ಮುರುಘಾಶ್ರೀ ವಿರುದ್ಧದ 2ನೇ ಪೋಕ್ಸೋ ಪ್ರಕರಣ: ಮುರುಘಾಶ್ರೀ, ವಾರ್ಡನ್ ರಶ್ಮಿ ಕೋರ್ಟ್‌ಗೆ ಹಾಜರು, ಮಾರ್ಚ್ 29ಕ್ಕೆ ವಿಚಾರಣೆ ಮುಂದೂಡಿಕೆ
ಚಿತ್ರದುರ್ಗದ ಮುರುಘಾಶ್ರೀ ವಿರುದ್ಧದ 2ನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಮುರುಘಾಶ್ರೀ, ಎ2 ವಾರ್ಡನ್ ರಶ್ಮಿ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್‌ನಲ್ಲಿ ಇಂದು ವಿಚಾರಣೆ ಮಾಡಲಾಗಿದೆ.
ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ (Murugha Mutt Shivamurthy Sharanara) ವಿರುದ್ಧ ದಾಖಲಾದ 2ನೇ ಫೋಕ್ಸೋ ಪ್ರಕರಣ (POCSO Case) ಸಂಬಂಧ ಮಠದ ಹಾಸ್ಟೆಲ್‌ನಲ್ಲಿದ್ದ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ದೃಢಪಟ್ಟಿದ್ದು, ಇತ್ತೀಚೆಗೆ ಪೊಲೀಸರು 761 ಪುಟಗಳ ಚಾರ್ಜ್ ಶೀಟ್ (Charge Sheet) ಸಲ್ಲಿಸಿದ್ದರು. 12 ಮತ್ತು 14 ವರ್ಷದ ಸಂತ್ರಸ್ತ ಬಾಲಕಿಯರ ಹೇಳಿಕೆಯನ್ನು ಸಿಆರ್ಪಿಸಿ 161 ಅಡಿ ದಾಖಲಿಸಿಕೊಳ್ಳಲಾಗಿದೆ. ಸದ್ಯ ಈ ಕುರಿತಾಗಿ ಎ1 ಮುರುಘಾಶ್ರೀ, ಎ2 ವಾರ್ಡನ್ ರಶ್ಮಿ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್‌ನಲ್ಲಿ ವಿಚಾರಣೆಗೊಳಪಡಿಸಲಾಗಿದೆ. ಚಾರ್ಜ್‌ಶೀಟ್ ರದ್ದುಗೊಳಿಸುವಂತೆ ಶ್ರೀಗಳ ಪರ ವಕೀಲರಿಂದ ಅರ್ಜಿ ಸಲ್ಲಿಸಲಾಗಿದ್ದು, ಪ್ರಕರಣದ ವಿಚಾರಣೆಯನ್ನು ಮಾರ್ಚ್ 29ಕ್ಕೆ ನ್ಯಾಯಾಲಯ ಮುಂದೂಡಿದೆ.
ಚಿತ್ರದುರ್ಗದ ಮುರುಘಾಶ್ರೀ ವಿರುದ್ಧ 2ನೇ ಫೋಕ್ಸೋ ಪ್ರಕರಣ ಅಕ್ಟೋಬರ್ 13ರಂದು ದಾಖಲಾಗಿತ್ತು. ಎ1 ಮುರುಘಾಶ್ರೀ, ಎ2 ವಾರ್ಡನ್ ರಶ್ಮಿ, ಎ3 ಮಠದ ಉತ್ತರಾಧಿಕಾರಿ (ಬಸವಾದಿತ್ಯ 17), ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ ಗಂಗಾಧರ, ಎ6 ಮುರುಘಾಶ್ರೀ ಸಹಾಯಕ ಮಹಾಲಿಂಗ, ಎ7 ಅಡುಗೆಭಟ್ಟ ಕರಿಬಸಪ್ಪ ವಿರುದ್ಧ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಪ್ರಕರಣ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆ ಆಗಿತ್ತು. ಬಳಿಕ ಮಠದ ಅಡುಗೆ ಸಹಾಯಕಿ, ಮಠದ ಹಾಸ್ಟೆಲ್ ನಲ್ಲಿದ್ದ ತನ್ನ ಇಬ್ಬರು ಮಕ್ಕಳು, ಮತ್ತಿಬ್ಬರು ಮಕ್ಕಳು ಸೇರಿ ನಾಲ್ವರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ದೂರು ದಾಖಲಿಸಿದ್ದರು.
ಇದನ್ನೂ ಓದಿ: ಮುರುಘಾ ಶ್ರೀ ವಿರುದ್ಧ ಜಾರ್ಜ್ಶೀಟ್ ಸಲ್ಲಿಸಿದ ಪೊಲೀಸರು: 12 ಮತ್ತು 14 ವರ್ಷದ ಸಂತ್ರಸ್ತೆಯರ ಹೇಳಿಕೆ ಇಲ್ಲಿದೆ
ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ದೃಢ
ಮಠದ ಹಾಸ್ಟೆಲ್‌ನಲ್ಲಿದ್ದ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ದೃಢಪಟ್ಟಿದ್ದು, ಮಕ್ಕಳು ಮತ್ತು ಕುಟುಂಬಸ್ಥರ ಅನುಕಂಪ, ಗೌರವ ಗಳಿಸಿ ದೌರ್ಜನ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಹಾಸ್ಟೆಲ್ ವಾರ್ಡನ್ ರಶ್ಮಿ ಮೂಲಕ ಮಕ್ಕಳನ್ನು ಕೊಠಡಿಗೆ ಕರೆಸಿಕೊಂಡು ಮತ್ತು ಭರಿಸುವ ಚಾಕ್ಲೆಟ್ ನೀಡಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಸದ್ಯ ಪೊಲೀಸರು, ಕಲಂ 376(C), 376(2)(n), 376(AB), 376(3), r/w 34, ಐಪಿಸಿ ಮತ್ತು u/s 5(L), 6,7 POCSO Act -2012 ಮತ್ತು sec : 3(f), ಧಾರ್ಮಿಕ ಕೇಂದ್ರ ದುರ್ಬಳಕೆ 1988 ಮತ್ತು sec 77 Juvenile Justice Act 2015, ಸಂತ್ರಸ್ತರು ಸಿಆರ್ಪಿಸಿ 161, 164 ಅಡಿ ನೀಡಿದ ಹೇಳಿಕೆ ಆಧಾರದ ಮೇಲೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಇದನ್ನೂ ಓದಿ: ಚಿತ್ರದುರ್ಗ: ಮುರುಘಾ ಶ್ರೀ ವಿರುದ್ಧ ದಾಖಲಾದ ಒಂದನೇ ಪೋಕ್ಸೋ ಪ್ರಕರಣದ ಜಾಮೀನು ಅರ್ಜಿ ವಜಾ
ಎ1 ಮುರುಘಾಶ್ರೀ, ಎ2 ವಾರ್ಡನ್ ರಶ್ಮಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು, ಕಲಂ 173 (8) ಸಿಆರ್ಪಿಸಿ ಅಡಿಯಲ್ಲಿ ತನಿಖೆ ಮುಂದುವರೆದಿದೆ ಎನ್ನಲಾಗುತ್ತಿದೆ. ದೂರಿನಲ್ಲಿ ನಾಲ್ವರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದ್ದು, ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು ದೃಢಪಟ್ಟಿಲ್ಲ. ಮುರುಘಾಶ್ರೀ ವಿರುದ್ಧ ಪಿತೂರಿ ಕೇಸ್ ಕೌಂಟರ್ ಬ್ಲಾಸ್ಟ್ ಕೇಸ್ ಎಂದು ಕಂಡು ಬರುತ್ತದೆ. ಬಾಕಿ ತನಿಖೆ ಪೂರ್ಣಗೊಳಿಸಿ ಅಂತಿಮ ಚಾರ್ಜ್ ಶೀಟ್ ಸಲ್ಲಿಕೆ ಮಾಡಲು ಪೊಲೀಸರು ಸಜ್ಜಾಗಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:18 pm, Mon, 27 March 23