ಎರಡು ಕಾರುಗಳ ಮುಖಾಮುಖಿ: ಸ್ವಾಮೀಜಿ ಸೇರಿ ಸ್ಥಳದಲ್ಲೇ ನಾಲ್ವರು ದುರ್ಮರಣ
ಧಾರವಾಡ: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯೊಡೆದು ಸ್ವಾಮೀಜಿ ಸೇರಿದಂತೆ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟಿರುವ ಘಟನೆ ತಾಲೂಕಿನ ಯರಿಕೊಪ್ಪ ಗ್ರಾಮದ ಬಳಿ ಸಂಭವಿಸಿದೆ. ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದಲ್ಲಿ ಕುಂದಗೋಳ ಪಟ್ಟಣದ ಶಿವಾನಂದ ಮಠದ ಶ್ರೀ ಬಸವೇಶ್ವರ ಸ್ವಾಮೀಜಿ(50) ಮೃತಪಟ್ಟಿದ್ದಾರೆ. ಬೆಳಗ್ಗೆಯಷ್ಟೇ ಶಿವಾನಂದ ಮಠದ ಶಾಲೆಯ ಗಣರಾಜ್ಯೋತ್ಸವ ಧ್ವಜಾರೋಹಣವನ್ನು ಸ್ವಾಮೀಜಿ ನೆರವೇರಿಸಿದ್ದರು. ಭಕ್ತರೊಬ್ಬರ ಮದುವೆಗೆ ಧಾರವಾಡಕ್ಕೆ ಹೋಗುತ್ತಿದ್ದ ವೇಳೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹುಬ್ಬಳ್ಳಿ ತಾಲೂಕಿನ ನೂಲ್ವಿ ನಿವಾಸಿ ಶಂಕರಗೌಡ […]
ಧಾರವಾಡ: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯೊಡೆದು ಸ್ವಾಮೀಜಿ ಸೇರಿದಂತೆ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟಿರುವ ಘಟನೆ ತಾಲೂಕಿನ ಯರಿಕೊಪ್ಪ ಗ್ರಾಮದ ಬಳಿ ಸಂಭವಿಸಿದೆ. ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.
ಅಪಘಾತದಲ್ಲಿ ಕುಂದಗೋಳ ಪಟ್ಟಣದ ಶಿವಾನಂದ ಮಠದ ಶ್ರೀ ಬಸವೇಶ್ವರ ಸ್ವಾಮೀಜಿ(50) ಮೃತಪಟ್ಟಿದ್ದಾರೆ. ಬೆಳಗ್ಗೆಯಷ್ಟೇ ಶಿವಾನಂದ ಮಠದ ಶಾಲೆಯ ಗಣರಾಜ್ಯೋತ್ಸವ ಧ್ವಜಾರೋಹಣವನ್ನು ಸ್ವಾಮೀಜಿ ನೆರವೇರಿಸಿದ್ದರು. ಭಕ್ತರೊಬ್ಬರ ಮದುವೆಗೆ ಧಾರವಾಡಕ್ಕೆ ಹೋಗುತ್ತಿದ್ದ ವೇಳೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹುಬ್ಬಳ್ಳಿ ತಾಲೂಕಿನ ನೂಲ್ವಿ ನಿವಾಸಿ ಶಂಕರಗೌಡ ಪಾಟೀಲ್ (60), ಚಿಕ್ಕೋಡಿ ತಾಲೂಕಿನ ಕಬ್ಬೂರ ಗ್ರಾಮದ ಮಹಾದೇವ ಕಾಡೇಶಗೌಳ (55), ಮಾರುತಿ ಕುಕನೂರು(30) ಮೃತ ದುರ್ದೈವಿಗಳು.
Published On - 2:25 pm, Sun, 26 January 20