ಡಿವೈಡರ್‌ಗೆ ಕಾರು ಡಿಕ್ಕಿ, ಸ್ಥಳದಲ್ಲೇ ಮೂವರ ದುರ್ಮರಣ

ಬಳ್ಳಾರಿ: ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಖಾನಾಹೊಸಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ದೇವರಾಜ್(21),ಭೀಮರಾಯ(38) ಅಂಜನಾದೇವಿ(14) ಮೃತ ದುರ್ದೈವಿಗಳು. ರಾತ್ರಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿದೆ. ನಂತರ ಹಿಂದೆ ಬರುತ್ತಿದ್ದ ಲಾರಿ ಕಾರಿಗೆ ಗುದ್ದಿದೆ. ಈ ಪರಿಣಾಮ ಮೂವರ ಪ್ರಾಣಪಕ್ಷಿ ಹಾರಿ ಹೋಗಿದೆ. ಮೃತರು ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನವರು ಎಂದು ತಿಳಿದು ಬಂದಿದೆ. ಖಾನಾಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ […]

ಡಿವೈಡರ್‌ಗೆ ಕಾರು ಡಿಕ್ಕಿ, ಸ್ಥಳದಲ್ಲೇ ಮೂವರ ದುರ್ಮರಣ
ಸಾಧು ಶ್ರೀನಾಥ್​

Updated on: May 17, 2020 | 9:13 AM

ಬಳ್ಳಾರಿ: ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಖಾನಾಹೊಸಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ದೇವರಾಜ್(21),ಭೀಮರಾಯ(38) ಅಂಜನಾದೇವಿ(14) ಮೃತ ದುರ್ದೈವಿಗಳು.

ರಾತ್ರಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿದೆ. ನಂತರ ಹಿಂದೆ ಬರುತ್ತಿದ್ದ ಲಾರಿ ಕಾರಿಗೆ ಗುದ್ದಿದೆ. ಈ ಪರಿಣಾಮ ಮೂವರ ಪ್ರಾಣಪಕ್ಷಿ ಹಾರಿ ಹೋಗಿದೆ. ಮೃತರು ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನವರು ಎಂದು ತಿಳಿದು ಬಂದಿದೆ.

ಖಾನಾಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಲಾಕ್​ಡೌನ್ ಹಿನ್ನೆಲೆ ಸಂಚಾರ ಸ್ಥಗಿತಗೊಂಡಾಗ ಈ ರೀತಿಯ ಅಪಘಾತಗಳ ಸಂಖ್ಯೆ ಕಡಿಮೆಯಾಗಿತ್ತು. ಆದರೆ 3ನೇ ಹಂತದ ಲಾಕ್​ಡೌನ್​ ನಂತರ ಅಪಘಾತಗಳು ಹೆಚ್ಚುತ್ತಿವೆ ಎಂದು ವರದಿಯಾಗಿದೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us