
ಮೈಸೂರು: ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಅಲೆದಾಡಿ ಅಲೆದಾಡಿ ಯುವಕ ಮೃತಪಟ್ಟಿರುವ ಅಮಾನವೀಯ ಘಟನೆ ಮೈಸೂರಿನಲ್ಲಿ ನಡೆದಿದೆ. ಮಂಡ್ಯದ ಶರತ್ (21) ಮೃತ ದುರ್ದೈವಿ.
ಹೃದಯ ಸಂಬಂಧಿ ಕಾಯಿಲೆಯಿಂದ ನಿತ್ರಾಣನಾಗಿದ್ದ ಶರತ್ಗೆ ಚಿಕಿತ್ಸೆ ಕೊಡಿಸಲು ನಿನ್ನೆ ಮಧ್ಯ ರಾತ್ರಿಯಿಂದ ಆಂಬ್ಯುಲೆನ್ಸ್ನಲ್ಲಿ ಪೋಷಕರು ಆಸ್ಪತ್ರೆಗಳಿಗೆ ಅಲೆದಾಡಿದ್ದಾರೆ. ಆದರೆ ಕೊರೊನಾ ಕಾರಣ ಹೇಳಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡದೆ ನಿರ್ಲಕ್ಷ್ಯವಹಿಸಲಾಗಿದೆ. ಕೊನೆಗೆ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಶರತ್ನನ್ನು ಕರೆದುಕೊಂಡು ಹೋದಾಗ ಯುವಕ ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆಯೇ ಕೊನೆಯುಸಿರೆಳೆದಿದ್ದಾನೆ.
ಸೂಕ್ತ ಸಮಯಕ್ಕೆ ಚಿಕಿತ್ಸೆ ನೀಡಿದ್ದರೆ ನನ್ನ ಮಗ ಬದುಕುತ್ತಿದ್ದ ಎಂದು ವೈದ್ಯರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಗೆ ದಾಖಲಿಸಿಕೊಳ್ಳಲು ವಿಳಂಬ ಮಾಡಿದ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಆಸ್ಪತ್ರೆ ಆವರಣದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.