟನೆಯಲ್ಲಿ ಶಾಂತಾ ಚೌಗುಲೆ ಎಂಬ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತ ಸಂಬಂಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಕೇಸ್ […]
ಬೆಳಗಾವಿ: ತಾಲೂಕಿನ ಮುತಗಾ ಗ್ರಾಮದ ಬಳಿ ಬಿಜೆಪಿ ಯುವ ಮುಖಂಡನ ನಿರ್ಲಕ್ಷ್ಯತನಕ್ಕೆ ಇಬ್ಬರು ಮಹಿಳೆಯರು ಬಲಿಯಾಗಿದ್ದಾರೆ. ರಾತ್ರಿ ಊಟ ಮುಗಿಸಿ ವಾಕಿಂಗ್ ಹೋಗುತ್ತಿದ್ದ ಮಹಿಳೆಯರ ಮೇಲೆ ಬಿಜೆಪಿ ನಾಯಕ ಯುವರಾಜ್ ಜಾಧವ್ ಕಾರು ಹರಿಸಿದ್ದಾನೆ. ಘಟನೆಯಲ್ಲಿ ಸವಿತಾ ಪಾಟೀಲ್(44) ಮತ್ತು ವಿದ್ಯಾ ಪಾಟೀಲ್(52) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಯುವರಾಜ್ ಜಾಧವ್ ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದೇ ಅವಘಡಕ್ಕೆ ಕಾರಣವಾಗಿದೆ. ಘಟನೆಯಲ್ಲಿ ಶಾಂತಾ ಚೌಗುಲೆ ಎಂಬ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತ ಸಂಬಂಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಜಿಲ್ಲಾ ಬಿಜೆಪಿ ಯುವಮೋರ್ಚಾ ಮಾಜಿ ಅಧ್ಯಕ್ಷ ಯುವರಾಜ್ನನ್ನು ಪೊಲೀಸರು ಬಂಧಿಸಿದ್ದಾರೆ.
Published On - 11:58 am, Mon, 25 May 20