ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಮೂವರು ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ತಿರುಪತಿಯಿಂದ ಮಂಗಳೂರಿಗೆ ವಾಪಸಾಗುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿದೆ.
ಕಾರಿನಲ್ಲಿದ್ದ 9 ಜನರ ಪೈಕಿ 3 ಮೃತಪಟ್ಟಿದ್ದಾರೆ. ಉಳಿದ 6ಜನರಿಗೆ ಗಂಭೀರ ಗಾಯಗಳಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರು ಮಂಗಳೂರು ಮೂಲದ ಕಿಶನ್, ಅಕ್ಷಯ್, ಮೋನಪ್ಪ ಎಂದು ತಿಳಿದು ಬಂದಿದೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.