ಬೆಂಗಳೂರು ಬಳಿ ಕಂಬಕ್ಕೆ ಕಾರು ಡಿಕ್ಕಿ, ಮಂಗಳೂರಿನ ಮೂವರು ಸಾವು

ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಮೂವರು ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ತಿರುಪತಿಯಿಂದ ಮಂಗಳೂರಿಗೆ ವಾಪಸಾಗುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಹತ್ತಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿದೆ. ಕಾರಿನಲ್ಲಿದ್ದ 9 ಜನರ ಪೈಕಿ 3 ಮೃತಪಟ್ಟಿದ್ದಾರೆ. ಉಳಿದ 6ಜನರಿಗೆ ಗಂಭೀರ ಗಾಯಗಳಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರು ಮಂಗಳೂರು ಮೂಲದ ಕಿಶನ್, ಅಕ್ಷಯ್, ಮೋನಪ್ಪ […]

ಬೆಂಗಳೂರು ಬಳಿ ಕಂಬಕ್ಕೆ ಕಾರು ಡಿಕ್ಕಿ, ಮಂಗಳೂರಿನ ಮೂವರು ಸಾವು
ಸಾಧು ಶ್ರೀನಾಥ್​

Updated on: Jan 09, 2020 | 12:32 PM

ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಮೂವರು ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ತಿರುಪತಿಯಿಂದ ಮಂಗಳೂರಿಗೆ ವಾಪಸಾಗುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಹತ್ತಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿದೆ.

ಕಾರಿನಲ್ಲಿದ್ದ 9 ಜನರ ಪೈಕಿ 3 ಮೃತಪಟ್ಟಿದ್ದಾರೆ. ಉಳಿದ 6ಜನರಿಗೆ ಗಂಭೀರ ಗಾಯಗಳಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರು ಮಂಗಳೂರು ಮೂಲದ ಕಿಶನ್, ಅಕ್ಷಯ್, ಮೋನಪ್ಪ ಎಂದು ತಿಳಿದು ಬಂದಿದೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 7:49 am, Thu, 9 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us