ಬ್ಲಡ್ ಕ್ಯಾನ್ಸರ್​ನಿಂದ ಬಳಲುತ್ತಿದ್ದ 4 ದಿನದ ಮಗು ಜೀರೋ ಟ್ರಾಫಿಕ್​ನಲ್ಲಿ ಆಸ್ಪತ್ರೆಗೆ

| Updated By:

Updated on: Jul 30, 2020 | 9:15 PM

ಶಿವಮೊಗ್ಗ: ಬ್ಲಡ್ ಕ್ಯಾನ್ಸರ್​ನಿಂದ ಬಳಲುತ್ತಿದ್ದ ನಾಲ್ಕು ದಿನದ ಮಗುವನ್ನು ಶಿವಮೊಗ್ಗದಿಂದ ಉಡುಪಿಗೆ ಝೀರೋ ಟ್ರಾಫಿಕ್​ ಮೂಲಕ ಆಸ್ಪತ್ರೆಗೆ ಕರೆತರಲಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಅಶ್ವತ್ಥ್​ನಗರದ ದೇವೇಂದ್ರ ಮತ್ತು ಸುಪ್ರಿಯಾ ದಂಪತಿಯ 4 ದಿನದ ಮಗು ಬ್ಲಡ್ ಕ್ಯಾನ್ಸರ್​ನಿಂದ ಬಳಲುತ್ತಿತ್ತು. ಮಗುವನ್ನು ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮಗುವಿನ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ ಆಸ್ಪತ್ರೆಗೆ ರವಾನಿಸಬೇಕಿತ್ತು. ಹೀಗಾಗಿ ಶಿವಮೊಗ್ಗ ಎಸ್​ಪಿ ಕೆ.ಎಂ.ಶಾಂತರಾಜು ನೇತೃತ್ವದಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ […]

ಬ್ಲಡ್ ಕ್ಯಾನ್ಸರ್​ನಿಂದ ಬಳಲುತ್ತಿದ್ದ 4 ದಿನದ ಮಗು ಜೀರೋ ಟ್ರಾಫಿಕ್​ನಲ್ಲಿ ಆಸ್ಪತ್ರೆಗೆ
Follow us on

ಶಿವಮೊಗ್ಗ: ಬ್ಲಡ್ ಕ್ಯಾನ್ಸರ್​ನಿಂದ ಬಳಲುತ್ತಿದ್ದ ನಾಲ್ಕು ದಿನದ ಮಗುವನ್ನು ಶಿವಮೊಗ್ಗದಿಂದ ಉಡುಪಿಗೆ ಝೀರೋ ಟ್ರಾಫಿಕ್​ ಮೂಲಕ ಆಸ್ಪತ್ರೆಗೆ ಕರೆತರಲಾಗಿದೆ.

ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಅಶ್ವತ್ಥ್​ನಗರದ ದೇವೇಂದ್ರ ಮತ್ತು ಸುಪ್ರಿಯಾ ದಂಪತಿಯ 4 ದಿನದ ಮಗು ಬ್ಲಡ್ ಕ್ಯಾನ್ಸರ್​ನಿಂದ ಬಳಲುತ್ತಿತ್ತು. ಮಗುವನ್ನು ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ ಮಗುವಿನ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ ಆಸ್ಪತ್ರೆಗೆ ರವಾನಿಸಬೇಕಿತ್ತು. ಹೀಗಾಗಿ ಶಿವಮೊಗ್ಗ ಎಸ್​ಪಿ ಕೆ.ಎಂ.ಶಾಂತರಾಜು ನೇತೃತ್ವದಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿಸಿ ಌಂಬುಲೆನ್ಸ್ ಮೂಲಕ ಶಿವಮೊಗ್ಗದಿಂದ ಉಡುಪಿಗೆ ಮಗುವನ್ನು ಶಿಫ್ಟ್ ಮಾಡಲಾಗಿದೆ. ಈ ಕಾರ್ಯಕ್ಕೆ ಸಹಾಯ ಮಾಡಿದ ಎಲ್ಲರಿಗೂ ಪೋಷಕರು ಧನ್ಯವಾದ ಸಲ್ಲಿಸಿದ್ದಾರೆ.

Published On - 1:26 pm, Wed, 29 July 20