10 ವರ್ಷ ಕಳೆದ್ರೂ ನೆರೆ ಸಂತ್ರಸ್ತರಿಗೆ ಇನ್ನೂ ಸಿಕ್ಕಿಲ್ಲ ಮನೆ ಭಾಗ್ಯ

| Updated By: Ravi Shankar

Updated on: Mar 31, 2020 | 1:59 AM

ಬಳ್ಳಾರಿ: 10 ವರ್ಷ ಕಳೆದ್ರೂ ನೆರೆ ಸಂತ್ರಸ್ತರಿಗೆ ಇನ್ನೂ ಮನೆ ಸಿಕ್ಕಿಲ್ಲ. 2009ರಲ್ಲಾದ ನೆರೆ ವೇಳೆ ಹಲವರು ಮನೆ ಕಳೆದುಕೊಂಡಿದ್ದರು. ಹೀಗಾಗಿ ಗಣಿ ಮಾಲೀಕರಿಗೆ ಮನೆ ನಿರ್ಮಾಣ ಮಾಡಿ ಕೊಡುವ ಜವಾಬ್ದಾರಿ ನೀಡಲಾಗಿತ್ತು. 2011ರಲ್ಲಿ ಗಣಿಗಾರಿಕೆ ಸ್ಥಗಿತ ಹಿನ್ನೆಲೆ ಕಾಮಗಾರಿ ಸ್ಥಗಿತವಾಗಿದೆ. ಸಿರುಗುಪ್ಪ ತಾಲೂಕಿನ ಹಚ್ಚೊಳ್ಳಿಯಲ್ಲಿ ನೆರೆ ಸಂತ್ರಸ್ತರಿಗೆಂದು ನಿರ್ಮಾಣವಾಗುತ್ತಿದ್ದ ಮನೆ ನಿರ್ಮಾಣ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ. ಗಣಿ ಮಾಲೀಕರು ಮನೆ ಕಾಮಗಾರಿ ಸ್ಥಗಿತಗೊಳಿಸಿದ ಹಿನ್ನೆಲೆ ಬಳ್ಳಾರಿ ಜಿಲ್ಲಾಡಳಿತದಿಂದ 598 ಮನೆಗಳ ನಿರ್ಮಾಣ ಮಾಡಲಾಗಿದೆ. ಆದರೆ 10 […]

10 ವರ್ಷ ಕಳೆದ್ರೂ ನೆರೆ ಸಂತ್ರಸ್ತರಿಗೆ ಇನ್ನೂ ಸಿಕ್ಕಿಲ್ಲ ಮನೆ ಭಾಗ್ಯ
Follow us on

ಬಳ್ಳಾರಿ: 10 ವರ್ಷ ಕಳೆದ್ರೂ ನೆರೆ ಸಂತ್ರಸ್ತರಿಗೆ ಇನ್ನೂ ಮನೆ ಸಿಕ್ಕಿಲ್ಲ. 2009ರಲ್ಲಾದ ನೆರೆ ವೇಳೆ ಹಲವರು ಮನೆ ಕಳೆದುಕೊಂಡಿದ್ದರು. ಹೀಗಾಗಿ ಗಣಿ ಮಾಲೀಕರಿಗೆ ಮನೆ ನಿರ್ಮಾಣ ಮಾಡಿ ಕೊಡುವ ಜವಾಬ್ದಾರಿ ನೀಡಲಾಗಿತ್ತು. 2011ರಲ್ಲಿ ಗಣಿಗಾರಿಕೆ ಸ್ಥಗಿತ ಹಿನ್ನೆಲೆ ಕಾಮಗಾರಿ ಸ್ಥಗಿತವಾಗಿದೆ.

ಸಿರುಗುಪ್ಪ ತಾಲೂಕಿನ ಹಚ್ಚೊಳ್ಳಿಯಲ್ಲಿ ನೆರೆ ಸಂತ್ರಸ್ತರಿಗೆಂದು ನಿರ್ಮಾಣವಾಗುತ್ತಿದ್ದ ಮನೆ ನಿರ್ಮಾಣ ಕಾಮಗಾರಿಯನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ. ಗಣಿ ಮಾಲೀಕರು ಮನೆ ಕಾಮಗಾರಿ ಸ್ಥಗಿತಗೊಳಿಸಿದ ಹಿನ್ನೆಲೆ ಬಳ್ಳಾರಿ ಜಿಲ್ಲಾಡಳಿತದಿಂದ 598 ಮನೆಗಳ ನಿರ್ಮಾಣ ಮಾಡಲಾಗಿದೆ. ಆದರೆ 10 ವರ್ಷ ಕಳೆದ್ರೂ ಇನ್ನೂ ಮನೆಗಳ ಹಂಚಿಕೆಯಾಗಿಲ್ಲ.

ನೆರೆ ಸಂತ್ರಸ್ತರಿಗೆ ಹಂಚಿಕೆಯಾಗದೆ ಮನೆಗಳು ಶಿಥಿಲಾವಸ್ಥೆ ತಲುಪಿವೆ. ಮನೆಗಳಿಗೆ ಅಳವಡಿಸಲಾಗಿದ್ದ ಕಿಟಕಿ, ಬಾಗಿಲು ಕಳ್ಳತನವಾಗಿದೆ. ನೂರಾರು ಮನೆಗಳು ವಾಸಿಸಲು ಯೋಗ್ಯವಿಲ್ಲದಂತಾಗಿವೆ. ಇಷ್ಟಾದ್ರೂ ಯಾವುದೇ ಕ್ರಮಕೈಗೊಳ್ಳದಿರುವ ಜಿಲ್ಲಾಡಳಿತ ಮತ್ತು ಸರ್ಕಾರದ ನಿರ್ಲಕ್ಷ್ಯಕ್ಕೆ ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 9:42 am, Mon, 20 January 20