35 ಕೋಟಿ ಮೌಲ್ಯದ ಸರ್ಕಾರಿ ಜಮೀನು ಒತ್ತುವರಿ ತೆರವು, ಎಲ್ಲಿ?
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಕನ್ನಮಂಗಲ ಬಳಿ ಒತ್ತುವರಿ ಮಾಡಿಕೊಂಡಿದ್ದ ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಮೀನು ತೆರವು ಕಾರ್ಯ ಮಾಡಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಎಸಿ ಅರುಳ್ ಕುಮಾರ್ ನೇತೃತ್ವದಲ್ಲಿ ತೆರವು ಮಾಡಲಾಗುತ್ತಿದೆ. ದೇವನಹಳ್ಳಿ ತಾಲೂಕಿನ ಕನ್ನಮಂಗಲ ಸರ್ವೇ ನಂಬರ್ 73 ರಲ್ಲಿ 3 ಎಕರೆ ಸರ್ಕಾರಿ ಜಮೀನು ವಶಕ್ಕೆ ಪಡೆಯಲಾಗಿತ್ತು. ಇದು ಸುಮಾರು 35 ಕೋಟಿ ವೆಚ್ಚದ ಸರ್ಕಾರಿ ಜಮೀನಾಗಿದೆ. ಸದ್ಯ ಒತ್ತುವರಿ ತೆರವುಗೊಳಿಸಿ ಕಂದಾಯ ಇಲಾಖೆಯಿಂದ ತೋಟಗಾರಿಕೆ ಇಲಾಖೆಗೆ ಹಸ್ತಾಂತರಿಸಲಾಗಿದೆ.
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಕನ್ನಮಂಗಲ ಬಳಿ ಒತ್ತುವರಿ ಮಾಡಿಕೊಂಡಿದ್ದ ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಮೀನು ತೆರವು ಕಾರ್ಯ ಮಾಡಲಾಗುತ್ತಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಎಸಿ ಅರುಳ್ ಕುಮಾರ್ ನೇತೃತ್ವದಲ್ಲಿ ತೆರವು ಮಾಡಲಾಗುತ್ತಿದೆ. ದೇವನಹಳ್ಳಿ ತಾಲೂಕಿನ ಕನ್ನಮಂಗಲ ಸರ್ವೇ ನಂಬರ್ 73 ರಲ್ಲಿ 3 ಎಕರೆ ಸರ್ಕಾರಿ ಜಮೀನು ವಶಕ್ಕೆ ಪಡೆಯಲಾಗಿತ್ತು. ಇದು ಸುಮಾರು 35 ಕೋಟಿ ವೆಚ್ಚದ ಸರ್ಕಾರಿ ಜಮೀನಾಗಿದೆ. ಸದ್ಯ ಒತ್ತುವರಿ ತೆರವುಗೊಳಿಸಿ ಕಂದಾಯ ಇಲಾಖೆಯಿಂದ ತೋಟಗಾರಿಕೆ ಇಲಾಖೆಗೆ ಹಸ್ತಾಂತರಿಸಲಾಗಿದೆ.