3 ವರ್ಷ ಕಳೆದ್ರೂ ಭ್ರಷ್ಟರಿಗಿಲ್ಲ ಶಿಕ್ಷೆ: ಹಲ್ಲುಕಿತ್ತ ಹಾವಿನಂತಾದ ಎಸಿಬಿ

ರಾಯಚೂರು: ಭಷ್ಟ ಅಧಿಕಾರಿಗಳಿಗೆ ತಕ್ಕ ಪಾಠ ಕಲಿಸಲೆಂದೇ ಎಸಿಬಿ ಸ್ಥಾಪನೆಯಾಗಿದೆ. ಲೋಕಾಯುಕ್ತಕ್ಕೆ ಎಳ್ಳುನೀರು ಬಿಟ್ಟ ನಂತರ, ಎಸಿಬಿ ಅಸ್ತಿತ್ವಕ್ಕೆ ಬಂದಿದೆ. ಎಸಿಬಿ ಠಾಣೆ ಸ್ಥಾಪನೆ, ಕಚೇರಿಗಳ ಸ್ಥಾಪನೆಗೆ ಅಂತಾನೆ ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಕೂಡ ಮಾಡಿದೆ. ಆದರೆ ಇದೆಲ್ಲವೂ ಈಗ ನೀರಲ್ಲಿ ಹೋಮ ಮಾಡಿದಂತಾಗಿದೆ. ಎಸಿಬಿ ಆಟಕ್ಕುಂಟು ಲೆಕ್ಕಕ್ಕಿಲ್ಲ: ದೇಶ ಹಾಗೂ ರಾಜ್ಯವನ್ನು ಕಾಡುತ್ತಿರುವ ಜ್ವಲಂತ ಸಮಸ್ಯೆಗಳಲ್ಲಿ ಭ್ರಷ್ಟಾಚಾರವೂ ಒಂದು. ಬಡವರ ಹಾಗೂ ಸಮಸ್ಯೆ ಸುಳಿಯಲ್ಲಿ ಸಿಲುಕಿ ನರಳುತ್ತಿರುವವರ ಬಳಿ ಭ್ರಷ್ಟರು ಲೂಟಿಗಿಳಿದಿದ್ದಾರೆ. ಇದೆಲ್ಲದಕ್ಕೂ ಬ್ರೇಕ್ […]

3 ವರ್ಷ ಕಳೆದ್ರೂ ಭ್ರಷ್ಟರಿಗಿಲ್ಲ ಶಿಕ್ಷೆ: ಹಲ್ಲುಕಿತ್ತ ಹಾವಿನಂತಾದ ಎಸಿಬಿ
Follow us
ಸಾಧು ಶ್ರೀನಾಥ್​
|

Updated on: Jan 28, 2020 | 8:01 AM

ರಾಯಚೂರು: ಭಷ್ಟ ಅಧಿಕಾರಿಗಳಿಗೆ ತಕ್ಕ ಪಾಠ ಕಲಿಸಲೆಂದೇ ಎಸಿಬಿ ಸ್ಥಾಪನೆಯಾಗಿದೆ. ಲೋಕಾಯುಕ್ತಕ್ಕೆ ಎಳ್ಳುನೀರು ಬಿಟ್ಟ ನಂತರ, ಎಸಿಬಿ ಅಸ್ತಿತ್ವಕ್ಕೆ ಬಂದಿದೆ. ಎಸಿಬಿ ಠಾಣೆ ಸ್ಥಾಪನೆ, ಕಚೇರಿಗಳ ಸ್ಥಾಪನೆಗೆ ಅಂತಾನೆ ಸರ್ಕಾರ ಕೋಟ್ಯಂತರ ರೂಪಾಯಿ ಖರ್ಚು ಕೂಡ ಮಾಡಿದೆ. ಆದರೆ ಇದೆಲ್ಲವೂ ಈಗ ನೀರಲ್ಲಿ ಹೋಮ ಮಾಡಿದಂತಾಗಿದೆ.

ಎಸಿಬಿ ಆಟಕ್ಕುಂಟು ಲೆಕ್ಕಕ್ಕಿಲ್ಲ: ದೇಶ ಹಾಗೂ ರಾಜ್ಯವನ್ನು ಕಾಡುತ್ತಿರುವ ಜ್ವಲಂತ ಸಮಸ್ಯೆಗಳಲ್ಲಿ ಭ್ರಷ್ಟಾಚಾರವೂ ಒಂದು. ಬಡವರ ಹಾಗೂ ಸಮಸ್ಯೆ ಸುಳಿಯಲ್ಲಿ ಸಿಲುಕಿ ನರಳುತ್ತಿರುವವರ ಬಳಿ ಭ್ರಷ್ಟರು ಲೂಟಿಗಿಳಿದಿದ್ದಾರೆ. ಇದೆಲ್ಲದಕ್ಕೂ ಬ್ರೇಕ್ ಹಾಕಿ ಭ್ರಷ್ಟರಿಗೆ ಪಾಠಕಲಿಸಲು ಸ್ಥಾಪನೆಯಾಗಿದ್ದ ಲೋಕಾಯುಕ್ತ ಸಂಸ್ಥೆಗೆ ಸಿದ್ದರಾಮಯ್ಯ ಸರ್ಕಾರ ಎಳ್ಳುನೀರು ಬಿಟ್ಟು ಎಸಿಬಿ ಸ್ಥಾಪನೆ ಮಾಡಲಾಗಿತ್ತು. ಆದ್ರೆ ಸರ್ಕಾರ ಅಂದುಕೊಂಡಿದ್ದೇ ಒಂದು, ಆಗಿರೋದು ಮತ್ತೊಂದು. ಎಸಿಬಿ ಸ್ಥಾಪನೆಯಾದ ಬಳಿಕ ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣವಾಗಲಿದೆ ಅನ್ನೋ ಭರವಸೆ ಹುಸಿಯಾಗಿದೆ. ಅದರಲ್ಲೂ ಅಭಿವೃದ್ಧಿ ವಿಚಾರದಲ್ಲಿ ತೀರಾ ಹಿಂದುಳಿದಿರುವ ಕಲ್ಯಾಣ ಕರ್ನಾಟಕದಲ್ಲಿ ಎಸಿಬಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ.

ಬಡವರನ್ನು ಸುಲಿಗೆ ಮಾಡುವ ಭ್ರಷ್ಟರಿಗಿಲ್ಲ ಶಿಕ್ಷೆ? ಎಸಿಬಿ ಅಸ್ತಿತ್ವಕ್ಕೆ ಬಂದು 3 ವರ್ಷ ಕಳೆದರೂ ಕಲ್ಯಾಣ ಕರ್ನಾಟಕ ಭಾಗದ 6 ಜಿಲ್ಲೆ ವ್ಯಾಪ್ತಿಯಲ್ಲಿ ಯಾವುದೇ ಭ್ರಷ್ಟ ಅಧಿಕಾರಿಗೆ ಶಿಕ್ಷೆಯಾಗಿಲ್ಲ. ನೆಪಮಾತ್ರಕ್ಕೆ ಎಸಿಬಿ ಠಾಣೆಗಳನ್ನ ಸ್ಥಾಪಿಸಿರುವ ಸರ್ಕಾರ ಲಂಚಕೋರ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಭ್ರಷ್ಟಾಚಾರ ನಿಗ್ರಹದಳಕ್ಕೆ ಪೂರ್ಣವಾದ ಅಧಿಕಾರ ನೀಡಿಲ್ಲ. ಹೀಗೆ ಪ್ರತಿಹಂತದಲ್ಲೂ ಎಸಿಬಿ ಅಧಿಕಾರಿಗಳು ಸರ್ಕಾರದ ಅನುಮತಿ ಪಡೆಯಲೇಬೇಕಾಗಿದೆ. ಎಸಿಬಿ ಠಾಣೆಗಳಲ್ಲಿ ದಾಖಲಾಗಿರುವ ಬಹುತೇಕ ಕೇಸ್​ಗಳು ಇಂದಿಗೂ ತನಿಖಾ ಹಂತದಲ್ಲೇ ಧೂಳು ತಿನ್ನುತ್ತಿವೆ. 3 ವರ್ಷ ಅವಧಿಯಲ್ಲಿ ರಾಜ್ಯದ ಈಶಾನ್ಯ ಭಾಗದಲ್ಲಿ 79 ಕೇಸ್ ದಾಖಲಾಗಿದ್ರೆ 28 ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಲಾಗಿದೆ. 4 ಪ್ರಕರಣಗಳಿಗೆ ಅಭಿಯೋಜಕರ ಅನುಮತಿ ಕೋರಲಾಗಿದ್ದು, ಇನ್ನೂ 47 ಪ್ರಕರಣಗಳು ತನಿಖಾ ಹಂತದಲ್ಲೇ ಇವೆ.

ಎಸಿಬಿ ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ! ಆದಾಯಕ್ಕೂ ಮೀರಿ ಆಸ್ತಿ ಸಂಪಾದಿಸಿರುವ ಅಧಿಕಾರಿಗಳು. ಸಾರ್ವಜನಿಕರಿಂದ ಲಂಚ ಸ್ವಿಕರೀಸುತ್ತಿದ್ದಾಗ ಸಿಕ್ಕಿ ಬಿದ್ದ ಲಂಚಕೋರರ ವಿರುದ್ಧ ಕಲ್ಯಾಣ ಕರ್ನಾಟಕದ ರಾಯಚೂರು, ಕೊಪ್ಪಳ, ಯಾದಗೀರಿ, ಬೀದರ್, ಕಲಬುರ್ಗಿ, ಬಳ್ಳಾರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಹಲವು ಪ್ರಕರಣಗಳು ದಾಖಲಾಗಿದೆ. ‘ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ’ಯಡಿ ಕೇಸ್ ದಾಖಲಾಗಿದೆ.ಆದ್ರೆ ನಿರೀಕ್ಷಿತ ಮಟ್ಟದಲ್ಲಿ ಭ್ರಷ್ಟರಿಗೆ ಶಿಕ್ಷೆ ಕೊಡಿಸುವ ಕೆಲಸವಾಗ್ತಿಲ್ಲ ಅಂತಾ ಆಕ್ರೋಶ ವ್ಯಕ್ತವಾಗುತ್ತಿದೆ.

ಒಟ್ನಲ್ಲಿ ಭ್ರಷ್ಟಾಚಾರವನ್ನು ಬುಡಸಮೇತ ಕಿತ್ತುಹಾಕುವ ಸರ್ಕಾರದ ಕನಸು ಇನ್ನೂ ನನಸಾಗಿಲ್ಲ. ಈ ಹೊತ್ತಲ್ಲೇ ‘ಎಸಿಬಿ’ ಇದ್ದೂ ಇಲ್ಲದಂತಾಗಿದ್ದು, ಸರ್ಕಾರ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಮೇಜರ್ ಸರ್ಜರಿಗೆ ಮುಂದಾಗಬೇಕಿದೆ.

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ