ಡಿವೈಡರ್‌ಗೆ ಕಾರು ಡಿಕ್ಕಿ, ಸ್ಥಳದಲ್ಲೇ ಮೂವರ ದುರ್ಮರಣ
ಬಳ್ಳಾರಿ: ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಖಾನಾಹೊಸಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ದೇವರಾಜ್(21),ಭೀಮರಾಯ(38) ಅಂಜನಾದೇವಿ(14) ಮೃತ ದುರ್ದೈವಿಗಳು. ರಾತ್ರಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿದೆ. ನಂತರ ಹಿಂದೆ ಬರುತ್ತಿದ್ದ ಲಾರಿ ಕಾರಿಗೆ ಗುದ್ದಿದೆ. ಈ ಪರಿಣಾಮ ಮೂವರ ಪ್ರಾಣಪಕ್ಷಿ ಹಾರಿ ಹೋಗಿದೆ. ಮೃತರು ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನವರು ಎಂದು ತಿಳಿದು ಬಂದಿದೆ. ಖಾನಾಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ […]
ಬಳ್ಳಾರಿ: ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಖಾನಾಹೊಸಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ದೇವರಾಜ್(21),ಭೀಮರಾಯ(38) ಅಂಜನಾದೇವಿ(14) ಮೃತ ದುರ್ದೈವಿಗಳು.
ರಾತ್ರಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿದೆ. ನಂತರ ಹಿಂದೆ ಬರುತ್ತಿದ್ದ ಲಾರಿ ಕಾರಿಗೆ ಗುದ್ದಿದೆ. ಈ ಪರಿಣಾಮ ಮೂವರ ಪ್ರಾಣಪಕ್ಷಿ ಹಾರಿ ಹೋಗಿದೆ. ಮೃತರು ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನವರು ಎಂದು ತಿಳಿದು ಬಂದಿದೆ.
ಖಾನಾಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಲಾಕ್ಡೌನ್ ಹಿನ್ನೆಲೆ ಸಂಚಾರ ಸ್ಥಗಿತಗೊಂಡಾಗ ಈ ರೀತಿಯ ಅಪಘಾತಗಳ ಸಂಖ್ಯೆ ಕಡಿಮೆಯಾಗಿತ್ತು. ಆದರೆ 3ನೇ ಹಂತದ ಲಾಕ್ಡೌನ್ ನಂತರ ಅಪಘಾತಗಳು ಹೆಚ್ಚುತ್ತಿವೆ ಎಂದು ವರದಿಯಾಗಿದೆ.