
ಮೈಸೂರು: ಖಾಸಗಿ ಬಸ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ಟಿ.ನರಸೀಪುರ ತಾಲೂಕಿನ ಮೂಗೂರು ಬಸ್ ನಿಲ್ದಾಣ ಬಳಿ ಸಂಭವಿಸಿದೆ. ಹೊಸಹಳ್ಳಿ ಗ್ರಾಮದ ಚಿಕ್ಕಣ್ಣಮ್ಮ, ಕರೋಹಟ್ಟಿ ಬಸವರಾಜು, ಉಮ್ಮತ್ತೂರಿನ ಗೋವಿಂದಶೆಟ್ಟಿ ಮೃತ ದುರ್ದೈವಿಗಳು.
ಮೂಗೂರು ಬಸ್ ನಿಲ್ದಾಣದ ಬಳಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮತ್ತೊಬ್ಬ ಸಾವಿಗೀಡಾಗಿದ್ದಾನೆ. ಘಟನಾ ಸ್ಥಳಕ್ಕೆ ಟಿ.ನರಸೀಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.