ಕಾರು ಅಡ್ಡಾದಿಡ್ಡಿ ಚಲಾಯಿಸಿದ ಬಿಜೆಪಿ ನಾಯಕ, 2 ಮಹಿಳೆಯರ ಸಾವು

ಬೆಳಗಾವಿ: ತಾಲೂಕಿನ ಮುತಗಾ ಗ್ರಾಮದ ಬಳಿ ಬಿಜೆಪಿ ಯುವ ಮುಖಂಡನ ನಿರ್ಲಕ್ಷ್ಯತನಕ್ಕೆ ಇಬ್ಬರು ಮಹಿಳೆಯರು ಬಲಿಯಾಗಿದ್ದಾರೆ. ರಾತ್ರಿ ಊಟ ಮುಗಿಸಿ ವಾಕಿಂಗ್‌ ಹೋಗುತ್ತಿದ್ದ ಮಹಿಳೆಯರ ಮೇಲೆ ಬಿಜೆಪಿ ನಾಯಕ ಯುವರಾಜ್ ಜಾಧವ್ ಕಾರು ಹರಿಸಿದ್ದಾನೆ. ಘಟನೆಯಲ್ಲಿ ಸವಿತಾ ಪಾಟೀಲ್(44) ಮತ್ತು ವಿದ್ಯಾ ಪಾಟೀಲ್(52) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯುವರಾಜ್ ಜಾಧವ್ ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದೇ ಅವಘಡಕ್ಕೆ ಕಾರಣವಾಗಿದೆ. ಘಟನೆಯಲ್ಲಿ ಶಾಂತಾ ಚೌಗುಲೆ ಎಂಬ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತ ಸಂಬಂಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಕೇಸ್ […]

ಕಾರು ಅಡ್ಡಾದಿಡ್ಡಿ ಚಲಾಯಿಸಿದ ಬಿಜೆಪಿ ನಾಯಕ, 2 ಮಹಿಳೆಯರ ಸಾವು
ಸಾಧು ಶ್ರೀನಾಥ್​

Updated on: May 25, 2020 | 12:39 PM

ಬೆಳಗಾವಿ: ತಾಲೂಕಿನ ಮುತಗಾ ಗ್ರಾಮದ ಬಳಿ ಬಿಜೆಪಿ ಯುವ ಮುಖಂಡನ ನಿರ್ಲಕ್ಷ್ಯತನಕ್ಕೆ ಇಬ್ಬರು ಮಹಿಳೆಯರು ಬಲಿಯಾಗಿದ್ದಾರೆ. ರಾತ್ರಿ ಊಟ ಮುಗಿಸಿ ವಾಕಿಂಗ್‌ ಹೋಗುತ್ತಿದ್ದ ಮಹಿಳೆಯರ ಮೇಲೆ ಬಿಜೆಪಿ ನಾಯಕ ಯುವರಾಜ್ ಜಾಧವ್ ಕಾರು ಹರಿಸಿದ್ದಾನೆ. ಘಟನೆಯಲ್ಲಿ ಸವಿತಾ ಪಾಟೀಲ್(44) ಮತ್ತು ವಿದ್ಯಾ ಪಾಟೀಲ್(52) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಯುವರಾಜ್ ಜಾಧವ್ ಅಡ್ಡಾದಿಡ್ಡಿ ಕಾರು ಚಲಾಯಿಸಿದ್ದೇ ಅವಘಡಕ್ಕೆ ಕಾರಣವಾಗಿದೆ. ಘಟನೆಯಲ್ಲಿ ಶಾಂತಾ ಚೌಗುಲೆ ಎಂಬ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತ ಸಂಬಂಧ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಜಿಲ್ಲಾ ಬಿಜೆಪಿ ಯುವಮೋರ್ಚಾ ಮಾಜಿ ಅಧ್ಯಕ್ಷ ಯುವರಾಜ್​ನನ್ನು ಪೊಲೀಸರು ಬಂಧಿಸಿದ್ದಾರೆ.

Published On - 11:58 am, Mon, 25 May 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us